ಬಳ್ಳಾರಿ : ಜಿಲ್ಲಾ ಕೇಂದ್ರದಲ್ಲಿ ಜನವರಿ 26ರಂದು ಶಿಷ್ಟಾಚಾರದಂತೆ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ದತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣರಾಜ್ಯೋತ್ಸವದ ಮುಖ್ಯ ಕಾರ್ಯಕ್ರಮವು ನಗರದ ಬಿಎಂಸಿಆರ್ಸಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ಅಂದು ಬೆಳಿಗ್ಗೆ 9 ಗಂಟೆಗೆ ಹಜ್ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರು ಧ್ವಜಾರೋಹಣಾ ನೆರವೇರಿಸುವರು. ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯ ಭಾಗವಹಿಸಬೇಕು ಎಂದು ಸೂಚಿಸಿದರು.ಶಿಷ್ಠಾಚಾರದ ನಿಯಮಗಳಂತೆ ಗಣರಾಜ್ಯೋತ್ಸವ ಸಮಾರಂಭದ ಆಹ್ವಾನ ಪತ್ರಿಕೆ ಮುದ್ರಿಸಿ, ಆಹ್ವಾನ ಪತ್ರಿಕೆಗಳನ್ನು ಜನಪ್ರತಿನಿಧಿಗಳಿಗೆ, ಗಣ್ಯರಿಗೆ ವಿತರಿಸಲು ಕ್ರಮವಹಿಸಬೇಕು ಎಂದರು.
ಗಣರಾಜ್ಯೋತ್ಸವ ಆಚರಣೆಗೆ ಸಂಬAಧಿಸಿದAತೆ ಸ್ವಾಗತ, ಶಿಷ್ಠಾಚಾರ, ಆಹ್ವಾನ ಪತ್ರಿಕೆ ಹಾಗೂ ವೇದಿಕೆ ಸಮಿತಿ, ಸನ್ಮಾನ, ಪೆರೇಡ್ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಗಣರಾಜ್ಯೋತ್ಸವವನ್ನು ಆಚರಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಿದರು.
ಕಾರ್ಯಕ್ರಮವು ಅಚ್ಚುಕಟ್ಟಾಗಿ ಶಿಷ್ಟಾಚಾರದಂತೆ ನಡೆಯುವಂತಾಗಬೇಕು. ಶಿಸ್ತುಬದ್ಧವಾಗಿ ವೇದಿಕೆ ನಿರ್ಮಾಣವಾಗಬೇಕು. ಕ್ರೀಡಾಂಗಣದಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಮೊಬೈಲ್ ಶೌಚಾಲಯ ಸೇರಿದಂತೆ ನೀರನ್ನು ಸಿಂಪಡಿಸಿ ಧೂಳು ಆಗದಂತೆ ನೋಡಿಕೊಳ್ಳಬೇಕು. ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.
ಅದೇರೀತಿಯಾಗಿ ಎಲ್ಲಾ ಸರ್ಕಾರಿ ಕಚೇರಿಗಳಿಗೂ ಸಹ ದೀಪಾಲಂಕಾರ ಮಾಡಬೇಕು. ನಗರದ ಏಕಾಶಿಲಾ ಬೆಟ್ಟಕ್ಕೂ ವಿದ್ಯುತ್ ದೀಪಾಲಂಕಾರ ಕೈಗೊಳ್ಳಬೇಕು. ಇದಕ್ಕೆ ನಿರಂತರ ವಿದ್ಯುತ್ ವ್ಯವಸ್ಥೆ ಇರುವಂತೆ ಜೆಸ್ಕಾಂ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅರ್ಹರನ್ನು ಸನ್ಮಾನಿಸಲು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಅರ್ಜಿ ಸ್ವೀಕಾರ ಮುಖಾಂತರ ಆಯ್ಕೆ ಮಾಡಬೇಕು ಎಂದು ಸೂಚಿಸಿದರು.

