ಮನುಷ್ಯನು ಮರಣವಾದ ನಂತರ ಒಂದು ವರ್ಷದವರೆಗೆ ಒಟ್ಟು 48 ಶ್ರಾದ್ಧಗಳನ್ನು ಆಚರಿಸಬೇಕಾಗುತ್ತದೆ

A person has to perform a total of 48 Shraddhas for one year after death
A person has to perform a total of 48 Shraddhas for one year after death

ಯಾರಾದ್ರೂ ತೀರಿಕೊಂಡಾಗ ಒಂದು ವರ್ಷದ ವರೆಗೆ ಯಾವುದೇ ತರಹದ ಹಬ್ಬ ಉತ್ಸವ ಮದುವೆ ಮುಂಜಿವೆ ಮಾಡ್ಬಾರ್ದು ಅಂತ ಹೇಳ್ತಾರಲ್ಲಾ ?

ಇದು ನಿಜ ನಾ ? ನಿಜ ಅಂತಾದ್ರೆ ಯಾಕೆ ಮಾಡ್ಬಾರ್ದು ?

ಅವು
೧) ಮಲಿನ ಷೋಡಶ
೨) ಮಧ್ಯಮ ಷೋಡಶ
೩) ಉತ್ತಮ ಷೋಡಶ
ಎಂಬುದಾಗಿ ಮೂರು ವಿಭಾಗಗಳು .

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ  ತಪ್ಪದೆ ಕರೆ ಮಾಡಿ 85489 98564

ಸ್ಥಾನೇ ದ್ವಾರೇ ಅರ್ಧಮಾರ್ಗೇ ಚ ಚಿತಾಯಾಂ ಶವ ಹಸ್ತಕೇ|
ಅಸ್ಥಿ ಸಂಚಯನೇ ಷಷ್ಠೋ ದಶಪಿಂಡಾ ದಶಾನ್ಹಿಕಾ||

ಮನುಷ್ಯನು ಮರಣ ಹೊಂದಿದ ಸ್ಥಾನದಲ್ಲಿ ಒಂದು , ದ್ವಾರದಲ್ಲಿ ಒಂದು , ಅರ್ಧಮಾರ್ಗದಲ್ಲಿ ವಿಶ್ರಾಮಪಿಂಡ ಒಂದು , ಚಿತೆಯಲ್ಲಿ ಒಂದು , ಮೂರನೆಯ ದಿವಸ ಅಸ್ಥಿಸಂಚಯನ ಕಾಲಕ್ಕೆ ಒಂದು , ಹಾಗೂ ಮೊದಲನೆಯ ದಿವಸದಿಂದ ಹಿಡಿದು ಹತ್ತು ದಿವಸಗಳವರೆಗೆ ಹತ್ತು ಪಿಂಡದಾನಗಳು . ಹೀಗೆ ಒಟ್ಟು 16 ಪಿಂಡದಾನಗಳಾಗುತ್ತವೆ . ಇವುಗಳಿಗೆ ಮಲಿನ ಷೋಡಶ ಎಂದು ಹೆಸರು .

ASTRO
ASTRO

ಪ್ರಥಮಂ ವಿಷ್ಣವೇ ದದ್ಯಾದ್ವಿತೀಯಂ ಶ್ರೀಶಿವಾಯ ಚ|
ಯಾಮ್ಯಾಯ ಪರಿವಾರಾಯ ತೃತೀಯಂ ಪಿಂಡಮುತ್ಸೃಜೇತ್||
ಚತುರ್ಥಂ ಸೋಮರಾಜಾಯ ಹವ್ಯವಾಹಾಯ ಪಂಚಮಮ್|
ಕವ್ಯವಾಹಾಯ ಷಷ್ಠಂ ಚ ದದ್ಯಾತ್ಕಾಲಾಯ ಸಪ್ತಮಮ್ ||
ರುದ್ರಾಯ ಚಾಷ್ಟಮಂ ದದ್ಯಾನ್ನವಮಂ ಪುರುಷಾಯ ಚ|
ಪ್ರೇತಾಯ ದಶಮಂ ಚೆವೈಕಾದಶಂ ವಿಷ್ಣವೇ ನಮಃ||
ದ್ವಾದಶಂ ಬ್ರಹ್ಮಣೇ ದದ್ಯಾದ್ವಿಷ್ಣವೇ ಚ ತ್ರಯೋದಶಮ್|
ಚತುರ್ದಶಂ ಶಿವಾಯೈವ ಯಮಾಯ ದಶಪಂಚಕಮ್||
ದದ್ಯಾತ್ಪುರುಷಾಯೈವ ಪಿಂಡಂ ಷೋಡಶಕಂ ಖಗ|
ಮಧ್ಯಂ ಷೋಡಶಕಂ ಪ್ರಾಹುರೇತತ್ತತ್ತ್ವವಿದೋ ಜನಾಃ||

