KPCLನ ನೇಮಕಾತಿ ಪರೀಕ್ಷೆ ಫಲಿತಾಂಶ ಪ್ರಕಟ

kea exam
kea exam

ಬೆಂಗಳೂರು : ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಮರು ಪರೀಕ್ಷೆ ನಡೆಸಿತ್ತು, ಅದರ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ.

ಹಿಂದೆ ನಡೆಸಲಾಗಿದ್ದ ನೇಮಕಾತಿ ಪರೀಕ್ಷೆಯ ಫಲಿತಾಂಶಗಳನ್ನು ಸುಪ್ರೀಂ ಕೋರ್ಟ್‌ ಆದೇಶದಂತೆ ರದ್ದು ಮಾಡಲಾಗಿತ್ತು.

ಇದನ್ನು ಮಿಸ್‌ ಮಾಡದೇ ಓದಿ : KSRTC ಪ್ರಯಾಣಿಕರ ಸುರಕ್ಷತೆ ಹಲವಾರು ಕ್ರಮಗಳು ಹೀಗಿದೆ

ಇದನ್ನು ಮಿಸ್‌ ಮಾಡದೇ ಓದಿ : ದೋಷದ ನಿವೃತ್ತಿಗಾಗಿ ಪ್ರತ್ಯೇಕ ಪ್ರತ್ಯೇಕವಾಗಿ ಗ್ರಹಗಳನ್ನು ಸ್ತುತಿಸುವ ಸ್ತೋತ್ರಗಳೂ ಹೀಗಿವೆ

KPCLನ (ಕರ್ನಾಟಕ ವಿದ್ಯುತ್ ನಿಗಮ) ಒಟ್ಟು 622 ಹುದ್ದೆಗಳ ನೇಮಕಾತಿ ಸಂಬಂಧ ಡಿ.27 ಮತ್ತು 28ರಂದು ನಡೆದ ಮರು ಪರೀಕ್ಷೆಯ ಅಂತಿಮ ಫಲಿತಾಂಶವನ್ನು KEA ಪ್ರಕಟಿಸಿದೆ. ಶೀಘ್ರದಲ್ಲೇ ಅಭ್ಯರ್ಥಿಗಳು ಪಡೆದ ಅಂಕಗಳ ವಿವರ ಸಮೇತ ಪೂರ್ಣ ಪಟ್ಟಿಯನ್ನು ಕೆಪಿಸಿಎಲ್ ಗೆ ಹಸ್ತಾಂತರ ಮಾಡಲಾಗುತ್ತದೆ.

ತಾತ್ಕಾಲಿಕ ಫಲಿತಾಂಶಕ್ಕೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗಿದೆ.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಮರು ಪರೀಕ್ಷೆ ನಡೆಸಲಾಯಿತು. ಎಂಟು ದಿನಗಳಲ್ಲಿ ತಾತ್ಕಾಲಿಕ ಹಾಗೂ ಹತ್ತು ದಿನಗಳಲ್ಲಿ ಅಂತಿಮ ಫಲಿತಾಂಶವನ್ನು KEA ಪ್ರಕಟಿಸಿ, ದಾಖಲೆ ಬರೆದಿದೆ ಅಂತ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌. ಪ್ರಸನ್ನ ಹೇಳಿದ್ದಾರೆ.

ದಯವಿಟ್ಟು ಗಮನಿಸಿ: ಕನ್ನಡನಾಡು ತನ್ನ ಓದುಗರಿಗೆ ನಿಖರವಾದ ಮತ್ತು ಅಧಿಕೃತ ಮಾಹಿತಿಗಳನ್ನು ಮಾತ್ರ ಪ್ರಕಟಿಸುತ್ತದೆ. ಇಲ್ಲಿ ನಾವು ಯಾವುದೇ ಅನಧಿಕೃತ ಮತ್ತು ಸುಳ್ಳು ಮಾಹಿತಿಯನ್ನು ಬಿತ್ತರಿಸುವುದಿಲ್ಲ.

KPCL recruitment exam result declared