ಬೆಳಗಾವಿ: ಕರ್ನಾಟಕವನ್ನು ಬೆಸೆಯುವ, ಉತ್ತರದಿಂದ ದಕ್ಷಿಣ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಬೀದರ್, ಚಾಮರಾಜನಗರ ವಯಾ ಕಲಬುರಗಿ ಹೆದ್ದಾರಿ ಕಲ್ಯಾಣ ಪಥ ಚತುಷ್ಪಥ ರಸ್ತೆ ನಿರ್ಮಾಣ ಕಾರ್ಯವು ಕಲ್ಯಾಣ-ಕರ್ನಾಟಕ ಪ್ರದೇಶಗಳಾದ ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ ಮತ್ತು ವಿಜಯನಗರ ಪ್ರದೇಶಗಳಲ್ಲಿ ಅನುμÁ್ಠನಗೊಳಿಸಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ರ ಕಲಾಪದ ವೇಳೆ ಪರಿಷತ್ ಸದಸ್ಯರಾದ ಶಶಿಲ್ ಜಿ. ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕಲ್ಯಾಣ ಪಥ ಯೋಜನೆಯನ್ನು ಕೆ.ಆರ್.ಆರ್.ಡಿ.ಎ ದಿಂದ ...

ಬೆಳಗಾವಿ: ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ ನೀಡಿದ್ದೇವೆ. ಕೃಷಿ ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಬಜೆಟ್ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಸದಸ್ಯ ಸಿ.ಟಿ.ರವಿ ಅವರು ಉತ್ತರ ಕರ್ನಾಟಕ ನೀರಾವರಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ಉಪ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸುತ್ತಾ, ನೀರಾವರಿ ಇಲಾಖೆಯ ವಾರ್ಷಿಕ ಬಜೆಟ್ 22 ಸಾವಿರ ಕೋಟಿ. ಇದರಲ್ಲಿ ಸುಮಾರು 5 ಸಾವಿರ ಕೋಟಿಯಷ್ಟು ...

ಬೆಳಗಾವಿ: ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲು ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ ಅವರ ಮೇಲೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರಿಗೆ ಇಲಾಖೆಯ ನೌಕರರು ನಕಲು ಸೇವಾನುಭವ ಪ್ರಮಾಣಪತ್ರ ಪಡೆದು ಸಂಜೆ ಪಾಲಿಟೆಕ್ನಿಕ್‍ನಲ್ಲಿ ಪ್ರವೇಶ ಪಡೆದು ವ್ಯಾಸಾoಗ ಮಾಡುತ್ತಿರುವುದಾಗಿ ಬಂದಿರುವ ದೂರಿನ ಕುರಿತು ವರದಿ ಸಲ್ಲಿಸುವಂತೆ ಆಯುಕ್ತರು, ಸಾರಿಗೆ ಮತ್ತು ...

ಬೆಳಗಾವಿ: ಬಸವ ವಸತಿ ಯೋಜನೆಗೆ ಈಗ ನೀಡುತ್ತಿರುವ 1.25 ಲಕ್ಷ ಸಹಾಯಧನವು ಯಾವುದಕ್ಕೂ ಸಾಕಾಗುತ್ತಿಲ್ಲ ಎನ್ನುವ ದೂರುಗಳು ಕೇಳಿ ಬರುತ್ತಲೇ ಇವೆ. ಇದು ಸರ್ಕಾರದ ಗಮನಕ್ಕೆ ಬಂದಿದ್ದು, ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಟ 3 ರಿಂದ 4 ಲಕ್ಷ ರೂ.ವರೆಗಾದರೂ ಸಹಾಯಧನ ಕೊಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ವಸತಿ, ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ತಿಳಿಸಿದರು. ವಿಧಾನ ಪರಿಷತ್ತನಲ್ಲಿಂದು ಸದಸ್ಯರಾದ ಪ್ರದೀಪ ಶೆಟ್ಟರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,ಗ್ರಾಮೀಣ ಪ್ರದೇಶಗಳಲ್ಲಿ ಮನೆ ...

