ಬೆಂಗಳೂರು: ಕನ್ನಡ ಪ್ರಕಾಶಕಿ ಮತ್ತು ಬರಹಗಾರ್ತಿ ಆಶಾ ರಘು (46) ಶನಿವಾರ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮ****ಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಆಶಾ ಅವರ ಮನೆಯ ಕೋಣೆಯೊಂದರಲ್ಲಿ ನೇ****ಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಬಾಗಿಲು ಒಡೆದು ನೋಡಿದಾಗ ಅವರು ಮೃತಪಟ್ಟಿರುವುದು ಕಂಡುಬಂದಿದೆ.
ಇದನ್ನು ಮಿಸ್ ಮಾಡದೇ ಓದಿ : ದತ್ತು ಪುತ್ರನಿಗೂ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ : ಹೈಕೋರ್ಟ್ ಮಹತ್ವದ ತೀರ್ಪು
ಇದನ್ನು ಮಿಸ್ ಮಾಡದೇ ಓದಿ : 2025 ರಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳು ಹೀಗಿದೆ
ಅವರ ಪತಿ ಕೆ.ಸಿ. ರಘು ಎರಡು ವರ್ಷಗಳ ಹಿಂದೆ ನಿಧನರಾದರು. ಪತಿಯ ಸಾವಿನ ನಂತರ ಆಶಾ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಸಹಜ ಸಾವಿನ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ಮಲ್ಲೇಶ್ವರಂ ಪೊಲೀಸರು ತಿಳಿಸಿದ್ದಾರೆ. ಆಶಾ ರಘು ಕಾದಂಬರಿಕಾರರಾ ಸಂಭಾಷಣೆ ಬರಹಗಾರರಾಗಿ ಮತ್ತು ಸಹಾಯಕ ನಿರ್ದೇಶಕಿಯಾಗಿಯೂ ಕೆಲಸ ಮಾಡಿದ್ದರು.

ಆಶಾ ರಘು ಅವರು ಕನ್ನಡದ ಪ್ರಮುಖ ಕಾದಂಬರಿಗಾರ್ತಿಯರಲ್ಲಿ ಒಬ್ಬರು. ಇವರು ಕೇಶವ ಅಯ್ಯಂಗಾರ್ ಹಾಗೂ ಸುಲೋಚನ ದಂಪತಿಗಳ ಹಿರಿಯ ಮಗಳಾಗಿ 1979ರ ಜೂನ್ 18 ನೇ ತಾರೀಖಿನಂದು ಬೆಂಗಳೂರಿನಲ್ಲಿ ಹುಟ್ಟಿದರು. ಇವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಉಪನ್ಯಾಸಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿರುವ ಇವರು, ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಗಳಲ್ಲಿಯೂ ಕಲಾವಿದೆಯಾಗಿ, ಸಂಭಾಷಣೆಕಾರರಾಗಿ, ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ‘ಉಪಾಸನ ಬುಕ್ಸ್’ ಎಂಬ ಪ್ರಕಾಶನ ಸಂಸ್ಥೆಯನ್ನೂ, ‘ಅರು ಕ್ರಿಯೇಶನ್ಸ್ ಎಂಬ ನಿರ್ಮಾಣ ಸಂಸ್ಥೆಯನ್ನೂ ನಡೆಸುತ್ತಿದ್ದಾರೆ.
‘ಆವರ್ತ’, ‘ಗತ’, ‘ಮಾಯೆ’, ‘ಚಿತ್ತರಂಗ’, ‘ವಕ್ಷಸ್ಥಲ’, ‘ಮಾರ್ಕೋಲು’ ಮೊದಲಾದ ಕಾದಂಬರಿಗಳನ್ನೂ, ‘ಆರನೇ ಬೆರಳು’, ‘ಕೆಂಪು ದಾಸವಾಳ’, ‘ಬೊಗಸೆಯಲ್ಲಿ ಕಥೆಗಳು’, ‘ಅಪರೂಪದ ಪುರಾಣ ಕಥೆಗಳು’ ಮೊದಲಾದ ಕಥಾಸಂಕಲನಗಳನ್ನೂ ರಚಿಸಿದ್ದಾರೆ. ‘ನೂತನ ಜಗದಾ ಬಾಗಿಲು’ ಎಂಬ ಕಥಾ ಸಂಕಲನವನ್ನು ಸಂಪಾದಿಸಿದ್ದಾರೆ. ‘ಚೂಡಾಮಣಿ’, ‘ಕ್ಷಮಾದಾನ’, ‘ಬಂಗಾರದ ಪಂಜರ ಮತ್ತು ಇತರ ಮಕ್ಕಳ ನಾಟಕಗಳು’ ‘ಪೂತನಿ ಮತ್ತಿತರ ನಾಟಕಗಳು’ ಮೊದಲಾದ ನಾಟಕ ಕೃತಿಗಳನ್ನು ರಚಿಸಿದ್ದಾರೆ. ಇವರ ‘ಆವರ್ತ’ ಕಾದಂಬರಿಯ ಕುರಿತ ಕೃತಿ ‘ಆವರ್ತ-ಮಂಥನ’ ಕೂಡಾ ಪ್ರಕಟಗೊಂಡಿದೆ.
Kannada novelist and publisher Asha Raghu is no more.













Follow Me