ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2026: ಪದವೀಧರರಿಗೆ ಸುವರ್ಣಾವಕಾಶ 104 ಹುದ್ದೆಗಳಿಗೆ ಅರ್ಜಿ ಆಹ್ವಾನ

Bank of Baroda Recruitment 2026 Notification Image
ಬ್ಯಾಂಕ್ ಆಫ್ ಬರೋಡಾದಲ್ಲಿ (Bank of Baroda) ವೃತ್ತಿಜೀವನ ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಇಲ್ಲಿದೆ ಒಂದು ಪ್ರಮುಖ ಮಾಹಿತಿ. ಬ್ಯಾಂಕ್ ಆಫ್ ಬರೋಡಾ ಸಂಸ್ಥೆಯು ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ.
Bank of Baroda Recruitment 2026 Notification Image
Recruitment for various posts in Bank of Baroda begins

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಮತ್ತು ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ನೇಮಕಾತಿ ಕುರಿತಾದ ಸಂಪೂರ್ಣ ವಿವರಗಳು ಇಲ್ಲಿವೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2026 ವಿವರ
ಬ್ಯಾಂಕ್ ಆಫ್ ಬರೋಡಾ ಒಟ್ಟು 104 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಪ್ರಮುಖವಾಗಿ ಎವಿಪಿ (AVP II) ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳು ಸೇರಿವೆ. ವಿವಿಧ ವಿಭಾಗಗಳಲ್ಲಿ ಹಂಚಿಕೆಯಾಗಿರುವ ಹುದ್ದೆಗಳ ವಿವರ ಈ ಕೆಳಗಿನಂತಿದೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಎವಿಪಿ II ಗ್ರೂಪ್ ಹೆಡ್: 04 ಹುದ್ದೆಗಳು
ಟೆರಿಟರಿ ಹೆಡ್: 17 ಹುದ್ದೆಗಳು
ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್: 70 ಹುದ್ದೆಗಳು
ವೆಲ್ತ್ ಸ್ಟ್ರಾಟೆಜಿಸ್ಟ್: 13 ಹುದ್ದೆಗಳು

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ಇದರೊಂದಿಗೆ ಆಯಾ ಹುದ್ದೆಗಳಿಗೆ ಸಂಬಂಧಿಸಿದಂತೆ ನಿಗದಿತ ವರ್ಷಗಳ ಕೆಲಸದ ಅನುಭವ ಹೊಂದಿರುವುದು ಕಡ್ಡಾಯವಾಗಿದೆ.

ವಯೋಮಿತಿಗೆ ಸಂಬಂಧಿಸಿದಂತೆ, ಮಾರ್ಚ್ 1, 2026 ಕ್ಕೆ ಅನ್ವಯವಾಗುವಂತೆ ಕನಿಷ್ಠ 24 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಸರ್ಕಾರದ ನಿಯಮದಂತೆ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಸಿಗಲಿದೆ.

ಅರ್ಜಿ ಶುಲ್ಕದ ವಿವರ
ಅರ್ಜಿ ಸಲ್ಲಿಸುವ ಸಾಮಾನ್ಯ (General), ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 850 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಇನ್ನುಳಿದಂತೆ ಮಹಿಳಾ ಅಭ್ಯರ್ಥಿಗಳು, ಎಸ್‌ಸಿ, ಎಸ್‌ಟಿ ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರಿಯಾಯಿತಿ ದರದಲ್ಲಿ 175 ರೂಪಾಯಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಶುಲ್ಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳು
ಅಭ್ಯರ್ಥಿಗಳ ಆಯ್ಕೆಯು ಮೂರು ಪ್ರಮುಖ ಹಂತಗಳಲ್ಲಿ ನಡೆಯಲಿದೆ. ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದಾದ ನಂತರ ಸೈಕೋಮೆಟ್ರಿಕ್ ಪರೀಕ್ಷೆ ಮತ್ತು ಅಂತಿಮವಾಗಿ ವೈಯಕ್ತಿಕ ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕ್ ನಿಯಮದಂತೆ ಆಕರ್ಷಕ ವೇತನ ಶ್ರೇಣಿ ಮತ್ತು ಇತರೆ ಸೌಲಭ್ಯಗಳು ದೊರೆಯಲಿವೆ.

ಅರ್ಜಿ ಸಲ್ಲಿಸಲು ಮಾರ್ಚ್ 27, 2026 ರಿಂದ ಲಿಂಕ್ ಲಭ್ಯವಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 16, 2026 ಕೊನೆಯ ದಿನವಾಗಿದೆ. ಆಸಕ್ತರು ಬ್ಯಾಂಕ್ ಆಫ್ ಬರೋಡಾ ಅಧಿಕೃತ ವೆಬ್‌ಸೈಟ್ ಮೂಲಕ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.

FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು)

  1. ಬ್ಯಾಂಕ್ ಆಫ್ ಬರೋಡಾ ನೇಮಕಾತಿಯಲ್ಲಿ ಒಟ್ಟು ಎಷ್ಟು ಹುದ್ದೆಗಳಿವೆ?
    ಬ್ಯಾಂಕ್ ಆಫ್ ಬರೋಡಾ ಈ ಬಾರಿ ಒಟ್ಟು 104 ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ
  2.  ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?
    ಅರ್ಹ ಅಭ್ಯರ್ಥಿಗಳು ಏಪ್ರಿಲ್ 16, 2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.
  3. ಈ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
    ಲಖಿತ ಪರೀಕ್ಷೆ, ಸೈಕೋಮೆಟ್ರಿಕ್ ಟೆಸ್ಟ್ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಧಿಕೃತ ವೆಬ್​ಸೈಟ್​ ಲಿಂಕ್​ಗಾಗಿ: ಇಲ್ಲಿ ಕ್ಲಿಕ್​ ಮಾಡಿ  

ಈ ಮಾಹಿತಿಯು ನಿಮಗೆ ಉಪಯುಕ್ತವೆನಿಸಿದರೆ, ಈಗಲೇ ನಿಮ್ಮ ಸ್ನೇಹಿತರು ಮತ್ತು ಉದ್ಯೋಗಾಕಾಂಕ್ಷಿಗಳೊಂದಿಗೆ ಹಂಚಿಕೊಳ್ಳಿ.