ಹವಾಮಾನ ಸ್ಥಿತಿಸ್ಥಾಪಕ ಕೃಷಿಗೆ ಸಂಯೋಜಿತ ಯೋಜನೆಗಳು ಅಗತ್ಯ : ಡಾ.ಪಿ.ಚಂದ್ರಶೇಖರ

Integrated projects are necessary for climate resilient agriculture: Dr. P. Chandrashekar
Integrated projects are necessary for climate resilient agriculture: Dr. P. Chandrashekar

ಶಿವಮೊಗ್ಗ: ಹವಾಮಾನ ಸ್ಥಿತಿಸ್ಥಾಪಕ ಕೃಷಿಗೆ ಹವಾಮಾನ-ಸ್ಮಾರ್ಟ್ ತಂತ್ರಜ್ಞಾನಗಳು, ಮಣ್ಣು ಮತ್ತು ನೀರಿನ ನಿರ್ವಹಣೆ, ಬೆಳೆಗಳ ಆಯ್ಕೆಗಳು ಮತ್ತು ಸಕಾಲಿಕ ಸಲಹೆಗಳನ್ನು ಒಳಗೊಂಡ ಸಂಯೋಜಿತ ಯೋಜನೆಗಳ ಅಥವಾ ಪ್ಯಾಕೇಜ್‌ಗಳ ಅಗತ್ಯವಿದೆ ಎಂದು ಬಾಂಗ್ಲಾದೇಶದ ಸಿಐಆರ್‌ಡಿಎಪಿ ಮಹಾನಿರ್ದೇಶಕ ಡಾ.ಪಿ.ಚಂದ್ರಶೇಖರ ತಿಳಿಸಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ನ್ಯಾಚುರಲ್ ರಿಸೋರ್ಸಸ್ ಇನ್ಸಿ÷್ಟಟ್ಯೂಟ್ ವಿಶ್ವವಿದ್ಯಾಲಯ, ಗ್ರೀನ್‌ವಿಚ್, ಯುಕೆ ಸಹಯೋಗ ಮತ್ತು ಐಎಸ್‌ಪಿಎಫ್-ಬ್ರಿಟಿಷ್ ಕೌನ್ಸಿಲ್, ನವದೆಹಲಿಯ ಐಸಿಎಸ್‌ಎಸ್‌ಆರ್ ಬೆಂಬಲದೊAದಿಗೆ ‘ಹವಾಮಾನ ಸ್ಥಿತಿಸ್ಥಾಪಕತ್ವದ ಕೃಷಿ ಸಂಶೋಧನೆ ಮತ್ತು ಸಹಯೋಗವನ್ನು ಮುಂದುವರೆಸುವಲ್ಲಿ ಆರಂಭಿಕ ವೃತ್ತಿಜೀವನದ ಸಂಶೋಧಕರನ್ನು ಸಬಲೀಕರಣಗೊಳಿಸುವುದು’ ವಿಷಯ ಕುರಿತು ಜ.5 ರ ಇಂದಿನಿAದ ಜ.9 ರವರೆಗೆ ಮಲೆನಾಡು ಶೈರ್ ಎಕೊ ರೆಸಾರ್ಟ್ನಲ್ಲಿ ಏರ್ಪಡಿಸಲಾಗಿರುವ ಅಂತರಾಷ್ಟಿçÃಯ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಳೆ ವಿಫಲವಾದಾಗ, ಪ್ರವಾಹಗಳು ಬಂದಾಗ ಅಥವಾ ಕೀಟಗಳು ಉಲ್ಬಣಗೊಂಡಾಗ ಏನು ಮಾಡಬೇಕು ಎಂಬAತಹ ಸ್ಪಷ್ಟ ಯೋಜನೆಗಳನ್ನು ಈ ಪ್ಯಾಕೇಜ್‌ಗಳು ಒಳಗೊಂಡಿರಬೇಕು ಎಂದರು.

