ಬೆಳಗಾವಿ : ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 930 ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲಾಗಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತç ಇಲಾಖೆಯ ಸಚಿವರಾದ ಕೆ. ಹೆಚ್ ಮುನಿಯಪ್ಪ ಅವರು ತಿಳಿಸಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ: ಮೊಬೈಲ್ ಕ್ಯಾಂಟೀನ್ ತೆರೆಯಲು ಸಿಗಲಿದೆ 5 ಲಕ್ಷ ರೂ.ಗಳ ಸಹಾಯಧನ ಹೀಗೆ ಅರ್ಜಿ ಸಲ್ಲಿಸಿ
ಇದನ್ನು ಮಿಸ್ ಮಾಡದೇ ಓದಿ: Gold Rate Today : ಮತ್ತೆ ದುಬಾರಿಯಾದ ಚಿನ್ನ, ಬೆಳ್ಳಿ ಬೆಲೆ, ಇಲ್ಲಿದೆ ಇಂದಿನ ದರ
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟು ಬಿ.ಪಿ.ಎಲ್ ಪಡಿತರ ಚೀಟಿಗಳು ಎ.ಪಿ.ಎಲ್ ಪಡಿತರ ಚೀಟಿಗಳಾಗಿ ಪರಿವರ್ತನೆಯಾಗಿವೆ ಎಂದು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಕೇಳಿದ ಚುಕ್ಕಿ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಈ ಕೆಳಕಂಡ ವಿಧಗಳಲ್ಲಿ 7,76,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಲಾಗಿರುತ್ತದೆ.
CBDT Income Group Annual Income > 1,20,000
2. GSTN Gross Turnover >25 Lacs
3. MCA Individual as Director
4. PDS Duplicate RC Inter State
5. PDS Duplicate RC Intra State
6. PDS RC Member Above 100 Years
7. PDS Silent RC >12 Months
8. PDS Silent RC 6-12 Months
9.PDS Single Member Below 18 Years
10. PM KISAN Land Holding >7.5 Acres
11. UIDAI Aadhaar Status Deceased
12. Vehicle Ownership value Owning LIGHT MOTOR VEHICLE
13. Vehicle Ownership value Owning
14. Vehicle Ownership value Owning OTHER THAN MENTIONED
ABOVE

ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆಯುವ ಬಗ್ಗೆ ಸರ್ಕಾರವು 2017 ರಲ್ಲಿ ಈ ಕೆಳಕಂಡಂತೆ ಹೊರಗಿಡುವ ಮಾನದಂಡಗಳನ್ನು ರೂಪಿಸಿದೆ.
1. ವೇತನವನ್ನು ಗಣನೆಗೆ ಎಲ್ಲಾ ಖಾಯಂ ನೌಕರರು ಅಂದರೆ ತೆಗೆದುಕೊಳ್ಳದೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮAಡಳಿಗಳು/ ನಿಗಮಗಳು/ ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡAತೆ ಆದಾಯ ತೆರಿಗೆ/ಸೇವಾ ತೆರಿಗೆ/ ಜಿಎಸ್‌ಟಿ/ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು,
2. ಗ್ರಾಮೀಣ ಪ್ರದೇಶಗಳಲ್ಲಿ 03 ಹೆಕ್ಟರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು.
3. ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು.

4.ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಸದರಿ ಮಾನದಂಡಗಳ ಆಧಾರದ ಮೇಲೆ ಅನರ್ಹವೆಂದು ಕಂಡುಬAದ ಆದ್ಯತಾ ಪಡಿತರ ಚೀಟಿಗಳನ್ನು ((PHH) ) ಆದ್ಯತೇತರ ಪಡಿತರ ಚೀಟಿಗಳನ್ನಾಗಿ (NPHH) ಪರಿವರ್ತಿಸಲು ಕ್ರಮವಹಿಸಲಾಗುತ್ತಿದೆ.
ಈ ರೀತಿ ತಾತ್ಕಾಲಿಕವಾಗಿ ಆದ್ಯತೇತರ ಪಡಿತರ ಚೀಟಿಯನ್ನಾಗಿ (NPHH) ಪರಿವರ್ತಿಸಲಾದ ಪಡಿತರ ಚೀಟಿದಾರರು ಆದ್ಯತಾ ಪಡಿತರ ಚೀಟಿ ಹೊಂದಲು PHH) ಅರ್ಹರಾಗಿದ್ದಲ್ಲಿ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬAಧಪಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಅದರಂತೆ ಒಂದು ವೇಳೆ ಅರ್ಹ ಫಲಾನುಭವಿಯ ಆದ್ಯತಾ ಪಡಿತರ ಚೀಟಿಯನ್ನು ರದ್ದು ಪಡಿಸಿದಲ್ಲಿ, ಸಂಬಂಧಪಟ್ಟ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತç ಇಲಾಖೆಯ ಸಚಿವರಾದ ಕೆ. ಹೆಚ್ ಮುನಿಯಪ್ಪ ಅವರು ಉತ್ತರ ನೀಡಿರುತ್ತಾರೆ. ಎ.ಪಿ.ಎಲ್ ಆಗಿ ಪರಿವರ್ತನೆಯಾಗಿರುವ ಈ ಪಡಿತರ ಚೀಟಿಗಳ ಕುಟುಂಬದ ಸದಸ್ಯರುಗಳು ಉದ್ಯೋಗ ನಿಮಿತ್ತ ಬೇರೆ ಬೇರೆ ಪ್ರದೇಶದಲ್ಲಿ ವಾಸ ಮಾಡುತ್ತಿರುವುದರಿಂದ ಅವರನ್ನು ಹೊರತುಪಡಿಸಿ ಗ್ರಾಮೀಣ ಭಾಗದಲ್ಲಿ ವಾಸವಿರುವ ಇವರುಗಳ ಅವಲಂಬಿತ ತಂದೆ ತಾಯಂದಿರ ಹೆಸರನಲ್ಲೂ ಹೊಸ ಬಿ. ಪಿ. ಎಲ್ ಪಡಿತರ ಚೀಟಿಗಳನ್ನು ನೀಡಲು ಸರ್ಕಾರ ಕೈಗೊಂಡಿರುವ ಕ್ರಮಗಳೇನು? ಎಂಬ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 698 ಕ್ಕೆ ಸಚಿವರು ಉತ್ತರಿಸಿದ್ದಾರೆ.
These criteria are mandatory to get BPL’ ration card













Follow Me