ಮೊದಲನೆಯ ಪಿಂಡವನ್ನು ವಿಷ್ಣುವಿಗೆ , ಎರಡನೆಯದನ್ನು ಶಿವನಿಗೆ , ಮೂರನೆಯದನ್ನು ಯಮನ ಕುಟುಂಬದವರಿಗೆ , ನಾಲ್ಕನೆಯದನ್ನು ಚಂದ್ರನಿಗೆ , ಐದನೆಯದನ್ನು ಅಗ್ನಿಗೆ , ಆರನೆಯದನ್ನು ಕವ್ಯವಾಹನಿಗೆ , ಏಳನೆಯದನ್ನು ಕಾಲನಿಗೆ , ಎಂಟನೆಯದನ್ನು ರುದ್ರನಿಗೆ , ಒಂಬತ್ತನೆಯದನ್ನು ಪರಮ ಪುರುಷನಿಗೆ , ಹತ್ತನೆಯದನ್ನು ಪ್ರೇತಕ್ಕೆ , ಹನ್ನೊಂದನೆಯದನ್ನು ವಿಷ್ಣುವಿಗೆ , ಹನ್ನೆರಡನೆಯದನ್ನು ಬ್ರಹ್ಮನಿಗೆ , ಹದಿಮೂರನೆಯದನ್ನು ವಿಷ್ಣುವಿಗೆ , ಹದಿನಾಲ್ಕನೆಯದನ್ನು ಶಿವನಿಗೆ , ಹದಿನೈದನೆಯದನ್ನು ಯಮನಿಗೆ , ಮತ್ತು ಹದಿನಾರನೆಯದನ್ನು ತತ್ಪುರುಷನಿಗೆ ಕೊಡಬೇಕು. ಹೀಗೆ ಹದಿನಾರು ಪಿಂಡದಾನಗಳು ಮಧ್ಯಮ ಷೋಡಶ ಎನಿಸಿಕೊಳ್ಳುವವು .

ASTRO
ASTRO

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ದ್ವಾದಶ ಪ್ರತಿಮಾಸೇಷು ಪಾಕ್ಷಿಕಂ ಚ ತ್ರಿಪಾಕ್ಷಿಕಮ್ |
ನ್ಯೂನಷಾಣ್ಮಾಸಿಕಂ ಪಿಂಡಂ ದದ್ಯಾನ್ನ್ಯೋನಾದಿಕಂ ತಥಾ ||
ಉತ್ತಮಂ ಷೋಡಶಂ ಚೈತನ್ಮಯಾ ತೇ ಪರಿಕೀರ್ತಿತಮ್|
ಶ್ರಪಯಿತ್ವಾ ಚರುಂ ತಾರ್ಕ್ಷ್ಯ ಕುರ್ಯಾದೇಕಾದಶೇಹನಿ ||

ಹನ್ನೆರಡು ತಿಂಗಳುಗಳ ಹನ್ನೆರಡು ಪಿಂಡದಾನಗಳು , ಪಾಕ್ಷಿಕ ಪಿಂಡದಾನ 1 , ತ್ರಿಪಾಕ್ಷಿಕ (ಒಂದೂವರೆ ತಿಂಗಳಿಗೆ) 1 , ನ್ಯೂನ ಷಾಣ್ಮಾಸಿಕಕ್ಕೆ (ಐದೂವರೆ ತಿಂಗಳಿಗೆ ) 1 , ಮತ್ತು ನ್ಯೂನಾಬ್ದಿಕಕ್ಕೆ (ಹನ್ನೊಂದೂವರೆ ತಿಂಗಳಿಗೆ) 1 . ಈ ರೀತಿಯಾಗಿ ಒಂದು ವರ್ಷ ಪರ್ಯಂತರ ಹದಿನಾರು ಪಿಂಡದಾನಗಳು .

