ಬೆಂಗಳೂರು: ಡಿ.21 ರ ಭಾನುವಾರದಂದು ಕರ್ನಾಟಕದಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 0 ರಿಂದ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ.
ಇದನ್ನು ಮಿಸ್ ಮಾಡದೇ ಓದಿ: ಈ ಬಟ್ಟೆ ಧರಿಸಿ ಕಚೇರಿ ಬರಬೇಡಿ: ರಾಜ್ಯ ಸರಕಾರಿ ನೌಕರರಿಗೆ ಮಹತ್ವದ ಸೂಚನೆ….!
ಇದನ್ನು ಮಿಸ್ ಮಾಡದೇ ಓದಿ: 2026ರ ಟಿ20 ವಿಶ್ವಕಪ್ಗೆ ಭಾರತ ತಂಡ ಪ್ರಕಟ, ಇಲ್ಲಿದೆ ಆಟಗಾರರ ಪಟ್ಟಿ
ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜೊತೆಗೆ ಅತೀ ಸೂಕ್ಷ್ಮ ಪ್ರದೇಶಗಳೆಂದು ಗುತುತಿಸಲ್ಪಟ್ಟ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಬಟ್ಟಿಗಳು, ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳನ್ನೊಳಗೊಂಡು ಬಸ್ಸು ನಿಲ್ದಾಣ, ರೈಲ್ವೆ ನಿಲ್ದಾಣಗಳು ಸೇರಿದಂತೆ ಕರ್ನಾಟಕದಾದ್ಯಂತ ಸಿಕಾ ಬೂತ್‌ಗಳಲ್ಲಿ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಯವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವ್ಯಾಕ್ಸಿನೇಟರ್‌ಗಳಾಗಿ ಕಾರ್ಯನಿರ್ವಹಿಸುತ್ತಾರೆ.

ಪಲ್ಸ್ ಪೋಲಿಯೋ ಲಸಿಕೆ ನೀಡಲು ರಾಜ್ಯದ ಎಲ್ಲಾ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ, ಅಂಗನವಾಡಿಗಳಲ್ಲಿ, ಶಾಲೆಗಳಲ್ಲಿ ಲಸಿಕಾ ಬೂತ್ ಗಳನ್ನು ತೆರೆಯಲಾಗುತ್ತದೆ. ಪ್ರತಿಯೊಂದು ತಾಲ್ಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ಮತ್ತು ಮೇಲ್ವಿಚಾರಕರನ್ನು ನೇಮಿಸಿ ಕಾರ್ಯಕ್ರಮ ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಹಿಂದೆ 5 ವರ್ಷದ ಒಳಗಿನ ಮಕ್ಕಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಡಿಸೆಂಬರ್ 21 ರ ಭಾನುವಾರದಂದು ಪುನಃ ಪೋಲಿಯೋ ಲಸಿಕೆ ಹಾಕಿಸಬೇಕು. ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಎಲ್ಲಾ ಲಸಿಕಾ ಬೂತ್‌ಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು 0-5 ವರ್ಷದ ಮಕ್ಕಳಿಗೆ ಉಚಿತವಾಗಿ ನೀಡಲಾಗುವುದು. ಸಾರ್ವಜನಿಕರು ಭಾನುವಾರದಂದು ತಮ್ಮ 0 ರಿಂದ 5 ವರ್ಷದ ಎಲ್ಲಾ ಮಕ್ಕಳನ್ನು ಕರೆತಂದು ಪೋಲಿಯೋ ಲಸಿಕೆ ಹಾಕಿಸಿಕೊಸಿಕೊಳ್ಳಿ.
A National Pulse Polio Vaccination Program was organized across Karnataka on Sunday, December 21 to ensure that all children between 0 and 5 years of age are vaccinated.













Follow Me