ಬೆಂಗಳೂರು: ಕರ್ನಾಟಕ ರಾಜ್ಯದ ಮಹಿಳೆಯರನ್ನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅಭಿವೃದ್ದಿಗೋಳಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳಾ ಉದ್ದಿಮೆದಾರರಿಗಾಗಿ ಗೃಹಲಕ್ಷ್ಮೀ ಡಿಜಿಟಲ್ ವೇದಿಕೆಯ ಸೌಲಭ್ಯ ಕಲ್ಪಿಸಲಾಗಿರುತ್ತದೆ.
ಜನವರಿ 9,2026ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೇಟಿಂಗ್ ಆ್ಯಪ್ಅನ್ನು ಲಾಂಚ್ ಮಾಡಲಾಗಿರುತ್ತದೆ. ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ ಆಗಲಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು. ಮಹಿಳೆಯರ ಸಬಲೀಕರಣಕ್ಕೆ ಆದ್ಯತೆ ನೀಡಿರುವ ಕಾಂಗ್ರೆಸ್ ಸರ್ಕಾರ, ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್ ಬಿಡುಗಡೆ ಮಾಡಿದೆ. ಇದರಿಂದ ಸ್ತ್ರೀಶಕ್ತಿ ಗುಂಪುಗಳು, ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಆನ್ ಲೈನ್ ನಲ್ಲಿ ಮಾರುಕಟ್ಟೆ ಅವಕಾಶ ಕಲ್ಪಿಸಿದೆ.

ಇದನ್ನು ಮಿಸ್ ಮಾಡದೇ ಓದಿ : ಗೃಹಲಕ್ಷ್ಮಿ ಹಣ ಪಡೆಯಲು ಜೀವಿತ ಪ್ರಮಾಣಪತ್ರ ಕಡ್ಡಾಯ.!
ಇದನ್ನು ಮಿಸ್ ಮಾಡದೇ ಓದಿ : ಭಾರತೀಯ ರೈಲ್ವೇ ಇಲಾಖೆಯಲ್ಲಿ 1.5 ಲಕ್ಷ ಹುದ್ದೆಗಳ ನೇಮಕಾತಿ
ಆ್ಯಪ್ನಲ್ಲಿ ಮಹಿಳಾ ಉದ್ದಿಮಿಗಳ ನೋಂದಣಿ ಕಾರ್ಯಕೈಗೊಳ್ಳಲು ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Good news for the state’s homeowners: Grihalakshmi digital marketing app launched on Feb. 9