ರಾಮನಗರ: ಮಣ್ಣು, ಜಲ, ವಾಯು ಮಾಲಿನ್ಯ ತಡೆಯಲು ಕೃಷಿಯಲ್ಲಿ ಮಹತ್ವದ ಪಾತ್ರ ವಹಿಸುವ ನ್ಯಾನೋ ಯೂರಿಯಾವನ್ನು ಜಿಲ್ಲೆಯ ರೈತರು ಬಳಸಲು ಉತ್ತೇಜಿಸುವಂತೆ ಕೃಷಿ ಇಲಾಖೆಯ ಅಧಿಕಾರಿಗಳು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಅವರು ಸಲಹೆ ನೀಡಿದರು.
ಅವರು ಡಿ.29ರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
500 ಎಂ.ಎಲ್. ದ್ರವ ಮಾದರಿಯ ನ್ಯಾನೋ ಯೂರಿಯಾವು 45 ಕೆ.ಜಿ.ಯ ಘನ ಯೂರಿಯಾ ರಸಗೊಬ್ಬರದ ತೂಕಕ್ಕೆ ಸಮ, ಅದನ್ನು ಕೊಂಡೊಯ್ಯುವುದು ಅತ್ಯಂತ ಸುಲಭ, ರೈತರು ಅವುಗಳನ್ನು ಸಲೀಸಾಗಿ ಬಳಸಬಹುದು, ಅದರ ಪ್ರಾಮುಖ್ಯತೆ, ಬಳಕೆ ವಿಧಾನದ ಕುರಿತು ಕಾರ್ಯಾಗಾರಗಳು, ಕರಪತ್ರಗಳು, ಪೋಸ್ಟರ್ಗಳ ಮೂಲಕ ಹೆಚ್ಚಿನ ಅರಿವು ಮೂಡಿಸಬೇಕು. ಕೇಂದ್ರ ಸರ್ಕಾರವು ಯೂರಿಯಾ ಗೊಬ್ಬರಕ್ಕೆ 1.1ಲಕ್ಷ ಕೋಟಿ ರೂ.ಗಳ ಸಬ್ಸಿಡಿ ನೀಡುತ್ತಿದೆ, ರಸಗೊಬ್ಬರಗಳೆಲ್ಲಾ ಸೇರಿದಂತೆ ಒಟ್ಟಾರೆ 1.7 ಲಕ್ಷ ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿದೆ ಎಂದವರು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಮೇಶ್, ಪ್ರತಿ ತಿಂಗಳು 1500 ಲೀಟರ್ಗಳಷ್ಟು ನ್ಯಾನೋ ಯೂರಿಯಾ ಜಿಲ್ಲೆಯಲ್ಲಿ ಬಳಕೆಯಾಗುತ್ತಿದೆ, ಅದರ ಬಳಕೆ ಪ್ರಮಾಣವನ್ನು ಹೆಚ್ಚಿಸಲು ರೈತರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ದಿಶಾ ಸಮಿತಿ ಸದಸ್ಯರು ಹಾಗೂ ಜನಪ್ರತಿನಿಧಿಗಳು ನ್ಯಾನೋ ಯೂರಿಕಾ ಬಳಕೆ ಬಗ್ಗೆ ಜಿಲ್ಲೆಯ ರೈತರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು, ರೈತರು ಕೃಷಿ ಹೊಂಡಗಳನ್ನು ಮುಚ್ಚುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಕೃಷಿ ಹೊಂಡದಿಂದ ರೈತರಿಗಾಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸಿ ಜಿಲ್ಲೆಯಲ್ಲಿರುವ ಕೃಷಿ ಹೊಂಡಗಳ ನಿರ್ವಹಣೆ ಹಾಗೂ ಎಷ್ಟು ಕೃಷಿ ಹೊಂಡಗಳನ್ನು ಮುಚ್ಚಲಾಗಿದೆ, ಭಾಗಶಃ ಎಷ್ಟು ಕೃಷಿ ಹೊಂಡಗಳನ್ನು ಮುಚ್ಚಲಾಗಿದೆ ಎನ್ನುವ ಬಗ್ಗೆ ತಂಡವೊಂದನ್ನು ರಚಿಸಿ ಪರಿಶೀಲನೆ ನಡೆಸಿ ಮಾಹಿತಿಯನ್ನು ಮುಂದಿನ ಸಭೆಗೆ ನೀಡಬೇಕೆಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ತೆಂಗು ಬೆಳೆಗೆ ವಿಮೆ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ವಹಿಸಬೇಕು, ಅದಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಶ್ರಮಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾತನಾಡಿದ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್ ರಾಜ್ಯ ಸರ್ಕಾರದ ತೆಂಗು ಅಭಿವೃದ್ದಿ ಮಂಡಳಿ ಈ ಪ್ರಸ್ತಾವನೆಯನ್ನು ಅನುಮೂದಿಸಿ ಕೇಂದ್ರಕ್ಕೆ ಕಳುಹಿಸಿದ್ದಲ್ಲೀ ಕೇಂದ್ರ ಸರ್ಕಾರ ಪರಿಶೀಲಿಸಿ ಮುಂದಿನ ಕ್ರಮವಹಿಸಲಿದೆ ಎಂದರು.
