ವಾರ್ತೆ : ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಗೆ ಲೋಕಾಯುಕ್ತ ಶಾಕ್

Lokayukta shocks Minister Zameer Ahmed's personal secretary
Lokayukta shocks Minister Zameer Ahmed's personal secretary

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಕಾರ್ಯದರ್ಶಿಗೆ ಲೋಕಾಯಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. 

ಇದನ್ನು ಮಿಸ್‌ ಮಾಡದೇ ಓದಿ: ತಕ್ಷಣ ಈ ಕೆಲಸವನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ನಿಮ್ಮ ಪ್ಯಾನ್ ಕಾರ್ಡ್ ನಿಷ್ಪ್ರಯೋಜಕವಾಗುತ್ತದೆ!

ಇದನ್ನು ಮಿಸ್‌ ಮಾಡದೇ ಓದಿ: ಅಂಜನಾದ್ರಿಯ ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್

ಬೆಂಗಳೂರಿನಲ್ಲಿ ಸಚಿವ ಆಪ್ತ ಕಾರ್ಯದರ್ಶಿ ಸರ್ದಾರ್ ಸರ್ಫರಾಜ್ ಖಾನ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ನಿವಾಸ ಸೇರಿದಂತೆ 10 ಕಡೆ ದಾಳಿ ನಡೆಸಲಾಗಿದೆ ಅಂತ ತಿಳಿದು.

Lokayukta
Lokayukta

ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ. ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಸರ್ಫರಾಜ್ ಗೆ ಸೇರಿದ ನಿವಾಸಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಬೆಂಗಳೂರಿನ 7 ಮನೆ, ಕೊಡಗಿನಲ್ಲಿ 2 ಕಾಫಿ ಎಸ್ಟೇಟ್, ಹೆಚ್.ಡಿ.ಕೋಟೆಯ ಒಂದು ರೆಸಾರ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಎಲ್ಲಾ 10 ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಆಸ್ತಿ ವಿವರಗಳ ಸಂಗ್ರಹ ಕಾರ್ಯ ಮುಂದುವರೆದಿದೆ.

Lokayukta shocks Minister Zameer Ahmed’s personal secretary