BREAKING: ಹೆಂಡ್ತಿಯಿಂದಲೇ ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್‌…!?

Former Karnataka DG and IGP Om Prakash

ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಪ್ರಾಥಮಿಕ ಮೂಲಗಳ ಪ್ರಕಾರ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು ಎನ್ನಲಾಗಿದ್ದು, ಅವರ ವಾಸವಿದ್ದ ಮನೆಯಲ್ಲಿಯೇ ಕೊಲೆಯಾಗಿ ಸಾವನ್ನಪ್ಪಿದ್ದಾರೆ ಅಂತ ತಿಳಿದು ಬಂದಿದೆ. ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಅಂತ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಘಟನ ಸ್ಥಳಕ್ಕೆ ಎಚ್ಎಸ್ಆರ್ ಲೇಔಟ್ ಸಿಬ್ಬಂದಿ ಭೇಟಿ ನೀಡಿದ್ದು, ಸದ್ಯ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ತಿಳಿಸಲಾಗಿದೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

Former Karnataka DG and IGP Om Prakash
Image Credit to Original Source

ಸದ್ಯ ಘಟನ ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪ್ರಾಥಮಿಕ ತನಿಖೆಯನ್ನು ನಡೆಸುತ್ತಿದ್ದಾರೆ ಅಂತ ತಿಳಿದು ಬಂದಿದೆ.ಇನ್ನು ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿ ಪಲ್ಲವಿಯವರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಅವರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರ ಎನ್ನಲಾಗಿದೆ. 2015 ಮಾರ್ಚ್‌ನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕವಾಗಿದ್ದ ಓಂ ಪ್ರಕಾಶ್ ಅವರು 2017ರಲ್ಲಿ ನಿವೃತ್ತಿ ಹೊಂದಿದ್ದರು.

Former Karnataka DG and IGP Om Prakash
Image Credit to Original Source

981ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದ 68 ವರ್ಷದ ಓಂ ಪ್ರಕಾಶ್ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ತಮ್ಮ ಪತ್ನಿ ಜೊತೆಗೆ ವಾಸವಾಗಿದ್ದರು ಅಂತ ತಿಳಿದು ಬಂದಿದೆ.