ಬೆಂಗಳೂರು : ಪರಿಶಿಷ್ಟ ಜಾತಿ/ಪರಿಶಿಷ್ಟ್ಯ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಸಣ್ಣ ಸರಕು ಸಾಗಾಣಿಕೆ ವಾಹನಗಳನ್ನು ಖರೀದಿಸಲು, ಸಾಲ ಸೌಲಭ್ಯ ಒದಗಿಸುವ ಯೋಜನೆಯನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಕ್ಕೂ ವಿಸ್ತರಿಸುವ ಬಗ್ಗೆ ಆದೇಶವನ್ನು ಹೊರಡಿಸಿದೆ.
ಇದನ್ನು ಮಿಸ್ ಮಾಡದೇ ಓದಿ : ಇಂದಿನಿಂದ ಭಾರತ ಸೇರಿದಂತೆ ಅಮೆಜಾನ್ 16,000 ಉದ್ಯೋಗ ಕಡಿತ
ಇದನ್ನು ಮಿಸ್ ಮಾಡದೇ ಓದಿ : ಭಾರತದಲ್ಲಿ ಮತ್ತೆ ಶುರುವಾಯ್ತು ನಿಫಾ ವೈರಸ್ ಭೀತಿ
ಆದೇಶದಲ್ಲಿ ಹೀಗೆ ಉಲ್ಲೇಖ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಸಾಮಾಜಿಕ ಉದ್ಯಮಶೀಲತಾ ಯೋಜನೆಯಡಿ ಸರ್ಕಾರಿ ಮತ್ತು ಖಾಸಗಿ ಬ್ಯಾಂಡೇಡ್ ಸಂಸ್ಥೆಗಳ ಸಹಯೋಗದೊಂದಿಗೆ ಆಧಾಯ ತರುವ ಆರ್ಥಿಕ ಚಟುವಟಿಕೆಗಳಿಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಪ್ರಾರಂಭಿಸಲು ಸರ್ಕಾರದಿಂದ ಗರಿಪ್ಟ್ ರೂ.10.00ಲಕ್ಷ ಆರ್ಥಿಕ ನೆರವನ್ನು ನೀಡಲು 2018- 19ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾದಂತೆ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಗಳ ಮೂಲಕ ಪ್ರಾವಾಸಿ ಟ್ಯಾಕ್ಸಿ ನೀಡಲು “ಐರಾವತ ಯೋಜನೆ” ಯನ್ನು ಮೇಲೆ ಓದಲಾದ (1)ರ ಆದೇಶದಲ್ಲಿ ಜಾರಿಗೊಳಿಸಲಾಗಿತ್ತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ ವಿವಿಧ ನಿಗಮಗಳ ಮೂಲಕ ಅನುಷ್ಠಾನಗೊಳಿಸಲಾದ ಐರಾವತ ಯೋಜನೆಯನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಕ್ಕೆ ವಿಸ್ತರಿಸಿಲ್ಲವೆಂದು ಹಾಗೂ 2020-21ನೇ ಸಾಲಿನಲ್ಲಿ ಸದರಿ ನಿಗಮದಿಂದ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪುವಾಸಿ ಟ್ಯಾಕ್ಸಿ ಜೊತೆಗೆ ಆಟೋ ಟಿಪ್ಪರ್ ಹಾಗೂ ಸರಕು ಸಾಗಾಣಿಕೆ ವಾಹನಗಳನ್ನು ನೀಡುವ ಯೋಜನೆಗೆ ರೂ.20.00ಕೋಟಿ ಅನುದಾನವನ್ನು ನಿಗಧಿಪಡಿಸಿಕೊಂಡಿದ್ದು, ಸದರಿ ಐರಾವತ ಯೋಜನೆಯನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಕ್ಕೂ ವಿಸ್ತಿರಿಸಿ ಸೂಕ್ತ ತಿದ್ದುಪಡಿ/ಮಾರ್ಪಾಡು ಆದೇಶ ಹೊರಡಿಸುವಂತೆ ಮೇಲೆ (2)ರಲ್ಲಿ ಓದಲಾದ ಪತ್ರದಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಬೆಂಗಳೂರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ನಂತರ ಐರಾವತ ಯೋಜನೆಯನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಕ್ಕೂ ವಿಸ್ತರಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಸಂಖ್ಯೆ: ಸಕಇ 409 ಎಸ್ ಡಿಸಿ 2020, ಬೆಂಗಳೂರು, DOT: 21-01-2021ಪುಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಂದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ಐರಾವತ ಯೋಜನೆಯನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಕ್ಕೂ ವಿಸ್ತರಿಸಿ ಅನುಷ್ಠಾನಗೊಳಿಸಲು ಆದೇಶಿಸಿದೆ.ಈ ಐರಾವತ ಯೋಜನೆಯನ್ನು ವಿಸ್ತರಿಸಲು ಮೇಲೆ (1)ರಲ್ಲಿ ಓದಲಾದ ಆದೇಶ ಮತ್ತು ಸೇರ್ಪಡೆ ಆದೇಶದಲ್ಲಿ ನೀಡಿರುವ ಷರತ್ತುಗಳು ಯಥಾವತ್ತಾಗಿ ಅನ್ವಯವಾಗುತ್ತವೆ. ಯಾವುದೇ ಬದಲಾವಣೆಗಳು ಇರುವುದಿಲ್ಲ. ಈ ಯೋಜನೆಯನ್ನು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲು 2020-21ನೇ ಸಾಲಿನಲ್ಲಿ ಯಾವುದೇ ಹೆಚ್ಚುವರಿ ಅನುದಾನ ನೀಡಲಾಗುವುದಿಲ್ಲ.
Car scheme – Applications invited for Rs 3 lakh subsidy for vehicle purchase