ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಪ್ರಯಾಣವನ್ನು ಇನ್ನಷ್ಟು ಸುಲಭ ಮತ್ತು ಆರಾಮದಾಯಕವಾಗಿಸಲು ಆನ್‍ಲೈನ್ ಮುಂಗಡ ಟಿಕೆಟ್ ಕಾಯ್ದಿರಿಸುವ ವ್ಯವಸ್ಥೆಯನ್ನು ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನು ಮಿಸ್ ಮಾಡದೇ ಓದಿ : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ 2026ರ ‘ಗಳಿಕೆ ರಜೆ ನಗದೀಕರಣ’ ಮಹತ್ವದ ಆದೇಶ
ಕೆಎಸ್‍ಆರ್‍ಟಿಸಿ ವೆಬ್‍ಸೈಟ್, ಮೊಬೈಲ್ ಆಪ್, ಇಲಾಖಾ ಕೌಂಟರ್‍ಗಳು ಹಾಗೂ ಫ್ರಾಂಚೈಸಿ ಕೌಂಟರ್‍ಗಳ ಜೊತೆಗೆ, ಪ್ರಯಾಣಿಕರು ಈಗ ತಮ್ಮ ಮನೆಗೆ ಸಮೀಪದಲ್ಲಿರುವ ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸಸ್ ನಿರ್ದೇಶನಾಲಯ ರವರ ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಕೇಂದ್ರಗಳಲ್ಲೂ ಕಾರ್ಯಗತಗೊಳಿಸಲಾಗಿದೆ. ಈ ಸೇವೆ ಬೆಂಗಳೂರು ನಗರದಲ್ಲಿರುವ 161 ಬೆಂಗಳೂರು-ಒನ್ ಕೇಂದ್ರಗಳಲ್ಲಿ ಹಾಗೂ ಕರ್ನಾಟಕ ರಾಜ್ಯದ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ 1021 ಕರ್ನಾಟಕ-ಒನ್ ಕೇಂದ್ರಗಳಲ್ಲಿ, ಲಭ್ಯವಿದೆ.
ಪ್ರಯಾಣಿಕರು ಈ ಸುಲಭ ಮತ್ತು ಹತ್ತಿರದ ಟಿಕೆಟ್ ಬುಕ್ಕಿಂಗ್ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ. ಟಿಕೆಟ್ ಕಾಯ್ದಿರಿಸುವಿಕೆ ಅಥವಾ ಯಾವುದೇ ಸಹಾಯಕ್ಕಾಗಿ, ಪ್ರಯಾಣಿಕರು ಕೆಎಸ್‍ಆರ್‍ಟಿಸಿ ಕರೆ ಕೇಂದ್ರವನ್ನು 080-26252625 ಅಥವಾ ಅವತಾರ್ ಸೆಲ್ 7760990034 / 7760990035 (ಬೆಳಿಗ್ಗೆ 7.00 ರಿಂದ ರಾತ್ರಿ 10.00 ಗಂಟೆವರೆಗೆ) ಅಥವಾ ಬೆಂಗಳೂರು-ಒನ್ ಕರೆ ಕೇಂದ್ರವನ್ನು 080-49203888 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2024ನೇ ಕ್ಯಾಲೆಂಡರ್ ವರ್ಷದಲ್ಲಿ (01.01.2024 ರಿಂದ 31.12.2024) ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಕ್ರೀಡಾಪಟುಗಳು ಅರ್ಜಿಗಳನ್ನು ಅಧಿಕೃತ ಜಾಲತಾಣ https://sevasindhu.karnataka.gov.in ಮೂಲಕ ನಿಗದಿತ ದಿನಾಂಕದೊಳಗೆ ಸಲ್ಲಿಸಬಹುದು. ಅರ್ಜಿಗಳನ್ನು ಸಲ್ಲಿಸಲು 2026 ರ ಜನವರಿ 31 ಕೊನೆಯ ದಿನಾಂಕವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಯ ಉಪ/ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಇಲಾಖೆಯ ಸಹಾಯವಾಣಿ ಸಂಖ್ಯೆ: 155265 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advance ticket bookings available through Bangalore One and Karnataka One centers














Follow Me