Sunday, December 22, 2024
Homeಕರ್ನಾಟಕಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್​ ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ....!

ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್​ ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ….!

ಸುತ್ತೋಲೆಯಲ್ಲಿ ಉಲ್ಲೇಖ ಮಾಡಿರುವಂತೆ. ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ.

ಬೆಂಗಳೂರು: ಅನ್ನ ಯೋಜನೆ ಮತ್ತು ಬಿಪಿಎಲ್​ ಪಡಿತರ ಚೀಟಿ ಪಡೆದವರ ವಿರುದ್ದ ರಾಜ್ಯ ಸರ್ಕಾರ ಸಿಟ್ಟಾಗಿದ್ದು, ಈ ನಡುವೆ ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ. ಸುತ್ತೋಲೆಯನ್ನು ಹೊರಡಿಸಲಾಗಿದೆ.

ಸುತ್ತೋಲೆಯಲ್ಲಿ ಉಲ್ಲೇಖ ಮಾಡಿರುವಂತೆ. ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ.

  1. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ; 2. ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು. 3. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ
    ಹೊಂದಿರುವ ಕುಟುಂಬಗಳು,
  2. ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು,
  3. ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು,
    ಆದ್ದರಿಂದ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ಚಿಕ್ಕಮಗಳೂರು ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸಲು ಕೋರಿದೆ. ತಪ್ಪಿದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸ ಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರಧಾನ್ಯಗಳ ಬಾಬು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದೆಂದು ತಿಳಿಯಪಡಿಸಿದೆ.

Here’s some important information for Antyodaya Anna Yojana and BPL ration card holders.

RELATED ARTICLES

Most Popular