ಬೆಂಗಳೂರು: ತಿಮ್ಮಾಪುರ್​ಗೆ ಚಡ್ಡಿ ಬಿಚ್ಚಿ ಚೆಕ್​ ಮಾಡ್ಬೇಕಿತ್ತು ಅಂತ ಅಬಕಾರಿ ಸಚಿವ ಆರ್‌ ಬಿ ತಿಮ್ಮಪುರ್‌ ಬಗ್ಗೆ ಸಂಸದ ತೇಜಸ್ವಿ ಸೂರ್ಯ ವಿವಾದತ್ಮಕ ಹೇಳಿಕೆ ನೀಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ, ಅವರು ಅಬಕಾರಿ ಸಚಿವ ಆರ್‌ ಬಿ ತಿಮ್ಮಪುರ್‌ ಹಿಂದೂಗಳೆಂದು ನೋಡಿ ಕೊಲೆ ಮಾಡಿಲ್ಲ ಅಂತ ಹೇಳಿದ್ದ ಹೇಳಿಕೆ ಸಂಬಂಧಪಟ್ಟಂತೆ ಇಂದು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, ಪಕ್ಕದ ರಾಜ್ಯದಲ್ಲಿ ಆನೆ ದಾಳಿಗೆ ಬಲಿಯಾದವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ. ಪರಿಹಾರ ನೀಡುತ್ತದೆ, ಅದೇ ನಮ್ಮ ರಾಜ್ಯದ ಜನ ...

ಬೆಂಗಳೂರು: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆ 19,20 ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಮಹತ್ವದ ಮಾಹಿತಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ನೀಡಿದ್ದಾರೆ.ಕಳೆದ ಮೂರು ತಿಂಗಳಿನಿಂದ 19,20 ನೇ ಕಂತಿನ ಹಣಕ್ಕಾಗಿ ರಾಜ್ಯದ ಮಹಿಳೆಯರು ಕಾಯುತ್ತಿರುವುದು ನಿಮಗೆಲ್ಲ ತಿಳಿದಿದೆ. ಗೃಹಲಕ್ಷ್ಮಿ ಯೋಜನೆಯ ಹಣದಿಂದ ಹಲವು ಮಂದಿ ಮಹಿಳೆಯರು ತಮ್ಮ ಜೀವನವನ್ನು ಕಟ್ಟಿಕೊಳ್ಳುತ್ತಿದ್ದು, ಹಲವು ಮಂದಿ ಹಸು, ಆಡು ಸೇರಿದಂತೆ ತಮ್ಮಜೀವನಕ್ಕಾಗಿ ಬೇಕಾಗುವ ವಸ್ತುಗಳನ್ನು ಖರೀದಿ ಮಾಡಿರುವುದು ಕೂಡ ಉಂಟು. ಈ ನಡುವೆ ಬಾಕಿ ಉಳಿದಿರುವ ಎರಡು ...

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿಯನ್ನು ನೀಡಿದ್ದು, ಅದರಂತೆ, `ಮೇ.20 ರೊಳಗೆ ಆರೋಗ್ಯ ಸಂಜೀವಿನಿ’ ನೊಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ ಸಂಜೀವಿನಿ (ಏಂSS) ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ಬಗ್ಗೆ ಹಾಗೂ ಯೋಜನೆಯಡಿ ಸರ್ಕಾರಿ ನೌಕರರ ನೋಂದಾವಣೆ ಮತ್ತು ಆಯ್ಕೆ ಕುರಿತು ಸೂಚನೆಗಳನ್ನು ನೀಡಿದೆ. ಸುತ್ತೋಲೆಯಲ್ಲಿ ಉಲ್ಲೇಖ ಮಾಡಿರುವಂತೆ, ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ...

ಬೆಂಗಳೂರು: ಕರ್ನಾಟಕದ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಅವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ. ಪ್ರಾಥಮಿಕ ಮೂಲಗಳ ಪ್ರಕಾರ ಅವರು ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನಲ್ಲಿ ವಾಸವಾಗಿದ್ದರು ಎನ್ನಲಾಗಿದ್ದು, ಅವರ ವಾಸವಿದ್ದ ಮನೆಯಲ್ಲಿಯೇ ಕೊಲೆಯಾಗಿ ಸಾವನ್ನಪ್ಪಿದ್ದಾರೆ ಅಂತ ತಿಳಿದು ಬಂದಿದೆ. ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಅಂತ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಘಟನ ಸ್ಥಳಕ್ಕೆ ಎಚ್ಎಸ್ಆರ್ ಲೇಔಟ್ ಸಿಬ್ಬಂದಿ ಭೇಟಿ ನೀಡಿದ್ದು, ಸದ್ಯ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ತಿಳಿಸಲಾಗಿದೆ. ಸದ್ಯ ಘಟನ ಸ್ಥಳಕ್ಕೆ ...