Monday, December 23, 2024
Homeಕರ್ನಾಟಕಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ; ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ..!

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ; ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ..!

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳ ಮುಂದಿನ ವಿದ್ಯಾಬ್ಯಾಸಕ್ಕಾಗಿ ಅನೇಕೆ ಸವಲತ್ತುಗಳನ್ನು, ಸೌಲಭ್ಯಗಳನ್ನು ನೀಡುವುದನ್ನು ನಾವು ಕಾಣಬಹುದಾಗಿದೆ.

ನೂರಾರು ಕಾರ್ಯಕ್ರಮಗಳ ಮೂಲಕ ಕರ್ನಾಟಕ ಸರ್ಕಾರವು ಪ.ಜಾತಿಯವರಿಗೆ ಸ್ಕಾಲರ್‌ಶಿಪ್‌ ನೀಡುತ್ತದೆ. ಅದರಂತೆ ಈ ಬಾರಿ ಕೂಡ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ ಮಾಡಿದ್ದು, ಅದರ ವಿವರ ಹೀಗಿದೆ.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕಾರ್ಯಕ್ರಮ ಮತ್ತು ಪ್ರೋತ್ಸಾಹಧನ ಕಾರ್ಯಕ್ರಮಗಳಡಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿಯ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ www.sw.kar.nic.in ಅಥವಾ https://ssp.postmatric.karnataka.gov.in/homepage.aspx ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಬಹುದು.

*ಸೂಚನೆಗಳು ಹೀಗಿದ್ದು, ಅರ್ಹ ಅಭ್ಯರ್ಥಿಗಳು ಇವುಗಳನ್ನು ಗಮನವಿಟ್ಟು ಓದಿ..
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಗಳಲ್ಲಿ ವ್ಯಾಸಂಗ ಮಾಡಿ ಪ್ರಥಮ ಬಾರಿಗೆ, ಪ್ರಥಮ ಪ್ರಯತ್ನದಲ್ಲಿ ಪಾಸು ಮಾಡಿರಬೇಕಾಗಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸಿ ವಿದ್ಯಾಥಿವೇತನ ಪಡೆದ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಹಿಂದಿನ ಸಾಲಿನಲ್ಲಿ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿಗೆ ಅರ್ಜಿ ಸಲ್ಲಿಸಬಹುದು. ಕಳೆದ ಸಾಲಿನಲ್ಲಿ ವಿವಿಧ ಕಾರಣಗಳಿಂದ ವಿದ್ಯಾರ್ಥಿ ವೇತನ ಮಂಜೂರಾಗದ ಹಾಗೂ ರಿಜೆಕ್ಟ್ ಆಗಿರುವ ವಿದ್ಯಾರ್ಥಿಗಳು ಮಾತ್ರ ಪ್ರಸಕ್ತ ಸಾಲಿನಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗಳಿಗೆ ಎನ್‌ಪಿಸಿಐ ಆಧಾರ್ ಸೀಡಿಂಗ್ ಮಾಡಿಸಿರಬೇಕು. ತೊಂದರೆಯಿದ್ದಲ್ಲಿ ಅಂಚೆ ಕಚೇರಿಯಲ್ಲಿ ಖಾತೆಯನ್ನು ತೆರೆಯಬೇಕು. ಪ್ರಸಕ್ತ ಸಾಲಿನಿಂದ ಪ್ರತಿ ಶಾಲಾ ಮುಖ್ಯೋಪಾಧ್ಯಾಯರು, ಹಾಗೂ ಕಾಲೇಜು ಪ್ರಾಂಶುಪಾಲರು ಗಳಿಗೆ ಸಬಲೀಕರಣ ಅಧಿಕಾರಿ ಅಥವಾ ಸಂಸ್ಥೆಯ ನೋಡಲ್ ಅಧಿಕಾರಿಯನ್ನು ನಿಯೋಜಿಸಿದ್ದು, ತಾಲ್ಲೂಕು ಲಾಗಿನ್‌ನಲ್ಲಿ ಸೇರ್ಪಡೆ ಮಾಡಿಕೊಳ್ಳಲು ಕ್ರಮವಹಿಸಬೇ ಆನ್‌ಲೈನ್ ಅರ್ಜಿ ಮೂಲಕ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಪ್ರತಿ ಶೈಕ್ಷಣಿಕ ಸಾಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸದಿ ಬಳಿಕ ಅಧಿಕಾರಿಗಳು ಇ-ಕೆವೈಸಿ ವಿವರಗಳನ್ನು ಅಪ್ಡೇಟ್ ಮಾಡಿ ಅಪ್ರೂವ್ ಮಾಡುತ್ತಾರೆ ಅಂತ ಇಲಾಖೆ ಅಧೀಕಾರಿಗಳು ಮಾಹಿತಿ ನೀಡಿದ್ದಾರೆ.

RELATED ARTICLES

Most Popular