ಶಿವಮೊಗ್ಗ: 2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ದಾಖಲಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ. 2024-25 ನೇ ಸಾಲಿನಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮೇ 6 ರಿಂದ 12 ರವರೆಗೆ ಆಯಾ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ...

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ 1.50ರಷ್ಟು ಹೆಚ್ಚಳ ಮಾಡುವುದರ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಲಾಗಿರುವಂತೆ (1) ದಿನಾಂಕ: 23.08.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 21 ಎಸ್‌ಆರ್‌ಪಿ 2024 (2) ದಿನಾಂಕ: 27.11.2024ರ ಸರ್ಕಾರಿ ಆದೇಶ ಸಂಖ್ಯೆ: ಎಫ್‌ಡಿ 43 ಎಸ್‌ಆರ್‌ಪಿ 2024 (3) ಭಾರತ ಸರ್ಕಾರದ ದಿನಾಂಕ 02.04.2025ರ ಅಧಿಕೃತ ಜ್ಞಾಪನ ಸಂಖ್ಯೆ:1/1(1)/2025- ಸರ್ಕಾರಿ ಸರ್ಕಾರದ ಆದೇಶ ಸಂಖ್ಯೆ: ಆಇ 8 ಎಸ್‌ಆರ್‌ಪಿ 2025 ಬೆಂಗಳೂರು, ದಿನಾಂಕ: 7ನೇ ...

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ನೌಕರರಿಗೆ ರಾಜ್ಯ ಸರ್ಕಾರಿ ಸಿಹಿ ಸುದ್ದಿಯನ್ನು ನೀಡಿದ್ದು, ಈ ಬಾರಿ ತುಟ್ಟಿಭತ್ಯೆಯನ್ನು ಶೇ 1.50ರಷ್ಟು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ತುಟ್ಟಿಭತ್ಯೆ ಹೆಚ್ಚಿಸಿದ್ದಾರೆ ಅಂತ ತಿಳಿದು ಬಂದಿದೆ. ಅಂದ ಹಾಗೇ ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಾಗಾಗಿ ಸರಿ ಸುಮಾರು 5.20 ಲಕ್ಷ ಸರ್ಕಾರಿ ನೌಕರರು, ನಿಗಮ, ಮಂಡಳಿಯಲ್ಲಿ ಮತ್ತು ಅನುದಾನಿತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ 3 ಲಕ್ಷ ಸಿಬ್ಬಂದಿ, 4.50 ಲಕ್ಷ ನಿವೃತ್ತ ನೌಕರರಿಗೆ ತುಟಿ ಭತ್ಯೆ ...

ಹುಬ್ಬಳ್ಳಿ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿರುವವರು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ತಿಳಿದು ಬಂದಿದೆ. ಘಟನ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವನ್ನು ತೆಗೆದುಕೊಂಡಿದ್ದಾರೆ ಆಂತ ತಿಳಿದು ಬಂದಿದೆ. ಘಟನೆ ಸಂಬಂಧ ಲಾರಿ ಡ್ರೈವರ್‌ ಜಾಗದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ಶುರು ಮಾಡಿದ್ದಾರೆ. ಇದಲ್ಲದೇ ಮೃತರು ಹುಬ್ಬಳ್ಳಿಯಿಂದ ಸಾಗರದ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. Hubballi ...

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಸಂಘವು ಮೇ 06 ರ ಮಂಗಳವಾರದAದು ಡಿ.ಸಿ.ಕಾಂಪೌAಡ್‌ನಲ್ಲಿರುವ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕ್ರೀಡಾಕೂಟದಲ್ಲಿ ವಿಜೇತರಾದ ಸರ್ಕಾರಿ ನೌಕರರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಸಮಾರಂಭದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪನವರು ನೆರವೇರಿಸಲಿದ್ದಾರೆ. ಶಾಸಕ ಎಸ್.ಎನ್.ಚನ್ನಬಸಪ್ಪನವರು ಕ್ರೀಡಾಕೂಟದ ...

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳ‌ಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನುಡಿದರು. “ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025” ಕುರಿತಂತೆ ವಿಧಾನಸೌಧದ (Vidhana Soudha) ಸಮ್ಮೇಳನ ಕೊಠಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಹೈಕೋರ್ಟ್ (High Court) ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಿದ್ದೆವು. ಪರಿಶಿಷ್ಠ ಜಾತಿಗಳಲ್ಲಿ ಒಳ ಮೀಸಲಾತಿ ಕುರಿತು ಸಮಿತಿ ...

