ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಜ್ಯೋತಿ ಬೆಳಗಿಸಿದರು ಈ ವೇಳೆ ಜೋರಾಗಿ ಉರಿಯುತ್ತಿದ್ದ ಜ್ಯೋತಿ, ಸಿಎಂ ಸಿದ್ದರಾಮಯ್ಯ ಶಲ್ಯಕ್ಕೆ ತಗುಲಿ ದೊಡ್ಡ ಅವಘಡವೊಂದು ತಪ್ಪಿದೆ.
ತಕ್ಷಣವೇ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುಂದೆ ಆಗಬಹುದಾಗಿದ್ದ ದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ. ಇಂದು ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಬೆಂಗಳೂರಿನ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ ಆಯೋಜಿಸಿರುವ ‘ಕಿತ್ತೂರು ವಿಜಯೋತ್ಸವದ ವಿಜಯ ಜ್ಯೋತಿ’ಗೆ ಚಾಲನೆ ನೀಡಿದ ವೇಳೇಯಲ್ಲಿ ಈ ಘಟನೆ ಸಂಭವಿಸಿದೆ.
ಈ ವೇಳೆ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವರಾದ ಹೆಚ್.ಕೆ ಪಾಟೀಲ್, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಶಾಸಕ ರಿಜ್ವಾನ್ ಅರ್ಷದ್, ಮಾಜಿ ಸಂಸದ ವಿ.ಎಸ್ ಉಗ್ರಪ್ಪ, ಮತ್ತಿತರರು ಹಾಜರಿದದ್ದರು.