ಬೆಂಗಳೂರು : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಹಾಗೂ ವ್ಯಾಪಾರಿಗಳು ಮತ್ತು ಸ್ವಯಂ ಉದ್ಯೋಗಿ ವ್ಯಕ್ತಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್-ವ್ಯಾಪಾರಿಗಳು) ಯೋಜನೆಗಳಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳನ್ನು ನೊಂದಾಯಿಸಲು ದಿನಾಂಕ: 15-01-2026 ರಿಂದ 15-03-2026ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಬಹುದಾಗಿದೆ. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ. ರಿಂದ 200ರೂ.ವರೆಗೆ ವಂತಿಕೆ ಪಾವತಿ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ 3000ರೂ. ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.
ಇದನ್ನು ಓದಿ : ಗೆಳತಿ ಸೋಫಿ ಶೈನ್ ಜೊತೆ 2ನೇ ಮದುವೆಯಾದ ಶಿಖರ್ ಧವನ್
ಇದನ್ನು ಓದಿ : ಶೀಘ್ರವೆ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ : ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ
ಈ ಯೋಜನೆಯಡಿ ನರೇಗಾಕಾರ್ಮಿಕರು, ಎಸ್‌ಹೆಚ್‌ಜಿ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು, ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊAದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಚೇರಿಗಳು, ಎಲ್.ಐ.ಸಿ.ಯ ಶಾಖಾ ಕಚೇರಿಗಳು, ಇಪಿಎಫ್‌ಒ ಮತ್ತು ಇಎಸ್‌ಐಸಿ ಕಚೇರಿ ಹಾಗೂ ಕಾರ್ಮಿಕ ಸಹಾಯವಾಣಿ 155214, ಟೋಲ್ ಫ್ರಿಕಾಲ್ 1800-267-6888ಗೆ ಸಂಪರ್ಕಿಸಬಹುದಾಗಿದೆ.

ರಾಯಚೂರು ಜಿಲ್ಲೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಪ್ರವಾಸ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರಾಮಪ್ಪ ಎಂ. ಅವರು ಫೆ.24ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅವರು ಫೆ.23ರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿAದ ನಿರ್ಗಮಿಸಿ ರೈಲು ಮಾರ್ಗವಾಗಿ ರಾತ್ರಿ 8 ಗಂಟೆಗೆ ರಾಯಚೂರು ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಫೆ.24ರ ಬೆಳಿಗ್ಗೆ 6 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ 7 ಗಂಟೆಗೆ ಮಂತ್ರಾಲಯದ ದೇವಸ್ಥಾನಕ್ಕೆ ಭೇಟಿ ನೀಡುವರು. ಬೆಳಿಗ್ಗೆ 9 ಗಂಟೆಗೆ ಮಂತ್ರಾಲಯದಿAದ ನಿರ್ಗಮಿಸಿ 10.30ಕ್ಕೆ ರಾಯಚೂರಗೆ ಆಗಮಿಸಿ ಪಕ್ಷದ ಕಚೇರಿಗೆ ಭೇಟಿ ನೀಡುವರು. ಬೆಳಿಗ್ಗೆ 11ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಭೋವಿ ಅಭಿವೃದ್ಧಿ ನಿಗಮದ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 4ಕ್ಕೆ ರಾಮನಗರ ಕ್ಯಾಂಪ್ ಹಾಗೂ ಪಂಚಮುಖಿ ಗಾಣದಾಳ ಗ್ರಾಮದಲ್ಲಿನ ಭೋವಿ ಕಾಲೋನಿಗಳಲ್ಲಿ ಭೇಟಿ ನೀಡಿ ಸಮಾಜದ ಕುಂದುಕೊರತೆಗಳ ಹಾಗೂ ನಿಗಮದ ಸೌಲಭ್ಯಗಳ ಬಗ್ಗೆ ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ನಿಗಮದ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Unorganized workers will get Rs 3000. How to apply for pension