
ಪಶ್ಚಿಮ ಏಷ್ಯಾ ಸಂಘರ್ಷ: ‘ಸಂವಾದ ಮತ್ತು ರಾಜತಾಂತ್ರಿಕತೆಯೇ ಪರಿಹಾರ’ ಎಂದ ಜೈಶಂಕರ್; ರಾಜ್ಯಸಭೆಯಲ್ಲಿ ಮಹತ್ವದ ಹೇಳಿಕೆ
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಉದ್ವಿಗ್ನತೆಯು ಭಾರತಕ್ಕೆ ತೀವ್ರ ಕಳವಳಕಾರಿ ವಿಷಯವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸೋಮವಾರ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತದಲ್ಲಿ ಮಾತನಾಡಿದ ಅವರು,








