Friday, January 10, 2025
Homeಕರ್ನಾಟಕಬಳ್ಳಾರಿಯಲ್ಲಿ ಮಹಾತ್ಮ ಗಾಂಧೀಜಿಯವರ 155 ನೇ ಜಯಂತ್ಸೋತ್ಸವ ಗಾಂಧೀಜಿ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಲು ಸಂಸದ ಈ.ತುಕಾರಾಂ...

ಬಳ್ಳಾರಿಯಲ್ಲಿ ಮಹಾತ್ಮ ಗಾಂಧೀಜಿಯವರ 155 ನೇ ಜಯಂತ್ಸೋತ್ಸವ ಗಾಂಧೀಜಿ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಲು ಸಂಸದ ಈ.ತುಕಾರಾಂ ಕರೆ

ಬಳ್ಳಾರಿ: ಜಗತ್ತು ಕಂಡ ಮಹಾ ಶಾಂತಿಧೂತ ಹಾಗೂ ಅಹಿಂಸಾವಾದಿ ಮಹಾತ್ಮ ಗಾಂಧೀಜಿ ಅವರ ಜೀವನ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಈ.ತುಕಾರಾಂ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ರೈಲು ನಿಲ್ದಾಣ ಎದುರಗಡೆಯ ಜಿಲ್ಲಾಧಿಕಾರಿಗಳ ಕಚೇರಿ ಅವರಣದ ಗಾಂಧಿ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿಯವರ 155 ನೇ ಜಯಂತ್ಸೋತ್ಸವ (ಗಾಂಧಿ ಭಜನೆ ಹಾಗೂ ಸರ್ವಧರ್ಮ ಪ್ರಾರ್ಥನೆ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟçಪಿತ ಮಹಾತ್ಮ ಗಾಂಧೀಜಿಯವರು ವಿಶ್ವದ ಶಾಂತಿ ಸಾಧಕ ಅಗ್ರಗಣ್ಯರಲ್ಲಿ ಪ್ರಮುಖರು, ಇಡೀ ಜಗತ್ತೇ ನಿಬ್ಬೆರಗಾಗುವಂತೆ ಇನ್ನೊಬ್ಬರಿಗಾಗಿ ತಮ್ಮ ಬದುಕನ್ನು ಸವೆಸಿದ ಗಾಂಧೀಜಿಯವರನ್ನು ಹಾಗೂ ಅವರ ವಿಚಾರಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವುದು, ದಾಟಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.
ಇAದಿನ ಮಕ್ಕಳೆ, ನಾಳಿನ ಪ್ರಜೆಗಳು. ಇಂದಿನ ವಿದ್ಯಾರ್ಥಿಗಳೇ ಭವಿಷ್ಯದಲ್ಲಿ ಎಲ್ಲಾ ರಂಗಗಳಲ್ಲಿ ಬೆಳೆಯಬೇಕು. ಮಕ್ಕಳು ಜೀವನದಲ್ಲಿ ಗುರಿ ಇಟ್ಟುಕೊಂಡು ಮುನ್ನೆಡೆಯಬೇಕು. ತಮ್ಮ ಸಾಧನೆಗಳ ಗುರಿ ಮುಟ್ಟಿ, ಅಭಿವೃದ್ಧಿ ಹೊಂದುವುದರ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು ಎಂದರು.
ಅವಳಿ ಜಿಲ್ಲೆಗಳ ಅಭಿವೃದ್ಧಿಗೆ ಬದ್ಧ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ಯೋಜನಾಕಾರ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಹಂತ-ಹAತವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದರು.