ಕೊಪ್ಪಳ: ಸ್ಪರ್ಧಾತ್ಮಕ ಯುಗದಲ್ಲಿ ಓದಿನೊಂದಿಗೆ ಕ್ರೀಡೆಯಲ್ಲೂ ಭಾಗಿಯಾಗುವುದು ಬಹುಮುಖ್ಯ. ಜಿಲ್ಲಾಮಟ್ಟದಲ್ಲಿ ಮೊದಲ ಬಾರಿಗೆ ಚೆಸ್ ತರಬೇತಿ ಶಿಬಿರ ಹಾಗೂ ಸ್ಪರ್ಧೆ ಏರ್ಪಡಿಸಿದ್ದು ಶ್ಲಾಘನೀಯ ಎಂದು ಕೊಪ್ಪಳ ಮೀಡಿಯಾ ಕ್ಲಬ್ ಅಧ್ಯಕ್ಷರು ಹಾಗೂ ಪತ್ರಕರ್ತರ ರವೀಂದ್ರ ವಿ.ಕೆ. ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆಸ್ ತರಬೇತಿ‌ ಶಿಬಿರ ಹಾಗೂ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅನೇಕ ಕ್ರೀಡಾ ಪ್ರತಿಭೆಗಳಿವೆ. ಅವುಗಳನ್ನು ಗುರುತಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ‌ ಕ್ರೀಡಾ ಇಲಾಖೆ ಹಲವಾರು ಕ್ರೀಡಾ ಚಟುವಟಿಕೆ ಹಮ್ಮಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಮೊದಲ ಬಾರಿಗೆ ಜಿಲ್ಲೆಯಲ್ಲಿ‌ ...

ಬೆಂಗಳೂರು: ಹೊಸ ಪಡಿತರ (Ration Card |) ಚೀಟಿಗೆ ಅರ್ಜಿ ಸಲ್ಲಿಸಲು ಕೊನೆಯ ಅವಕಾಶವನ್ನು ನೀಡಲಾಗಿದ್ದು, ಮೇ.5 ಅಂದರೆ ನಾಳೆ ಮಧ್ಯಾಹ್ನ 1 ರಿಂದ 3 ರ ವರೆಗು, ahara.kar.nic.inನಲ್ಲಿ ಅಥವಾ ಸೇವಾಸಿಂಧು ಪೋರ್ಟಲ್ ಮೂಲಕ ಆರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. APL ಹಾಗೂ BPL ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025 ರಿಂದ 05-05-2025 ರವರೆಗೆ ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.ಆರ್ಹರು ಮೊಬೈಲ್, (MOBILE) (Ration Card) ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್​​ಗಳಲ್ಲಿ ...

ಬಾಗಲಕೋಟೆ: ಸಾಮೂ***ಹಿಕ ಹತ್ಯೆ, ದೊಡ್ಡ ದೊಡ್ಡ ನಾಯಕರಿಗೆ ಅಪಾ***ಯವಾಗಲಿದೆ ಅಂತ ಅರಸಿಕೇರೆಯ ಕೋಡಿಮಠದ ಸ್ವಾಮೀಜಿ (kodi mutt swamiji) ಭ**ಯಾನಕ ಭವಿಷ್ಯ ನುಡಿಸಿದ್ದಾರೆ. ಅವರು ಬಾಗಲಕೊಟೆಯಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಹಿಮಾಲಯದಲ್ಲಿ ಸುನಾಮಿ ಆದೀತು, ಅಲ್ಲಿಂದ ಬಂದು ಡೆಲ್ಲಿಗೆ ತಲುಪುತ್ತದೆ. ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ. ಜಲಬಾಧೆ ಇದೆ ಎಂದು ಅಂತ ತಿಳಿಸಿದರು. ಇನ್ನೂ ಗೌರಿಶಂಕರ ಶಿಖರ ಶಿವಾ ಎಂದೀತು, ಜಗತ್ತಿನ ಎರಡು ‌ಮೂರು ಜನ ಮಹಾನ್ ನಾಯಕರಿಗೆ ಅಪಮೃತ್ಯುವಿನ ...

ಹಾವೇರಿ: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎನ್ ಡಿ . ಪಿ ಯು ಕಾಲೇಜ್ ಆವರಣ, ಅಕ್ಕಿ ಆಲೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಿತ್ತು.ಅದೇ ಪರಿಹಾರದ ಹಣದಲ್ಲಿ ಅವರ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ...