ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನಕ್ಕೆ ಆಹ್ವಾನ

doctor

ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತುಮರಿ, ಮಳೂರು ಮತ್ತು ಬ್ಯಾಕೋಡು ಉಪಕೇಂದ್ರಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗಳಿಗೆ ಫೆ. 02 ರಂದು ಬೆಳಗ್ಗೆ 10.30 ರಿಂದ ಮ. 1.30 ರವರೆಗೆ ಶಿವಮೊಗ್ಗ ಬಿ.ಹೆಚ್.ರಸ್ತೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಎನ್.ಹೆಚ್.ಎಂ. ವಿಭಾಗದಲ್ಲಿ ನಡೆಯುವ ನೇರ ಸಂದರ್ಶನ ಏರ್ಪಡಿಸಲಾಗಿದೆ.

ಇದನ್ನು ಮಿಸ್‌ ಮಾಡದೇ ಓದಿ : ಅಡಿಕೆ ಸಮೃದ್ಧಿಗಾಗಿ ಕಾಳು ಮೆಣಸಿನ ಅಂತರ ಬೆಳೆ ರಾಷ್ಟ್ರೀಯ ವಿಚಾರ ಸಂಕಿರಣ

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಆಸಕ್ತರು ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ ಹಾಗೂ ಹುದ್ದೆಗೆ ಸಂಬಂಧಪಟ್ಟ ಮೂಲ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಸಂಘದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-200337 ನ್ನು ಸಂಪರ್ಕಿಸುವುದು.

ವಿದ್ಯುತ್ ವ್ಯತ್ಯಯ : ಶಿವಮೊಗ್ಗ ನಗರ ಉಪವಿಭಾಗ 1, ಘಟಕ -2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜ. 29 ಮತ್ತು 30 ರಂದು ಬೆಳಗ್ಗೆ 10.00 ರಿಂದ ಮ. 2.00 ರವರೆಗೆ ಅಚ್ಯುತರಾವ್ ಲೇಔಟ್, ವೆಂಕಟೇಶನಗರ, ಗಾಂಧೀನಗರ, ಚನ್ನಪ್ಪ ಲೇಔಟ್, ಜೈಲ್ ರಸ್ತೆ, ಕುವೆಂಪು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Invitation for direct interview for the post of Primary Health Protection Officer