ಬಳ್ಳಾರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಿಯುಸಿ ಹೊರತುಪಡಿಸಿ ಉಳಿದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ/ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಮತ್ತು ಶುಲ್ಕ ಮರುಪಾವತಿ ಕಾರ್ಯಕ್ರಮಗಳ ಸೌಲಭ್ಯಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಜ.31 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಮಿಸ್ ಮಾಡದೇ ಓದಿ: ಸುಗಮ ಪ್ರಯಾಣಕ್ಕೆ ನೂತನ ಆಟೋ ರಿಕ್ಷಾ ಪ್ರೀ-ಪೈಯ್ಡ್ ಕೌಂಟರ್ ಆರಂಭ : ಶಿವಮೊಗ್ಗ ಡಿಸಿ
ಇದನ್ನು ಮಿಸ್ ಮಾಡದೇ ಓದಿ: ವಿಕಲಚೇತನರ ರಿಯಾಯಿತಿ ಬಸ್ ಪಾಸ್/ನವೀಕರಣಕ್ಕೆ ಅರ್ಜಿ ಆಹ್ವಾನ
ಕೈಗಾರಿಕಾ ನಿವೇಶನಗಳ ಹಂಚಿಕೆಗೆ ಜವಳಿ ಉದ್ದಿಮೆದಾರರಿಂದ ಅರ್ಜಿ ಆಹ್ವಾನ
ಬಳ್ಳಾರಿ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆ.ಐ.ಎ.ಡಿ.ಬಿ) ವತಿಯಿಂದ ಬಳ್ಳಾರಿಯ ಸಂಜೀವರಾಯನಕೋಟೆ ಗ್ರಾಮದಲ್ಲಿ 154-58 ಎಕರೆ ಜೀನ್ಸ್ ಪಾರ್ಕ್ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಕೈಗಾರಿಕಾ ನಿವೇಶನಗಳ ಹಂಚಿಕೆಗೆ ಪ್ರತಿ ಎಕರೆಗೆ ತಾತ್ಕಾಲಿಕ ದರ 135 ಲಕ್ಷ ರೂಗಳನ್ನು ನಿಗಪಡಿಸಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಕೈಗಾರಿಕಾ ನಿವೇಶನಗಳ ಹಂಚಿಕೆಗೆ ದರವನ್ನು ಪರಿಷ್ಕರಣೆ ಮಾಡಿ ತಾತ್ಕಾಲಿಕವಾಗಿ ಪ್ರತಿ ಎಕರೆಗೆ 67.50 ಲಕ್ಷ ರೂಗಳನ್ನು ನಿಗಪಡಿಸಿಲಾಗಿದ್ದು, ಜಿಲ್ಲೆಯ ಆಸಕ್ತ ಜವಳಿ ಉದ್ದಿಮೆದಾರರು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಆಸಕ್ತರು ಕೈಗಾರಿಕಾ ನಿವೇಶನಗಳ ಹಂಚಿಕೆಗೆ ಆನ್‌ಲೈನ್ ವೆಬ್‌ಸೈಟ್ https://investkarnataka.co.in/karnataka-udyog-mitra/ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕೆಐಎಡಿಬಿ ಕಚೇರಿ ಅಥವಾ ದೂ.9964768334, 9901313417, 9844837264 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Backward Classes Welfare Department














Follow Me