ಅಸಮಾನತೆಯಿರುವ ಸಮಾಜದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

Siddaramaiah

ಬೆಂಗಳೂರು: ಅಸಮಾನತೆಯಿರುವ ಸಮಾಜದಲ್ಲಿ ಬಡವ, ಬಲ್ಲಿದ ಎನ್ನದೇ ಎಲ್ಲರನ್ನೂ ಸಮಾನವಾಗಿ ಕಾಣಬೇಕು . ಸಮಾನತೆ, ನ್ಯಾಯ ಒದಗಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಅಭಿಯೋಜನಾಧಿಕಾರಿಗಳ ಸಂಘದ ವತಿಯಿಂದ KEB ಇಂಜಿನಿಯರ್ ಅಸೋಸಿಯೇಷನ್ ರಜತ ಮಹೋತ್ಸವ ದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರ ಹಾಗೂ 17 ನೇ ರಾಜ್ಯ ಮಟ್ಟದ ಸಮ್ಮೇಳನ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಇದನ್ನು ಮಿಸ್‌ ಮಾಡದೇ ಓದಿ : ಓದುಗರೇ : ಸರ್ಕಾರದ `ಸೌಲಭ್ಯ’ ಪಡೆಯಲು ನಿಮ್ಮ ಬಳಿ ಇರಲೇಬೇಕಾದ 4 `ಕಾರ್ಡ್’ ಗಳು ಇವು

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : `ಚಹಾ’ ಜೊತೆಗೆ ಅಪ್ಪಿತಪ್ಪಿಯೂ ಈ ಆಹಾರಗಳನ್ನು ತಿನ್ನಲೇಬಾರದು.!

ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು : ಅಭಿಯೋಜಕರು ನ್ಯಾಯ ಸಂರಕ್ಷಕರು. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಇವೆಲ್ಲವೂ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ ಸಾಧ್ಯ. ಸಮಾಜದ ಜನರ ಹಿತ ಕಾಪಾಡುವುದು ನಮ್ಮೆಲ್ಲರ ಕೆಲಸ. ನಾಗರಿಕ ಸುರಕ್ಷಾ ಸಂಹಿತೆಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಕಾಯ್ದೆಯ ಸೆಕ್ಷನ್ 8 ಮತ್ತು 9 ರ ಪ್ರಕಾರ ಅಭಿಯೋಜಕರನ್ನು ವಿಂಗಡಿಸಿ, ಕರ್ತವ್ಯಗಳನ್ನು ಹೇಳಿದ್ದಾರೆ. ಆರೋಪಿಗಳ ಹಕ್ಕುಗಳನ್ನು ಸಂರಕ್ಷಿಸಬೇಕೆಂದು ನಿಯಮ ರೂಪಿಸಿದೆ. ನೂರು ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಂಡರೂ, ಒಬ್ಬ ನಿರಪರಾಧಿಗೆ ಶಿಕ್ಷೆಯಾಗಬಾರದು ಎಂದರು.

Siddaramaiah
Image credit: https://www.facebook.com/Siddaramaiah.Official

ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆ ಅಗತ್ಯ : ಆರೋಪಿಗಳ ಪರವಾಗಿರುವ ಸಾಕ್ಷ್ಯಾಧಾರಗಳನ್ನೂ ನ್ಯಾಯಾಲಯದ ಗಮನಕ್ಕೆ ತರುವುದು ಅಭಿಯೋಜಕರ ಆದ್ಯ ಕರ್ತವ್ಯ. ತನಿಖಾಧಿಕಾರಿಗಳ ಜೊತೆ ಮಾತನಾಡುವುದು, ಸಾಕ್ಷಿಗಳ ವಿಚಾರಣೆ, ಪಾಟಿ ಸವಾಲು ಮಾಡುವಾಗ ಎಚ್ಚರಿಕೆಯಿಂದ ಮಾಡಿದರೆ ಶಿಕ್ಷೆ ಪ್ರಮಾಣ ಹೆಚ್ಚಾಗಲು ಸಾಧ್ಯ ಎಂದರು.