ASTRO
ASTRO

ಇವುಗಳು ಉತ್ತಮ ಷೋಡಶ ಎಂದು ಕರೆಸಿಕೊಳ್ಳುವವು .

ಮನುಷ್ಯ ಮರಣವಾದ ನಂತರ ಹದಿನೈದನೆಯ ದಿವಸದಿಂದ ಇಲ್ಲಿಂದ ಆ ಜೀವದ ಪ್ರಯಾಣ ಪ್ರಾರಂಭ , ಅಲ್ಲೀವರೆಗೂ ಯಮದೂತರು ಆ ಜೀವವನ್ನು ತನ್ನ ಪುತ್ರಾದಿಗಳು ಮಾಡುವ ಎಲ್ಲ ಕರ್ಮಗಳ ವೀಕ್ಷಣೆಗಾಗಿ ಇಲ್ಲಿಯೇ ಮನೆಯಲ್ಲಿ ಇಟ್ಟ ದೀಪದಲ್ಲಿ ಹಾಗೂ ಶವಕ್ಕೆ ಕಟ್ಟಿದ ಕಾತಿಯನ್ನು ಕಟಿಯಲು ಉಪಯೋಗಿಸುವ ಶಿಲೆಗಳಲ್ಲಿ ಆ ಜೀವದ ಅಂಶವನ್ನು ಇಟ್ಟಿರುತ್ತಾರೆ . , ಹದಿನೈದನೆಯ ದಿವಸ ಮಗನು ಕೊಡುವ ಪಾಕ್ಷಿಕ ಪಿಂಡದಾನವನ್ನು ಭಕ್ಷಣೆ ಮಾಡಿ ಮೊದಲನೆಯ ಪಟ್ಟಣವಾದ ಸೌಮ್ಯ ಎಂಬ ಪುರಿಗೆ ಯಮದೂತರು ಅದನ್ನು ತರುತ್ತಾರೆ , ಹೀಗೆ ಒಂದೊಂದೇ ಪಿಂಡದಾನವನ್ನು ಭಕ್ಷಿಸುತ್ತಾ ಅಂದರೆ ಉತ್ತಮ ಷೋಡಶ ಒಂದು ವರ್ಷದಲ್ಲಿ ಒಟ್ಟು ಹದಿನಾರು ಪಿಂಡದಾನಗಳನ್ನು ಭಕ್ಷಿಸುತ್ತಾ ಆ ಹದಿನಾರು ಪಟ್ಟಣಗಳಲ್ಲಿ ಕೊಡುವ ಅತ್ಯಂತ ಘೋರವಾದ ಶಿಕ್ಷೆಗಳನ್ನು ಅನುಭವಿಸುತ್ತಾ ಹನ್ನೆರಡನೆಯ ತಿಂಗಳು ಪೂರ್ತಿಯಾದ ನಂತರ ಯಮಲೋಕದ ಮಹಾದ್ವಾರಕ್ಕೆ ಬಂದು ತಲುಪುತ್ತದೆ .

ASTRO
ASTRO

ಅಲ್ಲಿಯವರೆಗೆ ಕರ್ತಾ ಹಾಗೂ ಸಪಿಂಡಿಗಳಿಗೆ ಅಂದರೆ ನಾಲ್ಕು ತಲೆಯ ಅಣ್ಣತಮ್ಮಂದಿರಿಗೆ ಒಂದು ತರಹದ ಸೂತಕವೇ ಇರುತ್ತದೆ .

ಅಲ್ಲದೇ ಆ ಜೀವ ಅಲ್ಲಿ ಅಷ್ಟೊಂದು ದುಃಖಗಳನ್ನು ಅನುಭವಿಸುತ್ತಾ ಒಂದೊಂದೇ ಪಟ್ಟಣಗಳನ್ನು ದಾಟುತ್ತಿರುವಾಗ , ಕರ್ತಾ ಆಗಲಿ ಅಥವಾ ಸಪಿಂಡಿಗಳಾಗಲಿ ಆ ಒಂದು ವರ್ಷದವರೆಗೆ ಯಾವುದೇ ತರಹದ ಹಬ್ಬ , ಹುಣ್ಣಿಮೆ , ಮದುವೆ , ಮುಂಜಿವೆ , ಉತ್ಸವಾದಿಗಳನ್ನು ಮಾಡಬಾರದು .

