ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Application Invitation
Application Invitation

ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01.01.2024 ರಿಂದ 31.12.2024) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಅಧಿಕೃತ ಜಾಲತಾಣ https://sevasindhu.karnataka.gov.in ಮೂಲಕ ನಿಗದಿತ ದಿನಾಂಕದೊಳಗೆ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಲು 2026 ರ ಜನವರಿ 31 ಕೊನೆಯ ದಿನಾಂಕವಾಗಿದೆ.

ಇದನ್ನು ಮಿಸ್‌ ಮಾಡದೇ ಓದಿ :  ರಾಜ್ಯದ `ವಿವಿಧ ಅಭಿವೃದ್ಧಿ ನಿಗಮದ ಯೋಜನೆ’ಗಳಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

ಇದನ್ನು ಮಿಸ್‌ ಮಾಡದೇ ಓದಿ : ಈ ದಿನ ನಿಮಗೆ ಸಿಗಲಿದೆ ‘ಇಂದಿರಾ ಕಿಟ್’, ಏನೆಲ್ಲಾ ಸಾಮಗ್ರಿ ಇರಲಿದೆ, ಇಲ್ಲಿದೆ ಮಾಹಿತಿ

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಇಲಾಖೆಯ ಸಹಾಯವಾಣಿ ಸಂಖ್ಯೆ: 155265 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Applications invited for incentive grants for Scheduled Caste and Scheduled Tribe athletes who win medals in sports events