Siddaramaiah | 2023 ರಂತೆ 2028 ರಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ

CM Siddaramaiah's advice
CM Siddaramaiah's advice

ಬೆಳಗಾವಿ: 2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ , ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದರು.

ಇದನ್ನು ಮಿಸ್ ಮಾಡದೇ ಓದಿ: ಆನ್‌ಲೈನ್‌ನಲ್ಲಿ ಫುಡ್‌ ಆರ್ಡರ್‌ ಮಾಡುವ ಮುನ್ನ ಇದನ್ನು ಮಿಸ್‌ ಮಾಡದೇ ಓದಿ…!

ಇದನ್ನು ಮಿಸ್‌ ಮಾಡದೇ ಓದಿ: ಈ ಪಾನೀಯಗಳು ಮದ್ಯಕ್ಕಿಂತ ಹೆಚ್ಚು ಅಪಾಯಕಾರಿ.

ಗಾದೆ ಮಾತೆನಂತೆ ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.

CM Siddaramaiah's advice
CM Siddaramaiah’s advice

ಜನರ ನಾಡಿಮಿಡಿತ ಕಾಂಗ್ರೆಸ್ ಸರ್ಕಾರಕ್ಕೆ ತಿಳಿದಿದೆ: 2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಎರಡು ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008 , 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು , ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.

CM Siddaramaiah's advice
CM Siddaramaiah’s advice

ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ: ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕ್ಆರಕ್ಕೆ ಬರಲಿದೆ. 2013 ರಲ್ಲಿ 2023 ರಲ್ಲಿಯೂ ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ. “‘ನಾನು’ ಹೋದರೆ ಹೋದೇನು” ಅಂತ ಕನಕದಾಸರು ಹೇಳಿದ್ದರು. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು.

Congress will come to power in 2028 as well as in 2023 CM Siddaramaiah