ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ : ಹೆಸರು ನೋಂದಣಿಗೆ ಆಹ್ವಾನ

open university mysore
open university mysore

ಬಳ್ಳಾರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್, ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಜ.17 ರೊಳಗಾಗಿ ಬೆಳಿಗ್ಗೆ 10 ರಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ.0821-2515944 ಗೆ ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವÀ ಪ್ರೊ.ನವೀನ್ ಕುಮಾರ್ ಎಸ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇದನ್ನು ಮಿಸ್‌ ಮಾಡದೇ ಓದಿ : ಹಸಿವು ಮುಕ್ತ ಕರ್ನಾಟಕ ನಮ್ಮ ಕನಸು : ಎಸ್.ಮಧು ಬಂಗಾರಪ್ಪ

ಸ್ವಾಮಿ ವಿವೇಕಾನಂದ ಯುವ ಶಕ್ತಿ-ವೀರ ಸನ್ಯಾಸಿ : ಎಸ್ ಎನ್ ಚನ್ನಬಸಪ್ಪ

ಬಳ್ಳಾರಿ : ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ಸುತ್ತ-ಮುತ್ತ ನಿರ್ಬಂಧ

ಬಳ್ಳಾರಿ: ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ಜ.12 ರಿಂದ 20 ವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023 ರ ಕಲಂ 163 ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಭಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

District Collector Nagendra Prasad.K A
District Collector Nagendra Prasad.K A

ಪರೀಕ್ಷಾ ಕೇಂದ್ರಗಳ ಸುತ್ತಲೂ ಇರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲು ಆದೇಶಿಸಿದ್ದು, ಆ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಈ ಆದೇಶವು ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