ಕ್ಯಾರೆಟ್ ಬಾದಾಮ್ ಮಿಲ್ಕ್ ಶೇಕ್‌

ಹೆಚ್ಚಿನ ಪ್ರಮಾಣದ ವಿಟಮಿನ್ ಪ್ರೋಟಿನ್ ಹೊಂದಿರುವ ಆಹಾರ ತರಕಾರಿ ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು

ಬೇಕಾಗುವ ಸಾಮಗ್ರಿಗಳು:ಕ್ಯಾರೆಟ್ – 1, ಮಧ್ಯಮ ಗಾತ್ರಬಾದಾಮಿ – 10ರಿಂದ 12ಖರ್ಜೂರ – 8ರಿಂದ 10ಹಾಲು – ಅರ್ಧ ಲೀಟರ್ಸಕ್ಕರೆ – ಅಗತ್ಯವಿರುವಂತೆ

ಮೊದಲಿಗೆ ಬಾದಾಮಿ ಹಾಗೂ ಖರ್ಜೂರವನ್ನು ಒಂದು ಬೌಲ್‌ನಲ್ಲಿ ಹಾಕಿ ಅದಕ್ಕೆ ನೀರನ್ನು ಹಾಕಿ 30 ನಿಮಿಷಗಳ ಕಾಲ ನೆನೆಸಿಡಿ. ಬಾದಾಮಿ ಚರ್ಮವನ್ನು ತೆಗೆದುಹಾಕಿ ಮತ್ತು ಪಕ್ಕಕ್ಕೆ ಇರಿಸಿ.ಮಿಕ್ಸಿ ಜಾರಿನಲ್ಲಿ ಹೆಚ್ಚಿದ ಕ್ಯಾರೆಟ್ ಮತ್ತು ಸಿಪ್ಪೆ ತೆಗೆದ ಸ್ವಲ್ಪ ಬಾದಾಮಿಯನ್ನು ಅನ್ನು ಸೇರಿಸಿಕೊಂಡು ಚೆನ್ನಾಗಿ ರುಬ್ಬಿಕೊಳ್ಳಿ.ನಂತರ ಖರ್ಜೂರ ಹಾಗೂ ಅದರ ನೀರನ್ನು ಸೇರಿಸಿಕೊಂಡು ನುಣ್ಣಗೆ ರುಬ್ಬಿಕೊಳ್ಳಿ.

ಈಗ ಒಂದು ಬೌಲ್‌ನಲ್ಲಿ ಈ ಮಿಶ್ರಣವನ್ನು ಹಾಕಿಕೊಂಡು ಅದಕ್ಕೆ ಹಾಲನ್ನು ಸೇರಿಸಿಕೊಂಡು ಕುದಿಯಲು ಬಿಡಿ.ನಂತರ ಅದಕ್ಕೆ ಏಲಕ್ಕಿಯನ್ನು ಪುಡಿ ಮಾಡಿ ಹಾಕಿ 2-3 ನಿಮಿಷ ಕುದಿಯಲು ಬಿಡಿ.ಹಾಲು ಕುದಿದ ಬಳಿಕ ಗ್ಯಾಸ್ ಆಫ್ ಮಾಡಿ ಅದಕ್ಕೆ ಬೆಲ್ಲದ ಪುಡಿಯನ್ನು ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಕತ್ತರಿಸಿದ ಬಾದಾಮಿಯಿಂದ ಅಲಂಕರಿಸಿ .

ಈಗ ಬಿಸಿಬಿಸಿ ಕ್ಯಾರೆಟ್ ಬಾದಾಮ್ ಮಿಲ್ಕ್ ಸವಿಯಲು ಸಿದ್ಧ