ಜಲ್ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ಜಿಲ್ಲೆಯ 1,528 ಕಾಮಗಾರಿಗಳ ಪೈಕಿ 895 ಕಾಮಗಾರಿಗಳು ಪೂರ್ಣಗೊಂಡಿವೆ. 556 ಕಾಮಗಾರಿಗಳು ಪ್ರಕ್ರಿಯೆಯಲ್ಲಿದ್ದು, ಬಾಕಿ ಉಳಿದವುಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಇಲ್ಲಿ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳ್ಳಲು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಬೇಕು, ತಪ್ಪಿದ್ದಲ್ಲಿ ಅವರ ವಿರುದ್ಧ ದಂಡ ವಿಧಿಸಬೇಕು ಸೂಚಿಸಿದ ಅವರು ಜೆಜೆಎಂ ಕಾಮಗಾರಿಗಳ ಕುರಿತು ಚರ್ಚಿಸಲು 10 ದಿನದೊಳಗೆ ಪಿಡಿಓ ಹಾಗೂ ಗುತ್ತಿಗೆದಾರರ ಸಭೆ ಕರೆಯಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ ಅವರಿಗೆ ನಿರ್ದೇಶಿಸಿದರು.
ಸಿಎಸ್ಆರ್ ನಿಧಿಯಡಿ ಜಿಲ್ಲೆಯಲ್ಲಿ 60-70 ಬೋರ್ವೆಲ್ಗಳು ಕೊರೆಸಲಾಗಿದ್ದು, ಆ ಬೋರ್ವೆಲ್ಗಳಿಗೆ ಪಂಪು ಮೋಟಾರ್ ಅಳವಡಿಸಲು 15ನೇ ಹಣಕಾಸು ಯೋಜನೆಯ ಅನುದಾನವನ್ನು ಬಳಸಿಕೊಳ್ಳಲು ಪಿಡಿಒಗಳಿಗೆ ನಿರ್ದೇಶಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಬೋರ್ವೆಲ್ಗಳಿಗೆ ಅಗತ್ಯವಿರುವ ಪಂಪು ಮೋಟಾರ್ಗಳ ವಿವರವನ್ನು ಹತ್ತು ದಿನಗಳೊಳಗೆ ನೀಡುವಂತೆ ಎಲ್ಲಾ ತಾಲ್ಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆ ನೀಗಿದ್ದು, ರೇಡಿಯೋಲಾಜಿಸ್ಟ್ಗಳ ಕೊರತೆಯಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಸುತ್ತಮುತ್ತಲಿನ ಮೆಡಿಕಲ್ ಕಾಲೇಜಿನ ಕೊನೆಯ ವರ್ಷದ ವಿದ್ಯಾರ್ಥಿಗಳ ಸೇವೆಯನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರಲ್ಲದೇ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಇಕೋ ಹಾಗೂ ಅಲ್ಟಾçಸೌಂಡ್ ಯಂತ್ರ ಲಭ್ಯವಿದ್ದು, ಮುಂಬರುವ ದಿನಗಳಲ್ಲಿ ಕನಕಪುರ, ಮಾಗಡಿ, ಚನ್ನಪಟ್ಟಣ, ಕುಣಿಗಲ್ ಹಾಗೂ ಆನೇಕಲ್ ತಾಲ್ಲೂಕು ಆಸ್ಪತ್ರೆಗಳಿಗೂ ಇಕೋ ಹಾಗೂ ಅಲ್ಟಾçಸೌಂಡ್ ಯಂತ್ರ ಪೂರೈಸಲಾಗುವುದು ಎಂದರು.
