ಕನಕಪುರ: “ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ (D.K. Shivakumar)  ಅವರು ಹೆಚ್ಚಿನ ಶಕ್ತಿ ತುಂಬಿದ್ದು, ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಮುಂದಿನ ದಿನಗಳಲ್ಲಿ ಆ ಸ್ಥಾನ ಸಿಗಲಿ” ಎಂದು ಬಾಳೆಹೊನ್ನೂರು ಶ್ರೀಮದ್‌ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಶ್ರೀಮದ್ ರಂಬಾಪುರಿ ಶ್ರೀಗಳು ಮಾತನಾಡಿದರು. “ಮೊನ್ನೆಯಷ್ಟೇ ಶಿವಕುಮಾರ್ ಅವರು ಚಾಮುಂಡಿ ಬೆಟ್ಟದಲ್ಲಿ ತಾಯಿ ದರ್ಶನ ...

ರಾಮನಗರ: ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ನೀರು ಪೂರೈಸುವ ಅತ್ಯಂತ ಮಹತ್ವಪೂರ್ಣ ಯೋಜನೆಯಾದ ಜಲಜೀವನ್ ಮಿಷನ್ ಕಾಮಗಾರಿಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಅವುಗಳನ್ನು ಪೂರ್ಣಗೊಳಿಸಲು ಅಗತ್ಯ ಕಮವಹಿಸುವಂತೆ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಅವರು ಸಂಬಂಧಿಸಿದ ಅಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಮೇ 7ರ ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರು. ಜೆಎಂಎಂ ಯೋಜನೆಯಲ್ಲಿ ಇದೂವರೆಗೆ ರಾಮನಗರ (Ramanagara) ಹಾಗೂ ...