Siddaramaiah | ಹೈಮಾಂಡ್‌ ನಿರ್ಧಾರಕ್ಕೆ ನಾನು ಬದ್ದ ಸಿಎಂ ಸಿದ್ದರಾಮಯ್ಯ

Siddaramaiah

ಬೆಂಗಳೂರು: ಹೈಮಾಂಡ್‌ ನಿರ್ಧಾರಕ್ಕೆ ನಾನು ಬದ್ದ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ದೆಹಲಿಗೆ ತೆರಳುವ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಎಲ್ಲವನ್ನು ಹೈಕಮಾಂಡ್ ಸಮ್ಮುಖದಲ್ಲಿ ಚರ್ಚಿಸುತ್ತೇನೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ಮಾತಾಡ್ತೀನಿ. ಹೈ ಕಮಾಂಡ್ ಜೊತೆ ಕೂತು ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಗುತ್ತೆ. ಸಭೆಯಲ್ಲಿ ರಾಹುಲ್ ಗಾಂಧಿ ಸಹ ಇರುತ್ತಾರೆ. 3-4 ಪ್ರಮುಖ ನಾಯಕರನ್ನು ಕರೆಸಿ ಚರ್ಚಿಸುತ್ತೇನೆ. ಎಲ್ಲರ ಸಮ್ಮುಖದಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳಲಾಗುತ್ತೆ ಎಂದರು.

ಇದನ್ನು ಮಿಸ್‌ ಮಾಡದೇ ಓದಿ: ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಂಡರೆ, ಕಿಡ್ನಿಗಳಲ್ಲಿ ಸಮಸ್ಯೆ ಆಗಿರಬಹುದು..!

ಇದನ್ನು ಮಿಸ್‌ ಮಾಡದೇ ಓದಿ: ಮದುವೆ ದಿನವೇ ವಧುವಿಗೆ ಭೀಕರ ಅಪಘಾತ; ಆಸ್ಪತ್ರೆಯಲ್ಲೇ ತಾಳಿ ಕಟ್ಟಿದ ವರ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

 

ಈ ನಡುವೆ ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದ ಮಾತಿಗೆ ಮಾಧ್ಯಮಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಕರೆದರೆ ದೆಹಲಿಗೆ ಹೋಗುವೆ ಅಂತ ತಿಳಿಸಿದರು.

dk shivakumar
dk shivakumar

ಇನ್ನೂ ಈ ನಡುವೆ ರಾಜ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಸಂಬಂಧಪಟ್ಟಂತೆ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡಿರುವ ಹೈಕಮಾಡ್‌ ಇನ್ನೇರಡು ದಿನದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಕರೆದು ಮಾತನಾಡಲಿದ್ದಾರೆ ಎನ್ನಲಾಗಿದೆ. ಈ ಸಮಯದಲ್ಲಿ ಪ್ರಸಕ್ತ ರಾಜಕೀಯ ಬಿಕ್ಕಟ್ಟು ಸೇರಿದಂತೆ ಇತರೆ ಮಾಹಿತಿಗಳನ್ನು ಪಾರ್ಟಿಯ ಹಿರಿಯ ನಾಯಕರುಗಳ ಜೊತೆಗೆ ಚರ್ಚಿಸುತ್ತ ಅಂತಿಮ ನಿರ್ಧಾರಕ್ಕೆ ರಾಹುಲ್‌ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಬರಲಿದ್ದಾರೆ ಎನ್ನಲಾಗಿದೆ.

rahul gandhi and dk shivakumar
rahul gandhi and dk shivakumar

ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿದ್ದು, ಇದು ಹೊಸ ಚರ್ಚೆಗೆ ಕಾರಣವಾಗಿದೆ. ಇದಲ್ಲದೇ ಇಂದು ರಾಹುಲ್‌ ಗಾಂಧಿಯನ್ನು ಮಲ್ಲಿಕಾರ್ಜುನ ಖರ್ಗೆಯವರು ಭೇಟಿಯಾಗಲಿದ್ದು, ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಡಿಕೆ ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನ ನೀಡದೇ ಹೋದರೆ ಕರ್ನಾಟಕದಾದ್ಯಂತ ಹೋರಾಟಕ್ಕೆ ಒಕ್ಕಲಿಗ ಜನಾಂಗ ಮುಂದಾಗಲಿದೆ ಎನ್ನಲಾಗಿದೆ. ಈ ಬಗ್ಗೆ ಇಂದು ನಡೆಯಲಿರುವ ಒಕ್ಕಲಿಗರ ಸಂಘದ ಸಭೆಯಲ್ಲಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ. ಇಂದಿನ ಸಭೆಯಲ್ಲಿ ಎಲ್ಲವನ್ನು ಅಂತಿಮ ನಿರ್ಧಾರವನ್ನು ತೆಗೆದುಕೊಂಡ ಬಳಿಕ ಅಂತಿಮ ಸಂದೇಶ ಹೊರಬೀರಲಿದೆ.

CM Siddaramaiah said that I agree with Hymand’s decision.