Sunday, December 22, 2024
Homeಕರ್ನಾಟಕಅರಿವು ಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಅರಿವು ಶೈಕ್ಷಣಿಕ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಆಸಕ್ತ ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಸಿ.ಇ.ಟಿ / ಎನ್‍.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್‍ ಹಾಗೂ ಪಿ.ಹೆಚ್‍.ಡಿ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡಲಾಗುವುದು.ಆಸಕ್ತರು ವೆಬ್‍ ಸೈಟ್‍ https://kacdc.karnataka.gov.in ನಲ್ಲಿ ಕಡ್ಡಾಯವಾಗಿ ಅರ್ಜಿಯನ್ನು ಡಿಸೆಂಬರ್ 15ರೊಳಗೆ ಸಲ್ಲಿಸಬಹುದು.

ಬೆಂಗಳೂರು ನಗರ ಜಿಲ್ಲೆ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಂದ ಆನ್‍ ಲೈನ್‍ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: HSRP Deadline Extended: ಕರ್ನಾಟಕ ವಾಹನ ಮಾಲೀಕರಿಗೆ ನ್ಯೂಸ್‌, ನವೆಂಬರ್ 30 ರವರೆಗೆ HSRP ಗಡುವು ವಿಸ್ತರಣೆ

ಆಸಕ್ತ ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಸಿ.ಇ.ಟಿ / ಎನ್‍.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್‍ ಹಾಗೂ ಪಿ.ಹೆಚ್‍.ಡಿ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡಲಾಗುವುದು.ಆಸಕ್ತರು ವೆಬ್‍ ಸೈಟ್‍ https://kacdc.karnataka.gov.in ನಲ್ಲಿ ಕಡ್ಡಾಯವಾಗಿ ಅರ್ಜಿಯನ್ನು ಡಿಸೆಂಬರ್ 15ರೊಳಗೆ ಸಲ್ಲಿಸಬಹುದು.

ಇದನ್ನೂ ಓದಿ: VAO Exam 2024: ಗ್ರಾಮಾಡಳಿತ ಅಧಿಕಾರಿ ನೇಮಕಾತಿ, ಕಡ್ಡಾಯ ಕನ್ನಡ ಪರೀಕ್ಷೆ ಕೀ ಉತ್ತರ ಪ್ರಕಟ, ಇಲ್ಲಿದೆ ಮಾಹಿತಿ…!

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು ಕಚೇರಿ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್‍ ರೋಡ್‍ , ಗಂಗಾನಗರ , ಬೆಂಗಳೂರು-32 ಅಥವಾ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ : 9448451111, ಬೆಂಗಳೂರು ಉತ್ತರ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ : 080-23539601 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

Most Popular