ಜಿಮ್ ಫಿಟ್ನೆಸ್ ತರಬೇತಿಗೆ ಅರ್ಜಿ ಆಹ್ವಾನ

gym

ರಾಮನಗರ : 2025-26ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಯುವಜನರಿಗೆ ಅನುಷ್ಠಾನಗೊಳಿಸಲು ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಯುವ ಜನರನ್ನು ಸ್ವಾವಲಂಬಿಯಾಗಲು ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದ್ದು, ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಸ್ಥಳೀಯ ಆಸಕ್ತ ಯುವಕ/ಯುವತಿಯರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದು.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಇದನ್ನು ಮಿಸ್‌ ಮಾಡದೇ ಓದಿ : ರಾಗಿ, ಭತ್ತ ಖರೀದಿಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್

45 ದಿನಗಳ ಜಿಮ್/ಫಿಟ್ನೆಸ್ ತರಬೇತಿ ಶಿಬಿರವನ್ನು 2026ರ ಫೆಬ್ರವರಿ 1 ರಿಂದ ಮಾರ್ಚ್ 17 ರವರೆಗೆ ಆಯೋಜಿಸಲಾಗಿದ್ದು, 18 ರಿಂದ 35 ವರ್ಷದ ಎಸ್.ಎಲ್.ಎಲ್.ಸಿ ಪಾಸಾದಾವರು ಅರ್ಜಿ ಸಲ್ಲಿಸಬಹುದು. ತರಬೇತಿಯನ್ನು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

gym
gym

ಅರ್ಜಿ ಸಲ್ಲಿಸಲು ಜ.27 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ. ಇವರಿಗೆ ಖುದ್ದಾಗಿ ಭೇಟ ಮೂಲಕ ಅಥವಾ ಅಧೀಕ್ಷಕರು ದೂ.ಸಂಖ್ಯೆ: 9945533431 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

25ರಂದು ಮತದಾರರ ದಿನಾಚರಣೆ : ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಜ.25ರಂದು ಬೆಳಿಗ್ಗೆ 10.45ಕ್ಕೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇಂದು ಜಿಲ್ಲಾ ಯೋಜನಾ ಸಮಿತಿ ಸಭೆ: ವಾರ್ಷಿಕ ಕರಡು ಯೋಜನೆ ಚರ್ಚಿಸುವ ಸಂಬಂಧ ಜ.22ರ ಮಧ್ಯಾಹ್ನ 1 ಗಂಟೆಗೆ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

Applications invited for gym fitness training