ಚನ್ನಪಟ್ಟಣ ತಾಲ್ಲೂಕು ಆಸ್ಪತ್ರೆ ಕಿರಿಯದಾಗಿದ್ದು ಅದನ್ನು ವಿಸ್ತರಿಸಲು ಚನ್ನಪಟ್ಟಣದ ತಟ್ಟೇಕೆರಿ ವ್ಯಾಪ್ತಿಯ ಅರಗು ಕುಶಲ ಸಂರ್ಕೀಣಕ್ಕೆ ಸ್ಥಳಾಂತರಿಸಿ, ಸದರಿ ಸ್ಥಳದ 200 ಹಾಸಿಗೆಗಳಿರುವ ಹೊಸ ಆಸ್ಪತ್ರೆ ನಿರ್ಮಿಸುವುದು ಮಾತ್ರವಲ್ಲದೇ ಅಗತ್ಯವಿರುವ ವೈದ್ಯರು ಸೇರಿದಂತೆ ಸಿಬ್ಬಂದಿಗಳನ್ನು ಒದಗಿಸಲು ಕ್ರಮವಹಿಸಲಾಗುವುದು ಎಂದರಲ್ಲದೇ ರಾಮನಗರದ ಅರ್ಚಕರಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ರಾಜೀವ್ ಗಾಂಧಿ ಮೆಡಿಕಲ್ ಕಾಲೇಜಿನಲ್ಲಿ 650 ಹಾಸಿಗೆಗಳಿರುವ ಆಸ್ಪತ್ರೆ ನಿರ್ಮಾಣ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ಕಾರ್ಯದರ್ಶಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚು ಕಂಡುಬರುತ್ತಿದ್ದು, ಇದನ್ನು ನಿಯಂತ್ರಿಸಲು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದಿಂದ ಇನ್ನಷ್ಟು ಸೂಚನಾ ಫಲಕ, ಸ್ಕೈವಾಕ್ ಗಳನ್ನು ನಿರ್ಮಿಸಲು ಕ್ರಮ ವಹಿಸುವಂತೆ ಎನ್.ಹೆಚ್.ಎ.ಐ ಯೋಜನಾ ನಿರ್ದೇಶಕರಿಗೆ ಸೂಚಿಸಿದ ಸಂಸದರು ಟೋಲ್ ಪ್ಲಾಜಾ ಬಳಿ ಎಳನೀರು ಹಾಗೂ ಕಬ್ಬಿನ ಜ್ಯೂಸ್ ಮಾರಾಟ ಮಾಡಲು ರೈತರಿಗೆ ಸ್ಥಳಾವಕಾಶ ಕಲ್ಪಿಸುವ ಮೂಲಕ ರೈತರ ಬೆಳೆಗಳಿಗೆ ಉತ್ತೇಜನ ನೀಡುವಂತೆ ತಿಳಿಸಿದರು.
ಪಿ.ಎಂ ವಿಶ್ವಕರ್ಮ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಸಲ್ಲಿಸುವ ಅರ್ಜಿಗಳಿಗೆ ಸಕಾಲದಲ್ಲಿ ಸಾಲ ಒದಗಿಸಬೇಕು. ಅಲ್ಲದೇ ಮಾಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬ್ಯಾಂಕ್ ತೆರೆಯಲು ಕ್ರಮವಹಿಸಬೇಕು. ಪಿ.ಎಂ. ಸುರಕ್ಷಾ ಭೀಮಾ ಯೋಜನೆಗಳ ಕುರಿತು ಅರಿವು ಮೂಡಿಸುವಂತೆ ಸೂಚಿಸಿದರು.
ವಿಕಲಚೇತನರು, ಮಹಿಳೆಯರು, ವಿದ್ಯಾರ್ಥಿಗಳು, ರೈತರು ಸೇರಿದಂತೆ ಅರ್ಹವಿರುವ ಎಲ್ಲಾ ವರ್ಗದ ಫಲಾನುಭವಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಸಕಾರಾತ್ಮಕ ಮನೋಭಾವದಿಂದ ಸಕಾಲದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಮೂಲಕ ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕು. ಅದಲ್ಲದೇ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಕ್ರೀಯವಾಗಿ ಪಾಲ್ಗೊಂಡು ಕ್ಷೇತ್ರ ಭೇಟಿ ನೀಡಬೇಕು ಎಂದು ಕಿವಿ ಮಾತು ಹೇಳಿದರು.
ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್, ಉಪ ವಿಭಾಗಾಧಿಕಾರಿ ಬಿನೋಯ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಧನರಾಜ್, ಮುಖ್ಯ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ ವೇದಿಕೆಯಲ್ಲಿದ್ದರು.
ದಿಶಾ ಸಮಿತಿ ಸಭೆಯ ನಾಮ ನಿರ್ದೇಶಿತರು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್ ಗಳು, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳು ಸಭೆಯಲ್ಲಿದ್ದರು.
Acceptance of petitions by Scheduled Caste and Scheduled Tribe communities














Follow Me