ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಅಪಘಾತ ಒಂದೇ ಕುಟುಂಬದ ನಾಲ್ವರ ಸಾವು

A serious collision between a KSRTC bus and a car near Thirthahalli
A serious collision between a KSRTC bus and a car near Thirthahalli

ತೀರ್ಥಹಳ್ಳಿ : ತೀರ್ಥಹಳ್ಳಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಇನ್ ಸ್ಟಾ ಖಾತೆ ಡಿಲೀಟ್ ಮಾಡಿದ ‘Toxic’ ಟೀಸರ್ನಲ್ಲಿ ಯಶ್ ಜೊತೆಗೆ ಹಸಿ ಬಿಸಿ ದೃಶ್ಯದಲ್ಲಿ ಕಾಣಿಸಿಕೊಂಡಿದ್ದ ನಟಿ

ಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ನಾಗೇಂದ್ರ ಪ್ರಸಾದ್.ಕೆ ಸೂಚನೆ

ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಮಂಗಳವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರ. ಶೃಂಗೇರಿ ಮೂಲದ ಮೆಣಸೆ ನಿವಾಸಿಗಳಾದ ಮುಸ್ಲಿಂ ಕುಟುಂಬವೊಂದು ಚೆನ್ನಗಿರಿಯಿಂದ ಶೃಂಗೇರಿಯತ್ತ ತಮ್ಮ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬರುತ್ತಿದ್ದ ವೇಳೆಯಲ್ಲಿ ಮಂಗಳೂರಿನಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಭಾರತೀಪುರ ಕ್ರಾಸ್ ಬಳಿ ಅಪಘಾತವಾಗಿದೆ. ಘಟನೆಯಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

A serious collision between a KSRTC bus and a car near Thirthahalli
A serious collision between a KSRTC bus and a car near Thirthahalli

ಈ ದುರ್ಘಟನೆಯಲ್ಲಿ ಫಾತಿಮಾ (70), ರಿಹಾನ್ (15), ರಾಹಿಲ್ (9) ಮತ್ತು ಝಯಾನ್ (12) ಎಂಬುವವರು ಮೃತಪಟ್ಟಿದ್ದಾರೆ. ಮೃತರು ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದವರು ಎಂದು ಗುರುತಿಸಲಾಗಿದೆಕಾರಿನಲ್ಲಿದ್ದ ಝರೀನಾ (35), ರಿಹ್ಹಾ (12) ಹಾಗೂ ರಿಯಾಜ್ (35) ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

Thirthahalli Four members of the same family died in a horrific collision between a KSRTC bus and a car near Thirthahalli.