ಧ್ವಜಾರೋಹಣ ಪ್ರಯುಕ್ತ ಪಥ ಸಂಚಲನವು ಅಚ್ಚುಕಟ್ಟಾಗಿ ನಡೆಯಬೇಕು. ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಸ್ಕೌಟ್ಸ್ ಮತ್ತು ಗೈಡ್ಸ್, ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ಕವಾಯತು ತಂಡಗಳನ್ನು ರಚಿಸಬೇಕು. ಪೂರ್ವತಯಾರಿ ನಡೆಸಬೇಕು. ಕುಡಿಯುವ ನೀರು, ಲಘು ಉಪಾಹಾರ ವ್ಯವಸ್ಥೆ ಮಾಡಬೇಕು. ನುರಿತ ವೈದ್ಯರನ್ನು ಒಳಗೊಂಡ ಚಿಕಿತ್ಸಾ ಆಂಬುಲೆನ್ಸ್, ಅಗ್ನಿಶಾಮಕ ವಾಹನ, ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ಜನಾಕರ್ಷಣಿಯವಾಗಿ ದೇಶಭಕ್ತಿ ಬಿಂಬಿಸುವ ಕನ್ನಡ ಹಾಡುಗಳಿಗೆ ಹೆಚ್ಚಿನ ಆದ್ಯತೆ ನೀಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಿತಗೊಳಿಸಬೇಕು ಎಂದು ಜಿಲ್ಲಾಧಿಕಾರಿಯವರು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಅಂದು ಸಂಜೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ದೇಶಪ್ರೇಮ ಪ್ರಸ್ತುತಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಬಾವುಟಗಳನ್ನು ಬಿಸಾಡುವಂತಿಲ್ಲ. ಈ ಕುರಿತು ಶಾಲಾ ಮಕ್ಕಳಿಗೆ ಅರಿವು ಮೂಡಿಸಬೇಕು ಮತ್ತು ವಾಹನಗಳಿಗೂ ಸಹ ತ್ರಿವರ್ಣ ಧ್ವಜವನ್ನು ಕಟ್ಟುವಂತಿಲ್ಲ. ಈ ಕುರಿತು ಸಂಬAಧಿಸಿದ ಅಧಿಕಾರಿಗಳು ಅರಿವು ಜಾಗೃತಿ ನೀಡಬೇಕು ಎಂದರು.
ಬ್ಯಾನರ್ ಅಳವಡಿಕೆಗೆ ಪೂರ್ವಾನುಮತಿ ಕಡ್ಡಾಯ: ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ಶುಭಾಶಯ ಕೋರುವ ಬ್ಯಾನರ್ ಗಳನ್ನು ಅಳವಡಿಸುವ ಅವಕಾಶವಿದ್ದು, ಇದಕ್ಕೆ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರ ಸ್ಥಳೀಯ-ಸಂಸ್ಥೆಗಳ ಮುಖ್ಯಾಧಿಕಾರಿಗಳು ಕಡ್ಡಾಯವಾಗಿ ಪರಿಶೀಲನೆ ನಡೆಸುತ್ತಿರಬೇಕು. ಫ್ಲೆಕ್ಸ್ ಗಳಿಗೆ ಅವಕಾಶವಿಲ್ಲ. ಪರಿಸರ ಸ್ನೇಹಿ ಬ್ಯಾನರ್ ಅಳವಡಿಸಬಹುದಾಗಿದೆ. ಹಾಗಾಗಿ ಅಧಿಕಾರಿಗಳು ತಪ್ಪದೇ ಕ್ರಮವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ಡಿಎಂಎಫ್ ವಿಶೇಷ ಅಧಿಕಾರಿ ಲೋಕೇಶ್, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಭಾರತೀಯ ಸೇವಾದಳ, ಎನ್ಸಿಸಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
DC Nagendra Prasad K instructs to make necessary preparations for Republic Day celebrationscelebrations













Follow Me