ಬೆಳಗಾವಿ : ರಾಜ್ಯದ ವಿವಿಧ ಇಲಾಖೆಗಳಲ್ಲಿ ಹಂತ ಹಂತವಾಗಿ 1,88,037 ನ್ನು ಭರ್ತಿ ಮಾಡಲಾಗುವುದು, ಆರ್ಥಿಕ ಇಲಾಖೆ 24,300 ಹುದ್ದೆಗಳ ಭರ್ತಿಗೆ ಅನುಮೋದನೆ ದೊರಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮಾತನಾಡಿದ ಸಿಎಂ ಸಿದರಾಮಯ್ಯ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371ಜೆ ಅಡಿ ...

ಬೆಳಗಾವಿ : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಗುರುವಾರ ಸದನವನ್ನು ಮಾತನಾಡಿದ ಸಿಎಂ ಸಿದರಾಮಯ್ಯ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,84,881 ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ1,01,420 ಹುದ್ದೆಗಳು, ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಒಟ್ಟು 1,88,037 ಹುದ್ದೆಗಳು ಖಾಲಿಯಿದೆ. ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ...

ಬೆಳಗಾವಿ: ದೇವದುರ್ಗ ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿನ ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ವ್ಯಾಪ್ತಿಯಲ್ಲಿ ಸರ್ಕಾರಿ ಪ್ರೌಢಶಾಲೆ ಅವಶ್ಯಕತೆ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಅಮರಾಪುರ ಕ್ರಾಸ್ ಅಥವಾ ನವಿಲಗುಡ್ಡ ಗ್ರಾಮಕ್ಕೆ ಪ್ರೌಢಶಾಲೆಯೊಂದನ್ನು ಮಂಜೂರು ಮಾಡುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕಿ ಕರೆಮ್ಮ ನಾಯಕ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರ ಉತ್ತರಿಸಿದ ಸಚಿವರು, ಅಮರಾಪುರ ಕ್ರಾಸ್ ಮತ್ತು ನವಿಲಗುಡ್ಡ ಶಾಲೆಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಅಥವಾ ಅನುದಾನಿತ ...

ಬೆಳಗಾವಿ: ಸರ್ಕಾರ ರಾಜ್ಯದಲ್ಲಿ 2022ರಲ್ಲಿ ಒಟ್ಟು 3,30,000 ಹೆಕ್ಟೇರ್ ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶ ಇರುವುದಾಗಿ ಸರ್ವೋಚ್ಛ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು. ಇದರ ಪುನರ್ ಪರಿಶೀಲನೆ ನಡೆಸಿ ವಾಸ್ತವದಲ್ಲಿರವ ಪರಿಭಾವಿತ ಅರಣ್ಯ ಪ್ರದೇಶವನ್ನು ಗುರುತಿಸಲು ಸಮಿತಿ ರಚನೆ ಮಾಡಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳರ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರ ಉತ್ತರಿಸಿದ ಸಚಿವರು, ಅರಣ್ಯ ಇಲಾಖೆ ಜಾಗ ಗುರುತಿಸಲು ಅನುಕೂಲವಾಗುವಂತೆ ಅರಣ್ಯ ಮತ್ತು ಕಂದಾಯ ...

ಬೆಳಗಾವಿ: ರಾಜ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಪರಿಷ್ಕøತ ಪಠ್ಯಕ್ರಮದ ಅನುಸಾರ ಯಂತ್ರೋಪಕರಣಗಳನ್ನು ಖರೀದಿಸಿ ಒದಗಿಸಲು 50 ಕೋಟಿ ರೂ. ಅನುದಾನ ಒದಗಿಸಿದ್ದು, ಈಗಾಗಲೆ ಟೆಂಡರ್ ಪ್ರಕ್ರಿಯೆ ನಡೆದಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ, ಸಿರಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಐಟಿಐ ಅನ್ನು 2014-15 ರಲ್ಲಿ ಮಂಜೂರು ಮಾಡಿದ್ದು, ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾಗಿರುವ ಉಪಕರಣಗಳು ಲಭ್ಯವಿಲ್ಲದೆ ತೊಂದರೆಯಾಗಿದೆ ಎಂಬುದಾಗಿ ಸಿರಗುಪ್ಪ ...

ಬೆಳಗಾವಿ: ಸಾರ್ವಜನಿಕ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಹೊಸದಾಗಿ ಎಲ್ಲೆಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದರ ಕುರಿತು ರಾಷ್ಟ್ರೀಯ ಆರೋಗ್ಯ ನೀತಿ ಮಾನದಂಡಗಳನ್ವಯ ವೈಜ್ಞಾನಿಕವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಡಾ. ಹಿಮಾಂಶು ಭೂಷಣ್ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಅವರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರೋಗ್ಯ ಸಚಿವ ದಿನೇಶ್ ...

ಬೆಳಗಾವಿ: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ...

ಬೆಳಗಾವಿ: ಪೊಲೀಸ್ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಪಿಎಸ್‍ಐ ಹುದ್ದೆಗೆ ಅನುಭವವುಳ್ಳ ಮತ್ತು ಯುವ ಅಧಿಕಾರಿಗಳನ್ನು ಪರಿಗಣಿಸಿ ನೇರ ನೇಮಕಾತಿ ಮತ್ತು ಮುಂಬಡ್ತಿಗೆ ಶೇಕಡ 70:30 ಅನುಪಾತವನ್ನು ನಿಗದಿಪಡಿಸಲಾಗಿದ್ದು, ಈ ಅನುಪಾತ ನಿಗದಿಯು ಇಲಾಖೆಯ ಕಾರ್ಯನಿರ್ವಹಣೆ ಮತ್ತು ಆಡಳಿತಕ್ಕೆ ಪೂರಕವಾಗಿರುತ್ತದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಹೇಳಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತರ ಕಲಾಪದ ವೇಳೆ ಸದಸ್ಯರಾದ ಡಿ.ಟಿ.ಶ್ರೀನಿವಾಸ ಅವರ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸುತ್ತಾ, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪಿ.ಎಸ್.ಐ (ಸಿವಿಲ್) ಹುದ್ದೆಯು ಪ್ರಮುಖ ಹುದ್ದೆಯಾಗಿದ್ದು, ಸಂಬಂಧಪಟ್ಟ ಠಾಣಾ ವ್ಯಾಪ್ತಿಯ ಸಂಪೂರ್ಣ ...

ಬೆಳಗಾವಿ: ಪೊಲೀಸ್ ಇಲಾಖೆಯ ಎ.ಎಸ್.ಐ ಮತ್ತು ಸಿಬ್ಬಂದಿಗಳು ಪಿ.ಎಸ್.ಐ ವೃಂದದ ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಸ್ತುತ ಲಭ್ಯವಿರುವ 15 ದಿವಸಗಳ ವೇತನವನ್ನು 30 ದಿವಸಗಳ ವೇತನಕ್ಕೆ ಪರಿಷ್ಕರಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಡಿ.ಟಿ.ಶ್ರೀನಿವಾಸ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಸ್ತುತ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕೆಲವು ನಿರ್ದಿಷ್ಟ ವೃಂದದ ಸಿಬ್ಬಂದಿಗಳನ್ನೂ ಒಳಗೊಂಡಂತೆ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್-ಟೇಬಲ್ ಮತ್ತು ಹೆಡ್ ಕಾನ್ಸ್-ಟೇಬಲ್ ವೃಂದದ ...

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26 ನೇ ಸಾಲಿಗೆ ಪರಿಶಿಷ್ಟ ಜಾತಿ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ 03 ಅಭ್ಯರ್ಥಿಯನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ ರೂ 15,000ಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ...