ಚಿತ್ರದುರ್ಗ/ತುಮಕೂರು : ಹಿರಿಯೂರು-ಶಿರಾ ಬಳಿ ಭೀಕರ ಬಸ್ ದುರಂತ, ಐವರು ಸಜೀವ ದಹನ

Horrific bus accident near Hiriyur-Shira, five burnt alive
Horrific bus accident near Hiriyur-Shira, five burnt alive

ಚಿತ್ರದುರ್ಗ/ತುಮಕೂರು: ಹಿರಿಯೂರು-ಶಿರಾ ಬಳಿ ಭೀಕರ ಬಸ್ ದುರಂತವಾಗಿದ್ದು ಐವರು ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ತುಮಕೂರು ಜಿಲ್ಲೆಯ ಶಿರಾ ಮತ್ತು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಡುವೆ ಬರುವ ಗೋರ್ಲತ್ತು ಗ್ರಾಮದ ಬಳಿ ಇಂದು ಬೆಳಗಿನ ಜಾವ 2 ಗಂಟೆಗೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್​ ಬಸ್​​ಗೆ ಹಿರಿಯೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್​​ ಲಾರಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಚಿತ್ರದುರ್ಗದಲ್ಲಿ ನಡೆದ ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಿಎಂ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಹಲವು ಮಂದಿ ಕಂಬನಿ ಮಿಡಿದಿದ್ದಾರೆ.

Horrific bus accident near Hiriyur-Shira, five burnt alive
Horrific bus accident near Hiriyur-Shira, five burnt alive

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ.ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಅಂತ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರುಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ.ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು.ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಅಂತ ತಿಳಿಸಿದ್ದಾರೆ.

Horrific bus accident near Hiriyur-Shira, five burnt alive
Horrific bus accident near Hiriyur-Shira, five burnt alive

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ 15ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಅಂತ ಡಿಸಿಎಂ ಡಿಕೆ ಶಿವಕುಮಾರ್ ಅವರು ಕಂಬನಿ ಮಿಡಿದಿದ್ದಾರೆ.

ಚಿತ್ರದುರ್ಗದ ಬಳಿ ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದು ಹಲವರು ಸಾವನ್ನಪ್ಪಿದ್ದಾರೆ ಎನ್ನುವ ಆಘಾತಕಾರಿ ಸುದ್ದಿ ಅತೀವ ದುಃಖವನ್ನು ತಂದಿದೆ. ಈ ಭೀಕರ ದುರಂತದಲ್ಲಿ ವಿಧಿವಶರಾದವರಿಗೆ ದೇವರು ಸದ್ಗತಿ ಕರುಣಿಸಲಿ, ಗಾಯಾಳುಗಳು ಆದಷ್ಟು ಶೀಘ್ರದಲ್ಲಿ ಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಅಗಲಿದವರ ಕುಟುಂಬದವರಲ್ಲಿ ನನ್ನ ತೀವ್ರ ಸಂತಾಪಗಳು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಂಬನಿ ಮಿಡಿದಿದ್ದಾರೆ.

ಬಸ್ ನಲ್ಲಿ 15 ಮಹಿಳೆಯರು, 14 ಪುರುಷರು ಪ್ರಯಾಣಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ಮಂಜುನಾಥ್, ಸಂಧ್ಯಾ, ಶಶಾಂಕ್, ದಿಲೀಪ್, ಪ್ರೀತಿಶ್ವರನ್, ವಿ.ಬಿಂದು, ಕೆ.ಕವಿತಾ, ಅನಿರುದ್ಧ್ ಬೆನರ್ಜಿ, ಅಮೃತಾ, ಇಶಾ, ಸೂರಜ್, ಮಾನಸ, ಮಿಲನಾ, ಹೇಮರಾಜ್ ಕುಮಾರ್, ಕಲ್ಪನಾ ಪ್ರಜಾಪತಿ, ಎಂ.ಶಶಿಕಾಂತ್, ವಿಜಯ್ ಭಂಡಾರಿ, ನವ್ಯಾ, ಅಭಿಷೇಕ್, ಹೆಚ್.ಕಿರಣ್ ಪಾಲ್, ಎಂ.ಕೀರ್ತನ್ ಅಂತಗ ತಿಳಿದು ಬಂದಿದೆ.

Horrific bus accident near Hiriyur-Shira, five burnt alive