ಇನ್ನು ಕನ್ಯಾದಾನದ ವಿಚಾರಕ್ಕೆ ಬರೋದಾದ್ರೆ , ಆ ಜೀವದ ಸದ್ಗತಿಗಾಗಿ ಸಪಿಂಡಿಕರಣವಾದ ನಂತರ ಪದದಾನಾದಿಗಳನ್ನು ಸಂಕಲ್ಪಪೂರ್ವಕವಾಗಿ ಕೊಡ್ತೀವೋ ಇಲ್ವೋ ? ಅದೇ ರೀತಿ ಕನ್ಯಾದಾನ ಅನ್ನೋದು ಪಿತೃಗಳ ಸದ್ಗತಿಗಾಗಿ ಕೊಡುವ ಶ್ರೇಷ್ಠದಾನವಾಗಿದೆ . ಇದನ್ನು ಕನ್ಯಾದಾನದ ಸಂಕಲ್ಪದಲ್ಲೇ ಹೇಳಲಾಗಿದೆ ಮಮ ಸಮಸ್ತ ಪಿತೃಣಾಂ ನಿರತಿಶಯ ಸಾನಂದ ಬ್ರಹ್ಮಲೋಕ ಅವಾಪ್ತ್ಯರ್ಥಂ ……. ಎಂಬಲ್ಲಿ ನನ್ನ ಸಮಸ್ತ ಪಿತೃಗಳ ಸದ್ಗತಿಗಾಗಿ ಈ ಕನ್ಯಾದಾನವನ್ನು ಸಮಸ್ತ ದೇವತೆಗಳ , ಅಗ್ನಿದೇವರ , ಬ್ರಾಹ್ಮಣರ , ಸಹೃಜ್ಜನರ ಸನ್ನಿಧಾನದಲ್ಲಿ ಮಾಡ್ತಾಯಿದ್ದೀನಿ ಎಂಬುದಾಗಿ ಸಂಕಲ್ಪ ಮಾಡಿ ಕನ್ಯಾದಾನ ಮಾಡುತ್ತೇವೆ .

ASTRO
ASTRO

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ಹೀಗಾಗಿ ಕನ್ಯಾದಾನ ಮಾತ್ರ ಬರ್ತದೆ . ಇನ್ನುಳಿದ ಯಾವುದೇ ತರಹದ ಉತ್ಸವಾದಿಗಳು , ಹಬ್ಬಗಳು ಸರ್ವಥಾ ಬರುವುದಿಲ್ಲಾ ,

ಹಾಗೇನಾದರೂ ಅಕಸ್ಮಾತ್ ಅಜ್ಞಾನದಿಂದ ಗಂಡು ಮಗನ ಮದುವೆಯಾಗಲಿ , ಮುಂಜಿಯಾಗಲಿ , ಅಥವಾ ಹಬ್ಬ ಹುಣ್ಣಿಮೆಗಳನ್ನಾಗಲಿ ಮಾಡಿದರೆ ಆತನ 21 ತಲೆಯ ಪಿತೃಗಳು ನರಕಭಾಗಿಗಳಾಗುತ್ತಾರೆ ಎಂಬುದಾಗಿ ಶಾಸ್ತ್ರದಲ್ಲಿ ತಿಳಿಸಲಾಗಿದೆ .

ಹೀಗಾಗಿ ತೀರಕೊಂಡ ಒಂದು ವರ್ಷದವರೆಗೂ ಯಾವುದೇ ಹಬ್ಬ ಹುಣ್ಣಿಮೆ , ಮಗನ ಮದುವೆ ಮುಂಜಿವೆ , ಉತ್ಸವಾದಿಗಳು ಬರೋದಿಲ್ಲಾ , ಆದರೆ ಎಲ್ಲ ಮಹಾದಾನಗಳನ್ನು ಅವಶ್ಯವಾಗಿ ಮಾಡಲೇಬೇಕು ಎಂದು ಗರುಡಪುರಾಣದಲ್ಲಿ ತಿಳಿಸಲಾಗಿದೆ .

A person has to perform a total of 48 Shraddhas for one year after death