ಸುಗಮ ಪ್ರಯಾಣಕ್ಕೆ ನೂತನ ಆಟೋ ರಿಕ್ಷಾ ಪ್ರೀ-ಪೈಯ್ಡ್ ಕೌಂಟರ್ ಆರಂಭ : ಶಿವಮೊಗ್ಗ ಡಿಸಿ

New auto rickshaw pre-paid counter started for smooth journey: Shimoga DC
New auto rickshaw pre-paid counter started for smooth journey: Shimoga DC

ಶಿವಮೊಗ್ಗ : ಪ್ರಯಾಣಿಕರ ಸುಗಮ ಪ್ರಯಾಣಕ್ಕಾಗಿ ನಗರದ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣದ ಬಳಿ ನೂತನವಾಗಿ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್‌ಗಳನ್ನು ತೆರೆಯಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಟೋ ರಿಕ್ಷಾ ಸಂಘಗಳು ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿದ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನು ಮಿಸ್‌ ಮಾಡದೇ ಓದಿ: ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ : ಸುಪ್ರೀಂ ಕೋರ್ಟ್

ಇದನ್ನು ಮಿಸ್‌ ಮಾಡದೇ ಓದಿ: ‘IRCTC’ ಸರ್ವರ್ ಡೌನ್ : `ತಾತ್ಕಾಲ್ ಟಿಕೆಟ್’ ಬುಕ್ ಮಾಡಲು ಪ್ರಯಾಣಿಕರ ಪರದಾಟ

ಈಗಾಗಲೇ ನಗರದ ರೈಲ್ವೆ ನಿಲ್ದಾಣದ ಬಳಿ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ಇದೇ ರೀತಿಯಲ್ಲಿ ನಗರದ ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲೂ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್ ತೆರೆಯಲು ಮುಂದಾಗಿದ್ದು, ಇನ್ನು ಮುಂದೆ ಬಸ್ ಪ್ರಯಾಣಿಕರು ಇದರ ಅನುಕೂಲ ಪಡೆಯಬಹುದು ಎಂದರು.

New auto rickshaw pre-paid counter started for smooth journey Shimoga DC
New auto rickshaw pre-paid counter started for smooth journey Shimoga DC

ಜ.15 ರ ನಂತರ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳ ಬಳಿ ಪ್ರಿ-ಪೈಯ್ಡ್ ಕೌಂಟರ್ ಪ್ರಾರಂಭಿಸುವAತೆ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಕಾರ್ಯದರ್ಶಿವರಿಗೆ ಅನುಮೋದನೆ ನೀಡಲಾಗಿದ್ದು ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿ ಕೌಂಟರ್‌ಗಳಿಗೆ ಸ್ಥಳ ನಿಗದಿಪಡಿಕೊಡಬೇಕು ಹಾಗೂ ಈ ಬಗ್ಗೆ ಪೊಲೀಸ್ ಹಾಗೂ ಆರ್‌ಟಿಓ ಇಲಾಖೆಗಳು ಜಂಟಿಯಾಗಿ ತಪಾಸಣೆ ನಡೆಸಿ ಜಾಹಿರಾತು ಫಲಕಗಳು ಹಾಗೂ ಘೋಷಣೆಯ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಮುಂಜಾನೆ 4.45, ಬೆಳಿಗ್ಗೆ 11 ಗಂಟೆ, ಸಂಜೆ 7.30 ಹಾಗೂ ರಾತ್ರಿ 9.30 ರ ಸಮಯದಲ್ಲಿ ಪ್ರಯಾಣಿಕರು ಮನೆಗೆ ತೆರಳಲು ಆಟೋ ರಿಕ್ಷಾಗಳನ್ನು ಹೆಚ್ಚಾಗಿ ಬಳಸುತ್ತಿದ್ದಾರೆ. ಹಾಗಾಗಿ ರೈಲ್ವೆ ನಿಲ್ದಾಣದ ಬಳಿ ಇರುವ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್‌ಗೆ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಿ ಹಾಗೂ ಕೌಂಟರ್‌ನಲ್ಲಿ ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ ಪ್ರಯಾಣಿಕರ ಸಂಚಾರವನ್ನು ಸುಗಮ ಮಾಡಬೇಕು ಎಂದು ಚೈತನ್ಯ ರೂರಲ್ ಡೆವಲಪ್‌ಮೆಂಟ್ ಕಾರ್ಯದರ್ಶಿಯವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯಲ್ಲಿರುವ ಆಟೋ ಚಾಲಕರು ಕಡ್ಡಾಯವಾಗಿ ಪರವಾನಗಿ ಮತ್ತು ಬ್ಯಾಡ್ಜ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸರಿಯಾಗಿಟ್ಟುಕೊಂಡು ಶಿಸ್ತಿನಿಂದ ಕಾರ್ಯ ನಿರ್ವಹಿಸಬೇಕು. ಪ್ರೀ ಪೈಯ್ಡ್ಗೆ ಆಟೋ ರಿಕ್ಷಾಗಳನ್ನು ನೋಂದಣಿ ಮಾಡಿಕೊಳ್ಳಬೇಕು. ರೈಲ್ವೆ ಹಾಗೂ ಬಸ್ ನಿಲ್ದಾಣಗಳ ಒಳಗೂ ಹೊರಗೂ ಆಟೋ ರಿಕ್ಷಾ ಪ್ರಿ ಪೈಯ್ಡ್ ಕುರಿತು ಫಲಕಗಳು ಹಾಗೂ ಘೋಷಿಸುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಇದಕ್ಕೆ ಆಟೋ ಸಂಘಗಳು ಕೂಡ ಸಹಕಾರ ನೀಡಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ಕಾರ್ಯಪ್ಪ, ಆರ್‌ಟಿಓ ಅಧೀಕ್ಷಕ ಶಶಿಧರ್, ಸಂಚಾರಿ ಪೊಲೀಸ್ ನಿರೀಕ್ಷಕ ದೇವರಾಜ್, ಮಹಾನಗರಪಾಲಿಕೆಯ ಅಧಿಕಾರಿ, ಚೈತನ್ಯ ರೂರಲ್ ಡೆವಲಪ್‌ಮೆಂಟ್ ಅಧಿಕಾರಿಗಳು ಹಾಗೂ ಆಟೋ ರಿಕ್ಷಾ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು.