ಹಾಸನ : ಬಿಪಿಎಲ್ ಕಾರ್ಡ್‌ನಿಂದ ತೆಗೆದುಹಾಕಿರುವ ಆದಾಯ ತೆರಿಗೆದಾರರು ಮನೆ ಮತ್ತು ಬೈಕ್ ಸಾಲ ಕಟ್ಟುತ್ತಿದ್ದರೆ ಅವರಿಗೆ ಮತ್ತೆ ಬಿಪಿಎಲ್ ಕಾರ್ಡ್ ನೀಡಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಇದನ್ನು ಮಿಸ್ ಮಾಡದೇ ಓದಿ : ಹೃದಯಾಘಾತದಿಂದ ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಜೋ ಸೈಮನ್ ನಿಧನ
ದೀರ್ಘ ಕಾಲದಿಂದ ತೆರಿಗೆ ಪಾವತಿ ಮಾಡುತ್ತಿರುವವರ ಬಿಪಿಎಲ್ ಕಾರ್ಡ್‌ಗಳನ್ನು ಎ.ಪಿ.ಎಲ್‌ಗೆ ಪರಿವರ್ತಿಸಬೇಕು ಎಂದು ಸೂಚಿಸಿದ್ದಾರೆ. ನಿನ್ನೆ ಹಾಸನದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಈಗಾಗಲೇ ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತಿಸಿದ್ದರೆ ಅಗತ್ಯ ದಾಖಲೆಗಳನ್ನು ಪಡೆದು ಬಿಪಿಎಲ್ ಕಾರ್ಡ್ ನೀಡಲು ಮರು ಪರಿಶೀಲನೆ ನಡೆಸಬೇಕು. ಕುಟುಂಬದಲ್ಲಿ ಮಕ್ಕಳು ಬೇರೆ ಕಡೆ ಕೆಲಸ ಮಾಡಿಕೊಂಡು ಆದಾಯ ತೆರಿಗೆ ಪಾವತಿಸುತ್ತಿದ್ದರೆ ತಂದೆ-ತಾಯಿಗೆ ಬಿಪಿಎಲ್ ಕಾರ್ಡ್ ನೀಡಬಹುದು. ಈ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದರು.

ಮಾರ್ಚ್ ನಿಂದ ‘ಇಂದಿರಾ ಕಿಟ್’ ವಿತರಣೆ : ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರ ಇದೀಗ ಮತ್ತೊಂದು ಸಿಹಿಸುದ್ದಿ ಒಂದನ್ನು ನೀಡುತ್ತಿದ್ದು, ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.
ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸರ್ಕಾರ ರಾಜ್ಯದ ಪಡಿತರ ಚೀಟಿದಾರರಿಗೆ ಈ ಒಂದು ಇಂದಿರಾ ಕಿಟ್ ಯೋಜನೆ ಜಾರಿಗೆ ಮಾಡಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ. ಸಕ್ಕರೆ, ಬೆಳೆ, ಅಡುಗೆ ಎಣ್ಣೆ ಉಪ್ಪು ಒಳಗೊಂಡ ಈ ಒಂದು ಕಿಟ್ ವಿತರಿಸಲಾಗುತ್ತಿದ್ದು ಇದರಿಂದ ಪೌಷ್ಟಿಕ ಆಹಾರ ಸಿಗಲಿದೆ ಎಂದು ಅವರು ತಿಳಿಸಿದರು.
Good news from the state government for BPL cardholders