ಶಿಕ್ಷೆ ಪ್ರಮಾಣದರದಲ್ಲಿ ಕರ್ನಾಟಕಕ್ಕೆ 22 ನೇ ಸ್ಥಾನ : ಎನ್.ಸಿ.ಆರ್.ಬಿ ವರದಿ ಪ್ರಕಾರ ಶಿಕ್ಷೆ ಪ್ರಮಾಣ ದರದಲ್ಲಿ ಕರ್ನಾಟಕ, ಬಿಹಾರ ಮತ್ತು ರಾಜಸ್ಥಾನ 22 ನೇ ಸ್ಥಾನದಲ್ಲಿದೆ. ಕೇರಳದಲ್ಲಿ 87% ರಷ್ಟಿದೆ., ಮಿಜೋರಾಂ 92%, ಗುಜರಾತ್ ಮತ್ತು ತೆಲಂಗಾಣ 57%, , ಉತ್ತರ ಪ್ರದೇಶದಲ್ಲಿ 72%, ದೆಹಲಿ 89% ರಷ್ಟಿದೆ. ನಾವು ಕೇರಳ ರಾಜ್ಯದೊಂದಿಗೆ ಹೋಲಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಕಿವಿ ಮಾತು ಹೇಳಿದರು.

ನ್ಯಾಯ ಎತ್ತಿ ಹಿಡಿಯುವ ಪ್ರಯತ್ನವನ್ನು ಅಭಿಯೋಜಕರು ಮಾಡಬೇಕು : ಸಮಸ್ಯೆಗಳ ಹೊರತಾಗಿಯೂ ನ್ಯಾಯ ಒದಗಿಸಬೇಕು. ಸೈಬರ್ ಅಪರಾಧಗಳು, ಆರ್ಥಿಕ , ಅಪರಾಧಗಳು ಶುರುವಾಗಿದ್ದು ಇದಕ್ಕೆ ತರಬೇತಿ ಅತ್ಯಂತ ಅವಶ್ಯಕ. ಅಭಿಯೋಜಕರು ನಿರಂತರ ಅಧ್ಯಯನ ಮಾಡಬೇಕು ಎಂದರು.

ಅಭಿಯೋಜಕರ ಅಕಾಡೆಮಿ ಸ್ಥಾಪನೆಗೆ ಭರವಸೆ : ಪ್ರತಿ ವರ್ಷವೂ ಸಮ್ಮೇಳನಗಳ ಜರುಗಬೇಕು ಎಂದ ಮುಖ್ಯಮಂತ್ರಿಗಳು ಅಭಿಯೋಜಕರ ಅಕಾಡೆಮಿ ಸ್ಥಾಪಿಸಿ ಅನುದಾನವನ್ನೂ ನೀಡುವ ಭರವಸೆ ನೀಡಿದ ಮುಖ್ಯಮಂತ್ರಿಗಳು, ಬೇಡಿಕೆಗಳನ್ನು ಪರಿಶೀಲಿಸಲಾಗುವುದು ಎಂಬ ಆಶ್ವಾಸನೆಯಿತ್ತರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ ಪಾಟೀಲ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಚ್‌.ಪಿ.ಸಂದೇಶ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಇಲಾಖೆ ಕಾರ್ಯದರ್ಶಿ ತುಷಾರ್ ಗಿರಿ, ಪೊಲೀಸ್ ಮಹಾ ನಿರ್ದೇಶಕರಾದ ಡಾ: ಎಂ. ಎ.ಸಲೀಂ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನಿರ್ದೇಶಕರಾದ ಅಂಜಲಿ ದೇವಿ ರಾಜ್ಯ ಅಭಿಯೋಜನಾ ಅಧಿಕಾರಿಗಳ ಸಂಘದ ಅಧ್ಯಕ್ಷ ಅಶ್ವಥನಾರಾಯಣ್,ಕಾರ್ಯದರ್ಶಿ ಸವಿತಾ ಮೊದಲಾದವರು ಉಪಸ್ಥಿತರಿದ್ದರು.

In an unequal society, everyone should be treated equally: Chief Minister Siddaramaiah