ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್, ಹೆಸರು ನೋಂದಣಿಗೆ ಆಹ್ವಾನ

Gruha Lakshmi and lakshmi hebbalkar

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26 ನೇ ಸಾಲಿಗೆ ಮಹಿಳಾ ಉದ್ದಿಮೆದಾರರನ್ನು ನೋಂದಾಯಿಸಲು ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್ ರೂಪಿಸಿದ್ದು, ಅರ್ಹರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಆಭಿವೃದ್ಧಿಗೊಳಿಸಲು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಮಹಿಳಾ ಉದ್ಯಮಿದಾರರನ್ನಾಗಿ ಮಾಡಲು ಹಾಗೂ ಮಹಿಳೆಯರು ಉತ್ಪಾದಿಸುವ ಹಾಗೂ ತಯಾರಿಸುವ ವಿವಿಧ ವಸ್ತುಗಳಿಗೆ ಉಚಿತ ಮಾರುಕಟ್ಟೆ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಗೃಹಲಕ್ಷ್ಮಿ ಡಿಜಿಟಲ್ ವೇದಿಕೆಯ ಸೌಲಭ್ಯದಲ್ಲಿ ಕಲ್ಪಿಸಲಾಗಿದ್ದು, ಇದರ ಪೂರಕಗಾಗಿ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಆಪ್ ಅನ್ನು ಲಾಂಚ್ ಮಾಡಲಾಗಿದೆ. ಹಾಗಾಗಿ ಅರ್ಹ ಮಹಿಳಾ ಉದ್ಯಮಿಗಳು ನೋಂದಾಯಿಸಿಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ.

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

GruhaLakshmi Scheme
GruhaLakshmi Scheme

ಅರ್ಹರು: ಶಕ್ತಿ ಸ್ವಸಹಾಯ ಗುಂಪಿನ ಸದಸ್ಯರು, ಎನ್‌ಆರ್‌ಎಲ್‌ಎಂ ಫಲಾನುಭವಿಗಳು ಹಾಗೂ ಉದ್ಯಮಿಗಳು,

ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘ-ಘಟಕಗಳ ಮಹಿಳಾ ಉದ್ಯಮಿಗಳು, ರುಡ್‌ಸೆಟ್ (ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಮಹಿಳೆಯರು ಅರ್ಹರಾಗಿರುತ್ತಾರೆ.ನಿಗಮದಿಂದ ಹಾಗೂ ಸರ್ಕಾರದ ವಿವಿಧ ನಿಗಮ ಮಂಡಳಿ ಮತ್ತು ಇಲಾಖೆಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ತಾಲ್ಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ದಿಮೆದಾರರು ತಾವು ತಯಾರಿಸುವ ಆಯಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Grihalakshmi Digital Marketing App, Invitation for Name Registration