Karnataka SSLC Exam-1 Results : ನಾಳೆ SSLC Exam ಫಲಿತಾಂಶ ಪ್ರಕಟ..! ಫಲಿತಾಂಶ ಈ ರೀತಿ ಚೆಕ್ ಮಾಡಿ

karnataka sslc results 2025

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಮೇ 2 ರಂದು ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಈ 2025ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶಕ್ಕಾಗಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು.

ಇದನ್ನು ಮಿಸ್‌ ಮಾಡದೇ ಓದಿ: ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ


Karnataka SSLC Results 2025

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ( Karnataka SSLC Exam-1 Results ) ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.

ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

ಇದನ್ನು ಮಿಸ್‌ ಮಾಡದೇ ಓದಿ: LPG rates | ದೇಶದ ಜನತೆಗೆ ಗುಡ್‌ನ್ಯೂಸ್ ಕೆಂದ್ರ ಸರ್ಕಾರದಿಂದ LPG ಗ್ಯಾಸ್ ಸಿಲಿಂಡರ್‌ ಬೆಲೆ ಇಳಿಕೆ..!

ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ 2025 ಅಧಿಕೃತ ವೆಬ್ಸೈಟ್ಗಳ ವಿವರ ಹೀಗಿದೆ: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕರ್ನಾಟಕ ಬೋರ್ಡ್ ಅಧಿಕೃತ ವೆಬ್ಸೈಟ್ಗಳನ್ನು ಪರಿಶೀಲಿಸಬಹುದು. ಈ ವೆಬ್ಸೈಟ್ಗಳು ಈ ಕೆಳಗಿನಂತಿವೆ:

kseab.karnataka.gov.in
pue.karnataka.gov.in
karresults.nic.in