CM Siddaramaiah : OBC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Siddaramaiah

ಬೆಂಗಳೂರು: AICC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅದರಂಥೆ ಅವರು  ನಾನು ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.‌ ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ.

Siddaramaiah
Image credit: https://www.facebook.com/Siddaramaiah.Official

ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ.‌ ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದಾರೆ. ಸಭೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಅಂತ ತಿಳಿಸಿದ್ದಾರೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

Siddaramaiah
Image credit: https://www.facebook.com/Siddaramaiah.Official