ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಹೈಕೋರ್ಟ್‌ನಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಮೋಟಾರು ವಾಹನ ಕಾಯ್ದೆಯಲ್ಲಿ ಬೈಕ್ ಅನ್ನು ಸಾರಿಗೆ ವಾಹನ ಎಂದು ಪರಿಗಣಿಸದಿರುವ ಕಾರಣ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ವಾದ ಮಂಡಿಸಿತ್ತು. ಇದೀಗ ಹೈಕೋರ್ಟ್ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಗ್ರೀನ್ ಸಿಗ್ನಲ್ ನೀಡಿದೆ.
ಇದನ್ನು ಮಿಸ್ ಮಾಡದೇ ಓದಿ : ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ
ಇದನ್ನು ಮಿಸ್ ಮಾಡದೇ ಓದಿ : ‘ವಸಂತ ಪಂಚಮಿ’ ಹಬ್ಬ ಎಂದು ಸರಸ್ವತಿಯನ್ನು ಆರಾಧಿಸುತ್ತಾರೆ
ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಳನ್ನು ನಿಲ್ಲಿಸಿ ಆದೇಶವನ್ನು ಹೊರಡಿಸಿತ್ತು, ಈ ಆದೇಶದ ವಿರುದ್ದ ಒಲಾ, ಊಬರ್ ಮತ್ತಿತರ ಬೈಕ್ ಟ್ಯಾಕ್ಸಿ ಅಗ್ರಿಗೇಟರ್ ಗಳು ಜೂನ್ ತಿಂಗಳಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದೇ ವೇಳೆ ಮೇಲ್ಮನವಿ ಅರ್ಜಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾ. ಸಿ.ಎಂ ಜೋಶಿ ಅವರ ವಿಭಾಗೀಯ ನ್ಯಾಯಪೀಠದ ಮುಂದೆ ಸುದೀರ್ಘವಾಗಿ ವಾದವನ್ನು ಆಲಿಸಿ ಇಂದು ಮೇಲ್ಮನವಿಯ ಬಗ್ಗೆ ಆದೇಶ ನೀಡುವುದಾಗಿ ತಿಳಿಸಿತ್ತು, ಇಂದು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳ ಭವಿಷ್ಯ ನಿರ್ಧಾರವಾಗಿದ್ದು, ಬೈಕ್ ಟ್ಯಾಕ್ಸಿ ಅನ್ನು ಆರಂಭಿಸುವುದಕ್ಕೆ ಮುಂದಾಗಲಾಗಿದೆ.

ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ರ್ಯಾಪಿಡೋ ಸೇವೆಗಳನ್ನು ನಿರ್ವಹಿಸುವ ರೊಪ್ಪೆನ್ ಟ್ರಾನ್ಸ್‌ಪೋರ್ಟೇಶನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲಾ ಸೇವೆಗಳನ್ನು ನಿರ್ವಹಿಸುವ ANI ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಮತ್ತು ಬೈಕ್ ಟ್ಯಾಕ್ಸಿ ಮಾಲೀಕರ ಕಲ್ಯಾಣ ಸಂಘ, ವಾರಿಕೃತಿ ಮಹೇಂದ್ರ ರೆಡ್ಡಿ ಮತ್ತು ಇತರ ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸುವ ಮೂಲಕ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ತೀರ್ಪು ನೀಡಿದೆ.
High Court gives green signal to bike taxis again in Karnataka