Integrated projects are necessary for climate resilient agriculture: Dr. P. Chandrashekar
Integrated projects are necessary for climate resilient agriculture: Dr. P. Chandrashekar

ಪ್ರಯೋಗಾಲಯಗಳಲ್ಲಿ ಅಥವಾ ಗ್ರಂಥಾಲಯಗಳ ಕಪಾಟಿನಲ್ಲಿ ಜರ್ನಲ್ ಲೇಖನಗಳು, ಪುಸ್ತಕಗಳು ಅಥವಾ ವರದಿಗಳಾಗಿ ಉಳಿಯುವ ಹವಾಮಾನ ಸಂಶೋಧನೆಯಿAದ ಉಪಯೋಗವಿಲ್ಲ. ಬದಲಾಗಿ ರೈತರು, ವಿಸ್ತರಣಾ ಏಜೆಂಟರು ಮತ್ತು ನೀತಿ ನಿರೂಪಕರು ಈ ಸಂಶೋಧನೆಗಳನ್ನು ಅರ್ಥಮಾಡಿಕೊಂಡು ಕಾರ್ಯನಿರ್ವಹಿಸಿದಾಗ ಮಾತ್ರ ಉತ್ತಮ ಫಲಿತಾಂಶ ಸಾಧ್ಯ.

ಹವಾಮಾನ ಬದಲಾವಣೆಯು ಎಲ್ಲಾ ಸಮುದಾಯಗಳ ಮೇಲೆ ಒಂದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ. ಇದು ಸ್ಥಳೀಯ ಮಣ್ಣು, ಸೂಕ್ಷ್ಮ ಹವಾಮಾನ, ಸಂಸ್ಕೃತಿಗಳು ಮತ್ತು ಇತಿಹಾಸಗಳಿಂದ ಸಂದರ್ಭೋಚಿತವಾಗಿ ರೂಪುಗೊಂಡಿದೆ. ಅದಕ್ಕಾಗಿಯೇ ಸಂಶೋಧಕರು ತಮ್ಮ ವೃತ್ತಿಜೀವನದ ಆರಂಭದಲ್ಲಿ, ತಲೆಮಾರುಗಳಿಂದ ಸಂಸ್ಕರಿಸಿದ ಸ್ಥಳೀಯ ಸಾಂಪ್ರದಾಯಿಕ ಜ್ಞಾನ ವ್ಯವಸ್ಥೆಗಳನ್ನು ಗುರುತಿಸಿ ಮುಂದುವರೆಯಬೇಕು.

ಪ್ರತಿ ವರ್ಷ, ರೈತರು ತಮ್ಮ ಬೆಳೆಯ ಪಾಲನ್ನು ಕಡಿಮೆ ಉತ್ಪಾದಕತೆಯಿಂದಾಗಿ ಅಲ್ಲ, ಬದಲಾಗಿ ಅಸಮರ್ಪಕ ಸಂಗ್ರಹಣೆ, ಕಳಪೆ ನಿರ್ವಹಣೆ, ದುರ್ಬಲ ಮಾರುಕಟ್ಟೆ ಸಂಪರ್ಕಗಳು ಮತ್ತು ಹವಾಮಾನ-ಪ್ರೇರಿತ ಅಡಚಣೆಗಳಿಂದಾಗಿ ಕಳೆದುಕೊಳ್ಳುತ್ತಾರೆ. ಆದ್ದರಿಂದ ಹವಾಮಾನ ಸಂಶೋಧನೆಯು ಉತ್ಪಾದನೆಯನ್ನು ಮೀರಿ ನೋಡಬೇಕು ಮತ್ತು ಕೊಯ್ಲಿನ ನಂತರದ ನಷ್ಟಗಳನ್ನು ಕಡಿಮೆ ಮಾಡುವ, ಸಂಗ್ರಹಣೆ ಮತ್ತು ಸಂಸ್ಕರಣೆಯನ್ನು ಸುಧಾರಿಸುವ, ಮೌಲ್ಯ ಸರಪಳಿಗಳನ್ನು ಬಲಪಡಿಸುವ ಮತ್ತು ಮಾರುಕಟ್ಟೆ ಮಟ್ಟದ ತ್ಯಾಜ್ಯವನ್ನು ತಡೆಯುವ ತಂತ್ರಗಳನ್ನು ಸಂಯೋಜಿಸಬೇಕು.

