ಟಿಕೇಟ್ ಇಲ್ಲದೆ ಪ್ರಯಾಣಿಸಿದ 4353 ಪ್ರಯಾಣಿಕರಿಗೆ ದಂಡ

KSRTC

ಬೆಂಗಳೂರು: ಡಿಸೆಂಬರ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43553 ವಾಹನಗಳನ್ನು ತನಿಖೆಗೊಳಪಡಿಸಿ 4207 ಪ್ರಕರಣಗಳನ್ನು ಪತ್ತೆಹಚ್ಚಿ, 4353 ಟಿಕೇಟ್ ರಹಿತ ಪ್ರಯಾಣಿಕರಿಂದ 8,08,704/-ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ. 

ಇದನ್ನು ಮಿಸ್‌ ಮಾಡದೇ ಓದಿ : ಶ್ರೀ ಯಂತ್ರೋದ್ಧಾರಕ ಹನುಮಾನ್ ಮಹತ್ವ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ : ಮುಖ್ಯಮಂತ್ರಿ ಸಿದ್ದರಾಮಯ್ಯ

ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,14,500/- ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರುತ್ತದೆ ಎಂದು ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ತಿಳಿಸಿದ್ದಾರೆ.

KSRTC

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥಗೆ ರಾಷ್ಟ್ರೀಯ ಪ್ರಶಸ್ತಿ : ಡಿಸೆಂಬರ್ 16 ರಂದು ಗೌವರ್ನೆನ್ಸ್ ನೌ ವತಿಯಿಂದ ನವದೆಹಲಿಯ ಹೊಟೇಲ್ ಇರೋಸ್, ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 6ನೇ ಡಿಜಿಟಲ್ ಟ್ರಾನ್ಸ್ ಫಾರ್ಮೇಶನ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ Innovative Digital Health Services and Public Health Data Analytics ವಿಭಾಗದಡಿಯಲ್ಲಿ ಸಾರಿಗೆ ಸಂಜೀವಿನಿ ತಂತ್ರಾಂಶದ ಅಭಿವೃದ್ಧಿ ಹಾಗೂ ಅನುμÁ್ಠನಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿರುತ್ತದೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಮುಖ್ಯ ಗಣಕ ವ್ಯವಸ್ಥಾಪಕರಾದ ಶ್ರೀನಾಥ.ಜಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ \ ನವೀನಕುಮಾರ ತಿಪ್ಪಾ ರವರು ಸಂಸ್ಥೆಯ ಪರವಾಗಿ ಭಾಗವಹಿಸಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕೈಲಾಶ ಅಧಿಕಾರಿ, ವ್ಯವಸ್ಥಾಪಕ ನಿರ್ದೇಶಕರು, ಗೌವರ್ನೆನ್ಸ್ ನೌ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

ತಂತ್ರಾಂಶ ಅಭಿವೃದ್ಧಿ ಮತ್ತು ಅನುμÁ್ಠನಕ್ಕಾಗಿ ರಾಷ್ಟ್ರಮಟ್ಟದಲ್ಲಿ ಗಮನಾರ್ಹ ಸಾಧನೆ ತೋರಿದ ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳಿಗೆ ಕೊಡಲಾಗುವ ಈ ಪ್ರಶಸ್ತಿಯನ್ನು ಪಡೆದಿರುವುದಕ್ಕೆ ಸಂಸ್ಥೆಯ ಮಾನ್ಯ ಅಧ್ಯಕ್ಷರಾದ ಭರಮಗೌಡ (ರಾಜು) ಅ ಕಾಗೆ, ಮಾನ್ಯ ಉಪಾಧ್ಯಕ್ಷರಾದ ಸುನೀಲ್ ಹಣಮನ್ನವರ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ.ಎಂ. ಅವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ. ಈ ಪ್ರಶಸ್ತಿ ಪಡೆಯಲು ಕಾರಣರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

4353 passengers fined for travelling without tickets