ಬಳ್ಳಾರಿ : ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಅಂತರರಾಷ್ಟ್ರೀಯ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ (01.01.2024 ರಿಂದ 31.12.2024 ರ ವರೆಗೆ ನಡೆದ) ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ಅನುಷ್ಟಾನಗೊಳಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನು ಮಿಸ್ ಮಾಡದೇ ಓದಿ : ಸೊಳ್ಳೆಯಿಂದ ಹರಡುವ ರೋಗಗಳನ್ನು ತಡೆಗಟ್ಟಲು ಸಹಕರಿಸಿ : ಡಿಹೆಚ್ಓ ಡಾ.ಯಲ್ಲಾ ರಮೇಶಬಾಬು
ಇದನ್ನು ಮಿಸ್ ಮಾಡದೇ ಓದಿ : ವಿಶ್ವದ ಏಕೈಕ ನಿಂತಿರುವ ಬಾಲಗಣಪತಿ, ಯಾರು ಕಂಡರಿಯದ ಇಡಗುಂಜಿ ಕ್ಷೇತ್ರದ ವಿಶೇಷ ಮಾಹಿತಿ
ಆಸಕ್ತರು ಜಿಲ್ಲೆಯಿಂದ ಅಂತರಾಷ್ಟಿçÃಯ, ರಾಷ್ಟಿçÃಯ ಮತ್ತು ರಾಜ್ಯಮಟ್ಟದ ಅಧಿಕೃತ ಕ್ರೀಡಾ ಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು ಆನ್ ಲೈನ್ http://sevasindhu.karnataka.gov.in ಮೂಲಕ ಜ.31 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುರುಗೋಡು: ಬಾಡಿಗೆ ಕಟ್ಟಡ ಬೇಕಾಗಿದೆ : ಕುರುಗೋಡು ತಾಲ್ಲೂಕು ಕೇಂದ್ರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯವು ಕಾರ್ಯನಿರ್ವಹಿಸುತ್ತಿದ್ದು, ಕಟ್ಟಡ ಶಿಥಿಲಾವಸ್ಥೆಯಲ್ಲಿರುವುದರಿಂದ ವಿದ್ಯಾರ್ಥಿನಿಲಯದ ನಿರ್ವಹಣೆಗಾಗಿ ಲೋಕೋಪಯೋಗಿ ಇಲಾಖೆ ನಿಗದಿಪಡಿಸುವ ಬಾಡಿಗೆ ಅನುಸಾರವಾಗಿ ಕಟ್ಟಡವನ್ನು ಬಾಡಿಗೆಗೆ ನೀಡಲು ಇಚ್ಚಿಸುವ ಕಟ್ಟಡಗಳ ಮಾಲೀಕರು ಇದ್ದಲ್ಲಿ ಸಂಪರ್ಕಿಸಬಹುದು.
ನಗರದ ಕಂಟೋನ್ಮೆಂಟ್ ಪ್ರದೇಶದ ಓ.ಪಿ.ಸರ್ಕಲ್ ಎಲ್ಎಲ್ಸಿ ಕಾಲೋನಿ ಹತ್ತಿರದ ಡಿಸ್ನಿ ಫಂಕ್ಷನ್ ಹಾಲ್ ಎದುರುಗಡೆಯ 1ನೇ ಮಹಡಿಯ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-294492 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
Applications invited for incentives for athletes