ಕೃಷಿ ಸಹಕಾರ ಸಂಘಗಳು ಮತ್ತು ಎಫ್‌ಪಿಓ ಗಳು ಮಾರುಕಟ್ಟೆ ಮಧ್ಯವರ್ತಿಗಳಷ್ಟೇ ಅಲ್ಲ, ಹವಾಮಾನ ಸ್ಥಿತಿಸ್ಥಾಪಕ ತಂತ್ರಜ್ಞಾನ ಉತ್ಪಾದನೆ ಮತ್ತು ಅಳವಡಿಕೆಯಲ್ಲಿ ಪ್ರಮುಖ ಪಾಲುದಾರರೂ ಆಗಿವೆ. ರೈತರನ್ನು ಸಂಘಟಿಸುವ ಮೂಲಕ, ಅವರು ವೈಯಕ್ತಿಕ ಅಪಾಯವನ್ನು ಕಡಿಮೆ ಮಾಡುತ್ತಾರೆ. ಹವಾಮಾನ-ಸ್ಮಾರ್ಟ್ ತಂತ್ರಜ್ಞಾನಗಳು, ಇನ್‌ಪುಟ್‌ಗಳು ಮತ್ತು ಮಾಹಿತಿಯನ್ನು ರೈತರ ಕೈಗೆಟುಕುವಂತೆ ಮಾಡುತ್ತಾರೆ.

ಇಂಡೋನೇಷ್ಯಾದ 2000 ರೈತರು ಅರಣ್ಯ ಸಂರಕ್ಷಣೆಯೊAದಿಗೆ ಕಾಫಿ ಬೆಳೆದು ಆದಾಯ ಗಳಿಸುತ್ತಾರೆ. ವಿಯೆಟ್ನಾಂ ಸಹಕಾರಿ ಸಂಸ್ಥೆಗಳಿAದ ಪರಿಸರ ಸಂರಕ್ಷಣೆಯನ್ನು ಕಡ್ಡಾಯಗೊಳಿಸಲಾಗಿದೆ. ಫಿಲಿಪೈನ್ಸ್- ಸಹಕಾರಿಯು ವಿಪತ್ತು ನಿರ್ವಹಣೆಗೆ ಸಿದ್ದತೆ ಮಾಡಿಕೊಂಡಿದ್ದು, ಬಾಂಗ್ಲಾದೇಶ-ಸಿಇಡಬ್ಲ್ಯೂಡಿಸಿ-ಮಹಿಳಾ ಸಹಕಾರಿಗಳು 73000 ಸೌರ ಘಟಕಗಳನ್ನು ಸ್ಥಾಪಿಸಿ ಆದಾಯ ಗಳಿಸುತ್ತಿದ್ದು, ಫಿಜಿ-ಬೌಮಾ ಜಲಪಾತ ಬಳಿಯ ಕೃಷಿಕ ಕುಟುಂಬಗಳು ಪ್ರವಾಸಿ ಗೈಡ್ ಮಾಡುವ ಮೂಲಕ ಆದಾಯ ಗಳಿಸುತ್ತಿವೆ. ಈ ರೀತಿಯ ಆದಾಯ ಗಳಿಕೆಯ ಅಭ್ಯಾಸಗಳನ್ನು ಉತ್ತೇಜಿಸಬೇಕಿದೆ. ಹಾಗೂ ರೈತರಿಗೆ ಕೈಗೆಟುಕುವ ಡಿಜಿಟಲ್ ಪರಿಹಾರಗಳನ್ನು ನೀಡಬೇಕಿದೆ. ಸಂಶೋಧನಾ ವಿಸ್ತರಣಾ ಸೇವೆಗಳನ್ನು ಬಲಪಡಿಸಬೇಕು. ಹಾಗೂ ರೈತರು ತಮ್ಮ ಹವಾಮಾನ-ಸ್ಮಾರ್ಟ್ ಉತ್ಪನ್ನಗಳನ್ನು ಬ್ರ‍್ಯಾಂಡ್ ಮಾಡಲು ಮತ್ತು ಪ್ರಮಾಣೀಕರಿಸಲು ಸಹಾಯ ಮಾಡಬೇಕು. ಹವಾಮಾನ ಸ್ಥಿತಿಸ್ಥಾಪಕತ್ವ ಕೃಷಿಯನ್ನು ಉತ್ತೇಜಿಸುವ ಸರ್ಕಾರಿ ಬೆಂಬಲ ಕಾರ್ಯಕ್ರಮಗಳು ಮತ್ತು ಸಾಲ ಯೋಜನೆಗಳನ್ನು ಜನಪ್ರಿಯಗೊಳಿಸುವುದರೊಂದಿಗೆ ಸ್ಟಾರ್ಟ್ಅಪ್‌ಗಳು, ಉದ್ಯಮಿಗಳಿಗೆ ಉಚಿತ ಪ್ರವೇಶ ನೀಡಬೇಕೆಂದರು.

