ಮಂಡ್ಯ :- ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾದ ಹಿನ್ನೆಲೆಯಲ್ಲಿ ಹುಡುಗನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿದ್ದು, ಯುವಕನ ಮನೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ಜರುಗಿದೆ.
ಮದ್ದೂರು ತಾಲೂಕಿನ ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚಗಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಈ ಘಟನೆ ಜರುಗಿದ್ದು, ಯುವತಿಯ ತಂದೆ ಚನ್ನೇಗೌಡನಿಗೂ ಸಣ್ಣ ಪುಟ್ಟ ಗಾಯವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ : PM Kisan Money : ಪಿಎಂ ಕಿಸಾನ್ 22ನೇ ಕಂತಿನ ಹಣ ಈ ದಿನದಂದು ಬರಲಿ
ಇದನ್ನು ಮಿಸ್ ಮಾಡದೇ ಓದಿ : ಡೆಬಿಟ್ ಕಾರ್ಡ್ ಇಲ್ಲದೇ ATMನಿಂದ ಹಣ ಹಿಂಪಡೆಯುವುದು ಹೇಗೆ ಇಲ್ಲಿದೆ ಮಾಹಿತಿ
ಚುಂಚಗಹಳ್ಳಿ ಗ್ರಾಮದ ವಿನೋದ್ ಎಂಬ ಯುವಕ ಪಕ್ಕದ ಮನೆಯ ಯುವತಿ ಕಾವ್ಯ ಎಂಬ ಯುವತಿಯನ್ನು ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಕಳೆದ ಗುರುವಾರದಂದು ಯುವತಿಯ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದಾರೆ.

ಈ ಘಟನೆಯಿಂದ ಕುಪಿತಗೊಂಡಿದ್ದ ಯುವತಿಯ ತಂದೆ ಚನ್ನೇಗೌಡ ಶನಿವಾರ ಬೆಳಿಗ್ಗೆ ಯುವಕನ ಮನೆಗೆ ಬೆಂಕಿ ಹಚ್ಚುವ ವೇಳೆ ಯುವಕನ ಮನೆಯಲ್ಲಿ ಯಾರು ಇಲ್ಲದ ಪರಿಣಾಮ ಹೆಚ್ಚಿನ ಪ್ರಾಣಾಪಾಯ ಸಂಭವಿಸಿಲ್ಲ. ತಕ್ಷಣವೇ ಅಕ್ಕ ಪಕ್ಕದ ಮನೆಯವರು ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಸ್ಥಳಕ್ಕೆ ಮದ್ದೂರು ಅಗ್ನಿಶಾಮಕ ದಳದವರು ಆಗಮಿಸುವಷ್ಟರಲ್ಲಿ ಮನೆಯಲ್ಲಿದ್ದ ಪೀಠೋಪಕರಣ, ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಅಡುಗೆ ಸಾಮಗ್ರಿ ಸೇರಿದಂತೆ ಮನೆ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ಸಂಬಂಧ ಸ್ಥಳಕ್ಕೆ ಮದ್ದೂರು ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ನವೀನ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ : ಗಿರೀಶ್ ರಾಜ್ ಮಂಡ್ಯ
A young woman who married for love, her father-in-law set fire to her son-in-law’s house