ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ದಿನದಿಂದ ದಿನಕ್ಕೆ ಹೃದಯಘಾತದ (Heart Attack) ಸಂಖ್ಯೆ ಹೆಚ್ಚಳವಾಗಿದ್ದು, ಜನತೆಯಲ್ಲಿ ಆತಂಕದ ವಾತವಾರಣವನ್ನು ನಿರ್ಮಾಣ ಮಾಡುತ್ತಿದೆ. ಇದಲ್ಲದೇ ಇಂತಹ ಸನ್ನಿವೇಶದಲ್ಲಿ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಕೂಡ ಬೇಕಾಗುತ್ತದೆ. ಈ ನಡುವೆ ರಾಜ್ಯದ ಒಂದು ಆಸ್ಪತ್ರೆ (Hospital) ಉಚಿತ ಚಿಕಿತ್ಸೆ ನೀಡುತ್ತಿದೆ ಎನ್ನುವುದು ಬಹುತೇಕರಿಗೆ ಗೊತ್ತಿಲ್ಲ. ಈ ಬಗ್ಗೆ ನಾವು ಮಾಹಿತಿಯನ್ನು ನೀಡುತ್ತಿದ್ದೇವೆ. ಮಧುಸೂದನ ಸಾಯಿ ವೈದ್ಯಕೀಯ ಹಾಗೂ ಸಂಶೋಧನಾ ಸಂಸ್ಥೆಯು ಹೃದ್ರೋಗ (heart disease) ವಿಭಾಗದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ಹೃದ್ರೋಗ ತಜ್ಞರು ಕೆಲಸ ಮಾಡುತ್ತಿದ್ದು, ...