ಶಿವಮೊಗ್ಗ: 2026ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ದಿ.30/12/2025 ರಿಂದ ದಿ.28/02/2026 ರವರೆಗೆ https://serviceonline.gov.in.karnataka/URL ಬಳಸಿ ಅರ್ಜಿ ಸಲ್ಲಿಸುವುದು ಕಡ್ಡಾಯ. ನಿಗದಿಪಡಿಸಿದ ದಿನಾಂಕದ ಒಳಗೆ ಪಾಸ್‌ಗಳ ವಿತರಣೆ/ನವಿಕರಿಸಬೇಕಾಗಿರುತ್ತದೆ.
ಇದನ್ನು ಮಿಸ್ ಮಾಡದೇ ಓದಿ: ‘IRCTC’ ಸರ್ವರ್ ಡೌನ್ : `ತಾತ್ಕಾಲ್ ಟಿಕೆಟ್’ ಬುಕ್ ಮಾಡಲು ಪ್ರಯಾಣಿಕರ ಪರದಾಟ
ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ಶಿವಮೊಗ್ಗ ವಿಭಾಗ ಎಂಬ ಕೌಂಟರ್ ಆಯ್ಕೆ ಮಾಡುವುದು ಹಾಗೂ 2025ನೇ ಸಾಲಿನಲ್ಲಿ ಪಾಸ್ ಪಡೆದಿರುವ ಫಲಾನುಭವಿಗಳು ಪಾಸ್ ನವೀಕರಣಕ್ಕಾಗಿ ಘಟಕ ವ್ಯವಸ್ಥಾಪಕರ ಕೌಂಟರ್ ಆಯ್ಕೆ ಮಾಡಲು ಸೂಚಿಸಿದೆ.
ಫಲಾನುಭವಿಗಳು ಪಾಸ್ ಪಡೆಯಲು ಬರುವಾಗ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರಿಂದ ದೃಢೀಕರಿಸಿದ ಮಾನ್ಯತೆ ಇರುವ ವಿಕಲಚೇತನರ ಗುರುತಿನ ಚೀಟಿ ಪುಸ್ತಕ ಅಥವಾ ಯುಡಿಐಡಿ ಸ್ಮಾರ್ಟ್ ಕಾರ್ಡ್, ಡಿಸೆಬಿಲಿಟಿ ಸರ್ಟಿಫಿಕೇಟ್, ಫಲಾನುಭವಿಗಳ ಇತ್ತೀಚಿನ 3 ಭಾವಚಿತ್ರ, 2025ನೇ ಸಾಲಿನಲ್ಲಿ ಪಡೆದಿರುವ ವಿಕಲಚೇತನರ ಮೂಲ ಪಾಸ್(ನವೀಕರಣಕ್ಕಾಗಿ), ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ನೀಡಬೇಕು(ಈ ಎಲ್ಲಾ ದಾಖಲಾತಿಗಳು ಜೆಪಿಜಿ ಅಥವಾ ಪಿಡಿಎಫ್ ನಮೂನೆಯಲ್ಲಿ ಅಡಕಗೊಂಡಿರಬೇಕು). ಪಾಸ್ ಶುಲ್ಕ ರೂ.660 ಗಳನ್ನು ನಗದು ಮೂಲಕ ಪಾವತಿಸಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಕಬ್ಬು ತೂಕದಲ್ಲಿ ವಂಚನೆ ಮಾಡುವವವರ ವಿರುದ್ದ ಕ್ರಮ: ಸಕ್ಕರೆ ಸಚಿವ ಶಿವಾನಂದ ಪಾಟೀಲ್ ರೈತರು
ಪೂರೈಸುವ ಕಬ್ಬು ತೂಕದಲ್ಲಿ ಮೋಸ ಮಾಡಿದ್ದು ಸಾಬೀತಾದಲ್ಲಿ ಅಂತಹ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುತ್ತೇವೆ.
ಕಬ್ಬು ಬೆಳೆಗಾರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಒಟ್ಟು 81 ಸಕ್ಕರೆ ಕಾರ್ಖಾನೆಗಳಿದ್ದು, ಅಲ್ಲಿ ಡಿಜಿಟಲ್ ವೇ ಬ್ರಿಡ್ಜ್‌ಗಳಿವೆ. ಸರ್ಕಾರದಿಂದಲೇ ಈ ವರ್ಷ 12 ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕದ ಯಂತ್ರ ಅಳವಡಿಕೆಗಾಗಿ ಈಗಾಗಲೇ ಟೆಂಡರ್ ಕರೆಯಲಾಗಿದೆ.

ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ತೂಕ ಮಾಡುವ ಯಂತ್ರದಲ್ಲಿ ಮೋಸ ಆಗುತ್ತಿರುವ ಬಗ್ಗೆ ಯಾವುದೇ ರೈತರು ಇದುವರೆಗೂ ದೂರು ಸಲ್ಲಿಸಿಲ್ಲ. ರೈತರು ದೂರು ಸಲ್ಲಿಸಿ, ಬಳಿಕ ಇದು ಸಾಬೀತಾದಲ್ಲಿ ಅಂತಹ ರೈತರಿಗೆ 2 ಲಕ್ಷ ರೂ. ಬಹುಮಾನ ಕೊಡುತ್ತೇವೆ ಎಂದು ಸರ್ಕಾರ ಘೋಷಿಸಿತ್ತು. ಇದೀಗ ಈ ಬಹುಮಾನ ಮೊತ್ತವನ್ನು 5 ಲಕ್ಷ ರೂ. ಗಳಿಗೆ ಹೆಚ್ಚಿಸಲಾಗಿದೆ. ಒಂದು ವೇಳೆ ತೂಕದಲ್ಲಿ ಮೋಸ ಮಾಡುವ ಯಾವುದೇ ದೂರು ಸಾಬೀತಾದಲ್ಲಿ, ಅಂತಹ ಕಾರ್ಖಾನೆಯವರು ಯಾರೇ ಆಗಿರಲಿ, ಎಷ್ಟೇ ದೊಡ್ಡವರಾಗಿರಲಿ, ನಿಶ್ಚಿತವಾಗಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಅಂತಹ ಕಾರ್ಖಾನೆ ನಿಲ್ಲಿಸುವ ಕ್ರಮಕ್ಕೂ ಮುಂದಾಗುತ್ತೇವೆ. ಕಾರ್ಖಾನೆಗಳ ಒಳಗೆ ನಾವು ಆಧುನಿಕ ತೂಕದ ಯಂತ್ರ ಅಳವಡಿಕೆಗೆ ಮುಂದಾಗಿದ್ದು, ಕಾರ್ಖಾನೆಯವರು ಅನುಮತಿ ನೀಡುತ್ತಿಲ್ಲ. ಇದರಿಂದ ಸಮಸ್ಯೆ ಉಂಟಾಗಿದೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ಲಕ್ಷ್ಮಣ ಸವದಿ ಅವರು ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವರಾದ ಶಿವಾನಂದ ಪಾಟೀಲ್ ಅವರ ಮಾತು
Shimoga Applications invited for concessional bus pass/renewal for physically challenged persons













Follow Me