ಈಗಾಗಲೇ ಬಳ್ಳಾರಿ ನಗರದ ವಿವಿಧ ರೈಲ್ವೇ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರದಿAದ ಅನುಮತಿ ಪಡೆದುಕೊಳ್ಳಲಾಗಿದೆ. ಸುಧಾಕ್ರಾಸ್‌ನ ಮೇಲ್ಸೇತುವೆ ಕಾಮಗಾರಿ ಮತ್ತು ಹೆಚ್.ಆರ್.ಗವಿಯಪ್ಪ ವೃತ್ತದ ಮೇಲ್ಸೇತುವೆ ವಿಸ್ತರಣಾ ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಮುಂದಿನ ದಿನಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. ಒಟ್ಟಾರೆ ಅವಳಿ ಜಿಲ್ಲೆಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಮಾದರಿ ಜಿಲ್ಲೆಗಳನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಬಳ್ಳಾರಿ ಜಿಲ್ಲೆಯ 5 ತಾಲ್ಲೂಕುಗಳಿಂದ ಒಟ್ಟು 59 ಗ್ರಾಮಗಳನ್ನು ಆಯ್ಕೆಮಾಡಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

ಈ ಭಾಗದ ರಾಷ್ಟಿçÃಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ತುರ್ತು ಚಿಕಿತ್ಸೆಗಾಗಿ ಹೊಸಪೇಟೆ ನಗರದಲ್ಲಿ 50 ಹಾಸಿಗೆಯುಳ್ಳ ಆಸ್ಪತ್ರೆಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದರು.

ದೇಶದ ಪ್ರಗತಿಯೆಡೆಗೆ ಮುನ್ನಡೆಸಿದ ದೂರದೃಷ್ಠಿಯುಳ್ಳ ವ್ಯಕ್ತಿಯಾಗಿದ್ದ ಲಾಲ್ ಬಹಾದ್ದೂರ್ ಶಾಸ್ತಿçà ಅವರು ಕೂಡ ಮಹಾತ್ಮಾ ಗಾಂಧಿ ಅವರ ರಾಜಕೀಯ ಚಿಂತನೆಗಳಿAದ ಅತ್ಯಂತ ಪ್ರಭಾವಿತರಾಗಿದ್ದರು ಎಂದು ಸಂಸದರು ತಿಳಿಸಿದರು.

ಮಹನೀಯರ ದಾರ್ಶನಿಕ ಬದುಕಿನ ಜೀವನ ಚಿತ್ರಣವನ್ನು ಶಾಲಾ ವಿದ್ಯಾರ್ಥಿಗಳಿಗೆ ತಿಳಿಸಿಕೊಡಲು ವಿಶೇಷ ಕೈಪಿಡಿ ರಚಿಸಿ, ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಿತರಿಸಬೇಕು. ಇದಕ್ಕೆ ಸಿಎಸ್‌ಆರ್ ನಡಿ ವಿಶೇಷ ಅನುದಾನ ಕಲ್ಪಿಸಲಾಗುವುದು ಎಂದು ಡಿಡಿಪಿಐ ಅಧಿಕಾರಿಗಳಿಗೆ ಸೂಚಿಸಿದರು.
ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ರಾಷ್ಟçಪಿತ ಮಹಾತ್ಮ ಗಾಂಧೀಜಿಯವರು ಶಾಂತಿ ಮಂತ್ರದಿAದ ಸ್ವಾತಂತ್ರö್ಯ ದೊರಕಿಸಿಕೊಟ್ಟವರು. ಜಗತ್ತಿನ ಇತರೆ ರಾಷ್ಟçಗಳು ಅಹಿಂಸಾ ಮಾರ್ಗದ ಪ್ರಾಮುಖ್ಯತೆ ತಿಳಿದುಕೊಳ್ಳಬೇಕಿದೆ ಎಂದು ಹೇಳಿದರು.

ಮಹಾತ್ಮ ಗಾಂಧೀಜಿ, ಲಾಲ್ ಬಹುದ್ದೂರ್ ಶಾಸ್ತಿçà ಸೇರಿದಂತೆ ಮಹನೀಯರು ಹಾಕಿಕೊಟ್ಟ ಉತ್ತಮ ಹಾದಿಯಲ್ಲಿ ಪ್ರತಿಯೊಬ್ಬರೂ ಸಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡಿದರು.
ಬಹುಮಾನ ವಿಜೇತರು:
ಪ್ರೌಢಶಾಲೆ ವಿಭಾಗ:
ಪ್ರಥಮ-ಸ್ಪೂರ್ತಿಗೌಡ(ಎಸ್‌ಟಿ ಪೀಟರ್ ಪ್ರೌಢಶಾಲೆ)
ದ್ವಿತೀಯ-ಎಸ್.ಎಸ್.ಸಾಯಿಚೇತನ್(ಸಾಹಿತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕಂಪ್ಲಿ) ತೃತೀಯ-ನಯನ(ಎಂಬಿಎಸ್‌ಎಲ್ ಪ್ರೌಢಶಾಲೆ, ಬಳ್ಳಾರಿ)
ಸಮಾಧಾನಕರ-ಜ್ಯೋತಿಕಾಬಾಯಿ (ಸರ್ಕಾರಿ ಪ್ರೌಢಶಾಲೆ, ಬೆಳಗಲ್ ತಾಂಡಾ)
ಪದವಿಪೂರ್ವ ಕಾಲೇಜು ವಿಭಾಗ:
ಪ್ರಥಮ-ಬಾಲಾಜಿ(ಸರ್ಕಾರಿ (ಮಾಪು) ಪದವಿ ಪೂರ್ವ ಕಾಲೇಜು ಬಳ್ಳಾರಿ)
ದ್ವಿತೀಯ-ಎಮ್.ದೇವಿರಮ್ಮ(ಸರ್ಕಾರಿ ಪದವಿ ಪೂರ್ವ ಕಾಲೇಜು, ತೆಕ್ಕಲಕೋಟೆ)
ತೃತೀಯ-ಪ್ರಿಯದರ್ಶಿನಿ.ಆರ್.ಪಿ(ಬಾಲಕೀಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಕಂಪ್ಲಿ).
ಪದವಿ/ಸ್ನಾತಕೋತ್ತರ ವಿಭಾಗ:
ಪ್ರಥಮ-ನಾಗರಾಜ(ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ)
ದ್ವಿತೀಯ-ಆರ್.ರಮೇಶ್(ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ)
ತೃತೀಯ-ವಿವೇಕಾನಂದ ಸ್ವಾಮಿ(ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ).
ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತಿçà ಅವರ ಭಾವಚಿತ್ರಗಳಿಗೆ ಗಣ್ಯರು ಪುಷ್ಪನಮನ ಸಲ್ಲಿಸಿದರು ಮತ್ತು ಕಾರ್ಯಕ್ರಮ ಆರಂಭಕ್ಕೂ ಮುನ್ನ ಗಾಂಧಿಭವನ ಆವರಣದ ಗಾಂಧೀಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಬಳ್ಳಾರಿ ತಾಲ್ಲೂಕಿನ ಇಬ್ರಾಹಿಂಪುರದ ಎಸ್.ಎಂ.ಹುಲುಗಪ್ಪ ಮತ್ತು ತಂಡದಿAದ ಮಹಾತ್ಮ ಗಾಂಧೀಜಿ ಜಯಂತಿಯ ಅಂಗವಾಗಿ ಗಾಂಧೀಜಿ ಕುರಿತು ಭಜನಾ ಗೀತೆಗಳನ್ನು ಪ್ರಸ್ತುತ ಪಡಿಸಿದರು.
ಬಳಿಕ ಶಾಲಾ ಮಕ್ಕಳು ಸರ್ವಧರ್ಮ ಗ್ರಂಥಗಳ ಬೋಧನೆ ಮಾಡಿದ್ದು, ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಜೆ.ಎಸ್.ಆಂಜನೇಯುಲು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಉಪವಿಭಾಗಾಧಿಕಾರಿ ಪ್ರಮೋದ್, ತಹಶೀಲ್ದಾರ ಗುರುರಾಜ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ, ಸಿಬ್ಬಂದಿಗಳಾದ ಹನುಮಂತಪ್ಪ, ವಿಜಯ್‌ಕುಮಾರ್.ಹೆಚ್., ಮಲ್ಲೇಶಪ್ಪ.ವೈ, ಹನುಮೇಶ್.ಹೆಚ್., ಅಭಿಷೇಕ್.ಹೆಚ್., ತಿಪ್ಪೇಸ್ವಾಮಿ.ಟಿ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES

Most Popular