ರಾಜ್ಯದಲ್ಲಿ ಜೂನ್ ಒಳಗೆ ಸ್ಥಳೀಯ ಸಂಸ್ಥೆ ಚುನಾವಣೆ CM ಸಿದ್ದರಾಮಯ್ಯ

ಕಾರವಾರ : ಮುಂದಿನ ಜೂನ್ ತಿಂಗಳ ಒಳಗಾಗಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಯನ್ನು ನಡೆಸಲಾಗುವುದು. ಈ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇದನ್ನು ಮಿಸ್‌ ಮಾಡದೇ ಓದಿ : ಪ್ರೀತಿಸಿ ಮದುವೆಯಾದ ಯುವತಿ , ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ನರಸಿಂಹ ಕವಚಸ್ತೋತ್ರ ಎಲ್ಲಾ ಅಪಾಯಗಳಿಂದ ಸಂಪೂರ್ಣ ರಕ್ಷಣೆಗಾಗಿ ಶಕ್ತಿಯುತ ಪ್ರಾರ್ಥನೆ

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನಲ್ಲಿ ಭಾನುವಾರ ಮಂಜಗುಣಿ-ಗಂಗಾವಳಿಸೇತುವೆಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಗೋಕರ್ಣ ವನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಬೇಡಿಕೆ ಇದೆ. ಚುನಾವಣೆಗಳು ಮುಗಿದ ನಂತರ ಗೋಕರ್ಣವನ್ನು ಪಟ್ಟಣ ಪಂಚಾಯಿತಿ ಯಾಗಿ ಮೇಲ್ದರ್ಜೆಗೇ ಮೇಲ್ದರ್ಜೆಗೇರಿಸಲಾಗುವುದು ಎಂದು ಭರವಸೆ ನೀಡಿದರು. ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಪುನರ್‌ಪ್ರಸ್ತಾವ ಸಲ್ಲಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

Siddaramaiah
Siddaramaiah

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ “450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ, ಯಲ್ಲಾಪುರ ತಾಲ್ಲೂಕಿನ ಖಾನಾಪುರ ತಾಳಗುಪ್ಪ ರಾಜ್ಯ ಹೆದ್ದಾರಿ 93 ರಲ್ಲಿನ ನೂತನ ಸೇತುವೆ, ಯಲ್ಲಾಪುರ ಪಟ್ಟಣದ ನಿರೀಕ್ಷಣಾ ಮಂದಿರದ ಹೊಸ ಕಟ್ಟಡ ಹಾಗೂ ಮುಂಡಗೋಡ ತಾಲ್ಲೂಕಿನ ಹೊಸ ಪ್ರವಾಸಿ ಮಂದಿರದ ಉದ್ಘಾಟನೆಯನ್ನು ನೆರವೇರಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಜೊತೆಗೆ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ಕೊಟ್ಟು, ಕರ್ನಾಟಕವನ್ನು ಪ್ರಗತಿಯ ಹೊಸದಿಕ್ಕಿನಲ್ಲಿ ಮುನ್ನಡೆಸುತ್ತಿದ್ದೇವೆ ಎಂಬುದಕ್ಕೆ ಇಂದಿನ ಕಾರ್ಯಕ್ರಮವೇ ಸಾಕ್ಷಿ ಎಂದು ಹೇಳಿದ್ದಾರೆ.

ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಮಂಕಾಳ ವೈದ್ಯ, ಮಾಜಿ ಸಚಿವರೂ, ಶಾಸಕರು ಆದ ಆರ್.ವಿ.ದೇಶಪಾಂಡೆ, ಶಾಸಕರುಗಳಾದ ಶಿವರಾಮ್ ಹೆಬ್ಬಾರ್, ಸತೀಶ್ ಸೈಲ್, ಭೀಮಣ್ಣ ನಾಯ್ಕ ಸೇರಿ ಹಲವು ಪ್ರಮುಖರು ಸಮಾರಂಭದಲ್ಲಿ ಉಪಸ್ಥಿತರಿದ್ದರು.