ಯುಎಎಸ್, ಬೆಂಗಳೂರು ಕುಲಪತಿ ಡಾ. ಎಸ್.ವಿ.ಸುರೇಶ್ ಮಾತನಾಡಿ, ಹವಾಮಾನ ಬದಲಾವಣೆ ಕೃಷಿ ಮೇಲೆ ಬಹಳಷ್ಟು ಪರಿಣಾಮ ಬೀರುತ್ತಿದ್ದು, ಹವಾಮಾನ ಬದಲಾವಣೆಯಿಂದ ಕೃಷಿಕರು ಒಂದು ಕಡೆ ಬಲಿಪಶುಗಳಾಗುತ್ತಿದ್ದರೆ ಇನ್ನೊಂದೆಡೆ ಕೃಷಿಯಿಂದಲೂ ಹವಾಮಾನ ಬದಲಾವಣೆಯಾಗುತ್ತಿದೆ. ಆದ ಕಾರಣ ಕೃಷಿಸ್ನೇಹಿಯಾದ ಸಂಶೋಧನೆಗಳನ್ನು, ಸಂಶೋಧಕರನ್ನು ನಾವು ಉತ್ತೇಜಿಸಬೇಕು. ಮಳೆ, ಉಷ್ಣತೆ ವೈಪರೀತ್ಯ ತಡೆಯುವ ತಳಿಗಳ ಅಭಿವೃದ್ದಿಯಾಗಬೇಕು. ಹವಾಮಾನ ಸ್ಮಾರ್ಟ್ ತಂತ್ರಜ್ಞಾನದಿAದ ರೈತರಿಗಾಗುವ ನಷ್ಟವನ್ನು ಕಡಿಮೆಗೊಳಿಸುವುದು, ಹವಾಮಾನ ವೈಪರೀತ್ಯ ಎದುರಿಸಲು ವ್ಯವಸ್ಥಿತ ವಿಧಾನ ಅನುಸರಣೆ ಮತ್ತು ನಿರ್ವಹಣೆ ಮುಖ್ಯವಾಗಿದೆ. ಜೊತೆಗೆ ಸ್ಪರ್ಧಾತ್ಮಕ ಸಂಶೋಧನೆಗಿAತ ಸಹಕಾರಿ ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ಯುಎಸ್‌ಎ ವಾಷಿಂಗ್ಟನ್ ಡಿಸಿ ಐಎಸ್‌ಎಫ್‌ಆರ್‌ಐ ನ ಸಂಶೋಧನಾ ಸಹೋದ್ಯೋಗಿ ಡಾ.ಸುರೇಶ್ ಚಂದ್ರ ಬಾಬು ಮಾತನಾಡಿ, ಹಿರಿಯ ಸಂಶೋಧಕರ ಅನುಭವದಿಂದ ಯುವ ಸಂಶೋಧಕರನ್ನು ಉತ್ತೇಜಿಸಬೇಕು. ಹವಾಮಾನ ಸ್ಥಿತಿಸ್ಥಾಪಕತ್ವ ಸಾಧಿಸಲು ಸಂಶೋಧನೆ ಅತಿ ಮುಖ್ಯವಾಗಿದೆ. ಹಸಿರು ಕ್ರಾಂತಿಯ ಪಿತಾಮಹ ಎನಿಸಿಕೊಂಡಿರುವ ಅಮೆರಿಕಾದ ಅಗ್ರೊನೊಮಿಸ್ಟ್ ನಾರ್ಮನ್ ಬೊರ್ಲಾಗ್ ಅವರು ಕೃಷಿ ಉತ್ಪನ್ನಗಳ ಹೆಚ್ಚಳಕ್ಕೆ ವ್ಯಾಪಕ ಕೊಡುಗೆಯನ್ನಿತ್ತಿದ್ದು, ಎಸಿ ರೂಮಿನಲ್ಲಿ ಕೂತು ಕೃಷಿ ನಿಯಮಾವಳಿಗಳನ್ನು ರೂಪಿಸಬೇಡಿ, ಕೃಷಿ ಕ್ಷೇತ್ರಕ್ಕಿಳಿದು ಕೈ ಮಣ್ಣು ಮಾಡಿಕೊಂಡು ಸಂಶೋಧನೆಗಳನ್ನು ಕೈಗೊಳ್ಳಬೇಕು ಎನ್ನುತ್ತಿದ್ದರು ಹಾಗೂ ನೀನು ಜಾಗತಿಕ ನಾಗರೀಕನಾಗಿ ಕೃಷಿ ಸಂಶೋಧನೆಯಲ್ಲಿ ತೊಡಗಬೇಕೆಂದು ಪ್ರೇರೇಪಿಸಿದ್ದರು ಎಂದು ನೆನೆದರು.

