ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ವೃಂದದ 877 ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಇದನ್ನು ಮಿಸ್ ಮಾಡದೇ ಓದಿ: ಸಿ.ಸಿ.ಟಿ.ವಿ. ಅಳವಡಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಆದೇಶದಲ್ಲಿ ಉಲ್ಲೇಖ ಮಾಡಿರುವ ಪತ್ರದಲ್ಲಿ, ಉಲ್ಲೇಖಿತ (1)ರ ಪತ್ರಗಳಲ್ಲಿ ಕೋರಲಾದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇದ್ದ ವಿವಿಧ ವೃಂದದ 877 ಅರವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಮತ್ತು CA ಸುಧಾರಣೆ ಇಲಾಖೆಗಳೊಂದಿಗೆ ಸಮಾಲೋಚಿಸಲಾಗಿರುತ್ತದೆ.

ಅರೆ ಅದರನ್ವಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ವಿವಿಧ ವೃಂದದ 877 ವೈದ್ಯಕೀಯ ಹುದ್ದೆಗಳನ್ನು ನೇರನೇಮಕಾತಿಯಿಂದ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡದಿರುವ ಹಿನ್ನೆಲೆಯಲ್ಲಿ Q : DPAR 6 PLX 2012, ໖: 06.11.2013 2 2 10(2) ಇಲಾಖೆಯ ಸಹಮತಿಯಿದೆ ಎಂದು ಪರಿಭಾವಿಸಿ ಸದರಿ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರನೇಮಕಾತಿಯಿಂದ ಭರ್ತಿ ಮಾಡಲು ಕ್ರಮ ಕೈಗೊಳ್ಳಬಹುದೇ ಎಂಬ ಬಗ್ಗೆ ಸಿಆಸು ಇಲಾಖೆಯ ಅಭಿಪ್ರಾಯವನ್ನು ಕೋರಲಾಗಿತ್ತು.
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು (ಸೇವಾ ನಿಯಮಗಳು) ಟಿಪ್ಪಣಿಯ ಸಂಖ್ಯೆ: ಸಿಆಸುಇ 38 ಹೆಚ್‌ಪಿ 2025, ದಿನಾಂಕ: 18/10/2025 ರಲ್ಲಿ ಆರ್ಥಿಕ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ವಿವಿಧ ವೃಂದದ 877 ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ಸಹಮತಿ ನೀಡದಿರುವ ಹಿನ್ನೆಲೆಯಲ್ಲಿ ಅಧಿಸೂಚನೆ ಸಂಖ್ಯೆ: DPAR 06 PLX 2012, ದಿನಾಂಕ: 06.11.2013ರ ನಿಯಮ 10(2) ರನ್ವಯ ಆರ್ಥಿಕ ಇಲಾಖೆಯ ಸಹಮತಿ ಇದೆ ಎಂದು ಪರಿಭಾವಿಸಿ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಮಾಡಲು ಮುಖ್ಯ ಕಾರ್ಯದರ್ಶಿಯವರ ಅನುಮೋದನೆಯೊಂದಿಗೆ ಸೂಚಿಸಿರುತ್ತದೆ ಅಂತ ತಿಳಿಸಿದೆ.
Applications are invited for direct recruitment of `877′ paramedical posts in the Health Department soon















Follow Me