ಬೆಳಗಾವಿ: ಕೇಂದ್ರದಿಂದ ರಾಜ್ಯಕ್ಕೆ ಹಂಚಿಕೆ ಮಾಡಲಾದ ಎಲೆಕ್ಟ್ರಿಕ್ ಬಸ್‍ಗಳ ಕಾರ್ಯಕ್ಷಮತೆ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು. ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾರ್ವಜನಿಕ ಸುಗಮ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್ಸುಗಳ ವ್ಯತ್ಯಯ ಉಂಟಾದಾಗ ಸಂಸ್ಥೆಯ ಡಿಸೇಲ್ ಬಸ್ಸುಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಕ್ಷಮತೆಯನ್ನು ಸಾಧಿಸದ ಅಂಶಗಳಿಗೆ ಕರಾರು ಒಪ್ಪಂದದಲ್ಲಿ ದಂಡವನ್ನು ವಿಧಿಸಲಾಗಿದೆ. ಬಸ್ಸುಗಳ ಕಾರ್ಯಕ್ಷಮತೆಯ ಬಗ್ಗೆ ಈಗಾಗಲೇ ಭಾರತ ಸರ್ಕಾರದ ಭಾರೀ ಕೈಗಾರಿಕೆಗಳ ...

ಬಳ್ಳಾರಿ: ಬಳ್ಳಾರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ನೀಡುವ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ...

ಬೆಳಗಾವಿ: ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2022-23 ರಿಂದ 2024-25ನೇ ಸಾಲಿನವರೆಗೆ ಒಟ್ಟು 13,728 ರೈತರು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೊಂದಾಯಿಸಿಕೊಂಡಿದ್ದಾರೆ. ಈ ಪೈಕಿ 945 ರೈತರಿಗೆ ವಿವಿಧ ಕಾರಣಗಳಿಂದ ಬೆಳೆ ವಿಮೆ ಪರಿಹಾರ ಜಮೆಯಾಗಿರುವುದಿಲ್ಲ. ಸಮಸ್ಯೆಗಳನ್ನು ಪರಿಹರಿಸಿ ಸರ್ಕಾರ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದುರು. ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ, ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳೆವಿಮೆ ಪರಿಹಾರ ಬಾಕಿ ಇರುವ 945 ...

ಬಳ್ಳಾರಿ: ರಾಷ್ಟ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ, ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಇದೇ ಡಿ.13 ರಂದು ಈ ವರ್ಷದ ಕೊನೆಯ ರಾಷ್ಟಿçÃಯ ಲೋಕ್ ಅದಾಲತ್ ನಡೆಯಲಿದ್ದು, ಸಾರ್ವಜನಿಕರು ಬಾಕಿ ಇರುವ ಮತ್ತು ರಾಜಿಯಾಗಬಹುದಾದಂತಹ ತಮ್ಮ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಹೇಳಿದರು. ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೊದಲನೇ ಮಹಡಿಯ ವಿಡೀಯೋ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ...

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು. ನಿಜಲಿಂಗಪ್ಪನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ ಬೇರೆ ಪಕ್ಷ ರಚಿಸಿದ್ದರು. ಭ್ರಷ್ಟಾಚಾರದ ವಿರುದ್ಧವಾಗಿದ್ದ ರಾಜಕಾರಣಿಯಾಗಿದ್ದರು ಎಂದರು. ಪ್ರಾಮಾಣಿಕ, ...

ಹಾಸನ: ಶಾಲೆಯಲ್ಲಿ 18 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಕೆ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆ ಮಾಡುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನು ಮಿಸ್‌ ಮಾಡದೇ ಓದಿ: ಇನ್ಮುಂದೆ ಈ ಮೂರು ತಿಂಗಳಿಗೊಮ್ಮೆ ಬರಲಿದೆ ಗೃಹ ಲಕ್ಷ್ಮೀ ಹಣ ಇದನ್ನು ಮಿಸ್‌ ಮಾಡದೇ ಓದಿ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ, ಘಟನೆ ಸುತ್ತ ಅನುಮಾನದ ಹುತ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೋಕ್ಸೊ ಹಾಗೂ ಬಾಲಗರ್ಭಿಣಿಯರು ಹಾಗೂ ಮಕ್ಕಳ ಸುರಕ್ಷತೆ ಕುರಿತು ...