ಯುನೈಟೆಡ್ ಕಿಂಗ್‌ಡಮ್ ನ ಗ್ರೀನ್‌ವಿಚ್ ವಿಶ್ವವಿದ್ಯಾಲಯದ ಕರ್ನ ಹ್ಯಾನ್ಸನ್, ಮಾತನಾಡಿ, ಹವಾಮಾನ ಬದಲಾವಣೆ ಒಂದು ನಿಜವಾದ ಸವಾಲಾಗಿದ್ದು, ನವೀನ ಸಂಶೋಧನೆಗಳು ಮತ್ತು ಇಂತಹ ಕಾರ್ಯಾಗಾರಗಳು ಎಲ್ಲರೂ ಒಟ್ಟಾಗಿ ಸೇರಿ ಪರಿಹಾರೋಪಾಯಗಳನ್ನು ಕಂಡು ಹಿಡಿಯಲು ಒಂದು ಉತ್ತಮ ಅವಕಾಶವಾಗಿದೆ ಎಂದು ತಿಳಿಸಿದರು.

ಸಿಆರ್‌ಎಆರ್‌ಸಿ -2026 ನ ಸಂಘಟನಾ ಕಾರ್ಯದರ್ಶಿ ಡಾ.ವಿನಯ್ ಕುಮಾರ್ ಹೆಚ್ ಎಂ ಪ್ರಾಸ್ತಾವಿಕವಾಗಿ ಮಾತನಾಡಿ, ಕೃಷಿಯ ಮೇಲೆ ಹವಾಮಾನ ಬದಲಾವಣೆಯಿಂದಾಗಿ ಹೆಚ್ಚುತ್ತಿರುವ ಸವಾಲುಗಳನ್ನು ಪರಿಹರಿಸುವಲ್ಲಿ ಜಾಗತಿಕ ಪಾಲುದಾರಿಕೆಗಳನ್ನು ಬಲಪಡಿಸುವುದು ಮತ್ತು ಸಂಶೋಧನಾ ಸಾಮರ್ಥ್ಯಗಳನ್ನು ಹೆಚ್ಚಿಸುವುದು ಕಾರ್ಯಾಗಾರದ ಗುರಿಯಾಗಿದೆ. ಈ ಕಾರ್ಯಕ್ರಮವು ತಜ್ಞರ ಉಪನ್ಯಾಸಗಳು, ಪ್ರಾಯೋಗಿಕ ತರಬೇತಿ ಅವಧಿಗಳು, ಪ್ರಸ್ತಾವನೆ ಅಭಿವೃದ್ಧಿ ಕಾರ್ಯಾಗಾರಗಳು, ಕ್ಷೇತ್ರ ಮಾನ್ಯತೆ ಮತ್ತು ಬ್ರಿಟಿಷ್ ಕೌನ್ಸಿಲ್, ಐಸಿಎಸ್‌ಎಸ್‌ಆರ್, ಡಿಎಸ್‌ಟಿ, ಐಸಿಎಆರ್, ಎಎನ್‌ಆರ್‌ಎಫ್ ಮತ್ತು ವಿಜಿಎಸ್‌ಟಿ ಸೇರಿದಂತೆ ಪ್ರಮುಖ ಹಣಕಾಸು ಸಂಸ್ಥೆಗಳೊAದಿಗೆ ಸಂವಹನಗಳನ್ನು ಒಳಗೊಂಡಿರುತ್ತದೆ. ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಯುವ ಸಂಶೋಧಕರು, ವಿಜ್ಞಾನಿಗಳು ಮತ್ತು ತಜ್ಞರನ್ನು ಒಟ್ಟುಗೂಡಿಸುವ ಉದ್ದೇಶದಿಂದ ಯುನೈಟೆಡ್ ಕಿಂಗ್‌ಡಮ್‌ನ ಗ್ರೀನ್‌ವಿಚ್ ವಿಶ್ವವಿದ್ಯಾಲಯದ ನೈಸರ್ಗಿಕ ಸಂಪನ್ಮೂಲ ಸಂಸ್ಥೆಯ ಸಹಯೋಗದೊಂದಿಗೆ ಅಂತರರಾಷ್ಟ್ರೀಯ ವಿಜ್ಞಾನ ಪಾಲುದಾರಿಕೆ ನಿಧಿ (ISPಈ-ಬ್ರಿಟಿಷ್ ಕೌನ್ಸಿಲ್) ಮತ್ತು ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ ಜಂಟಿಯಾಗಿ ಈ ಕಾರ್ಯಾಗಾರವನ್ನು ಆಯೋಜಿಸಿವೆ. ಒಟ್ಟು ಐದು ದಿನಗಳ ಈ ಕಾರ್ಯಗಾರದಲ್ಲಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ ನಿಂದ ವಿಜ್ಞಾನಿಗಳು ಭಾಗವಹಿಸಲಿದ್ದು, ಹವಾಮಾನ-ನಿರೋಧಕ ಕೃಷಿ ನಾವೀನ್ಯತೆಗಳು, ಇಂಗಾಲ ಕೃಷಿ, ಕೃಷಿ ಹವಾಮಾನಶಾಸ್ತ್ರ, ಸುಸ್ಥಿರ ತಂತ್ರಜ್ಞಾನಗಳು ಮತ್ತು ಅಂತರರಾಷ್ಟ್ರೀಯ ಸಹಯೋಗದ ಮೇಲೆ ದೃಷ್ಟಿಕರಿಸಲಾಗಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಹಿರಿಯ ಗಣ್ಯರು ಮುಖ್ಯ ಭಾಷಣಗಳನ್ನು ನೀಡಲಿದ್ದಾರೆ ಎಂದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ ಜಗದೀಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಭಾರತ ಬ್ರಿಟಿಷ್ ಕೌನ್ಸಿಲ್‌ನ ಕಾರ್ಯಕ್ರಮಗಳು ಮತ್ತು ಪಾಲುದಾರಿಕೆಗಳ ಮುಖ್ಯಸ್ಥ ಡಾ. ರಾಜೇಂದ್ರ ತ್ರಿಪಾಠಿ, ಯುನೈಟೆಡ್ ಕಿಂಗ್‌ಡಮ್ ನ ಗ್ರೀನ್‌ವಿಚ್ ವಿಶ್ವವಿದ್ಯಾಲಯದ ಡಾ. ಲೂಸಿ ಬುಷಿ, ಕೆಎಸ್‌ಎನ್‌ಯುಎಹೆಚ್ ಸಂಶೋಧನಾ ಸÀಹ ನಿರ್ದೇಶಕ ಡಾ. ಪ್ರದೀಪ್ ಎಸ್, ಆಡಳಿತ ಮಂಡಳಿ ಸದಸ್ಯರಾದ ಡಾ. ಟಿ ಕೆ ಬಸವರಾಜ್ ಪ್ರಭು, ಡಾ.ಬಿ.ಕೆ.ಕುಮಾರಸ್ವಾಮಿ, ದೇವಿಕುಮಾರ್, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ.ಬಿ.ಎಂ.ದುಶ್ಯAತ್ ಕುಮಾರ್ ಸ್ವಾಗತಿಸಿದರು.

Integrated projects are necessary for climate resilient agriculture: Dr. P. Chandrashekar